ಯಾಜಕಕಾಂಡ 21:23 - ಕನ್ನಡ ಸಮಕಾಲಿಕ ಅನುವಾದ23 ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಆದರೆ ಅವನಿಗೆ ಕಳಂಕವಿರುವುದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಬಲಿಪೀಠದ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆದರೆ ಅವನು ತೆರೆಯ ಬಳಿಗೆ ಹೋಗಬಾರದು; ಅವನು ಯಜ್ಞವೇದಿಕೆಯ ಬಳಿಗೆ ಹೋಗಬಾರದು. ಯಾಕೆಂದರೆ ಅವನು ಅಂಗವಿಕಲನಾಗಿದ್ದಾನೆ. ಅವನು ನನ್ನ ಪರಿಶುದ್ಧ ಸ್ಥಳಗಳನ್ನು ಅಶುದ್ಧಗೊಳಿಸಬಾರದು. ಯೆಹೋವನಾದ ನಾನೇ ಆ ಸ್ಥಳಗಳನ್ನು ಪರಿಶುದ್ಧಗೊಳಿಸಿದ್ದೇನೆ.” ಅಧ್ಯಾಯವನ್ನು ನೋಡಿ |