ಯಾಜಕಕಾಂಡ 21:5 - ಕನ್ನಡ ಸಮಕಾಲಿಕ ಅನುವಾದ5 “ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಯಾಜಕರು ತಲೆ ಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಿಕೊಳ್ಳಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು. ಅಧ್ಯಾಯವನ್ನು ನೋಡಿ |
ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.