Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:6 - ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವೆ ಮಾಡುವ ದೇವರ ಹೆಸರಿಗೆ ಅಪಕೀರ್ತಿ ತರಬಾರದು. ತಮ್ಮ ದೇವರ ಆಹಾರವನ್ನು, ಅಂದರೆ ಸರ್ವೇಶ್ವರನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವುದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ದೇವರಿಗೆ ಪ್ರತಿಷ್ಠಿತರಾಗಿರಬೇಕು. ಅವರು ದೇವರ ಹೆಸರಿಗೆ ಗೌರವ ತೋರಿಸಬೇಕು. ಯಾಕೆಂದರೆ ಅವರು ಅಗ್ನಿಯ ಮೂಲಕ ಅರ್ಪಿಸಿದ ರೊಟ್ಟಿಯನ್ನು ಮತ್ತು ಕಾಣಿಕೆಗಳನ್ನು ಯೆಹೋವನಿಗೆ ತೆಗೆದುಕೊಂಡು ಹೋಗುತ್ತಾರೆ. ಆದ್ದರಿಂದ ಅವರು ಪವಿತ್ರರಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:6
20 ತಿಳಿವುಗಳ ಹೋಲಿಕೆ  

“ ‘ನಿನ್ನ ಮಕ್ಕಳಲ್ಲಿ ಯಾರನ್ನೂ ಮೋಲೆಕ್ ದೇವತೆಗೆ ಸಮರ್ಪಿಸಿ, ನಿನ್ನ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು. ನಾನು ಯೆಹೋವ ದೇವರು.


ಯಾಜಕನು ಅದನ್ನು ಬಲಿಪೀಠದ ಮೇಲೆ ಸುಡಬೇಕು. ಅದು ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಯ ಆಹಾರವಾಗಿರುವುದು.


ಆದರೆ ಕತ್ತಲೆಯೊಳಗಿದ್ದ ನಿಮ್ಮನ್ನು ಕರೆದು ತಮ್ಮ ಆಶ್ಚರ್ಯಕರವಾದ ಬೆಳಕಿಗೆ ಸೇರಿಸಿದ ದೇವರನ್ನು ಕೊಂಡಾಡುವವರಾಗುವಂತೆ ನೀವು ಆಯ್ದುಕೊಂಡ ಜನರೂ ರಾಜತನದ ಯಾಜಕರೂ ಪರಿಶುದ್ಧ ಜನಾಂಗವೂ ದೇವರ ಜನರೂ ಆಗಿದ್ದೀರಿ.


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ. ಅವಳ ಮಧ್ಯದಿಂದ ಹೊರಗೆ ಹೋಗಿರಿ. ಯೆಹೋವ ದೇವರ ದೇವಾಲಯದ ಪಾತ್ರೆಗಳನ್ನು ಹೊರುವವರೇ, ನೀವು ಶುದ್ಧರಾಗಿರಿ.


ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.


ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


“ ‘ನನ್ನ ಹೆಸರಿನಲ್ಲಿ ಸುಳ್ಳು ಪ್ರಮಾಣ ಮಾಡಬಾರದು. ನಿಮ್ಮ ದೇವರ ಹೆಸರನ್ನು ಅಗೌರವಿಸಬಾರದು. ನಾನೇ ಯೆಹೋವ ದೇವರು.


ತರುವಾಯ ಮೋಶೆಯು ಆರೋನನಿಗೆ, “ಯೆಹೋವ ದೇವರು ಹೇಳಿದ್ದು ಇದೇ. ಅದೇನೆಂದರೆ: “ ‘ನನ್ನನ್ನು ಸಮೀಪಿಸುವವರ ಮುಖಾಂತರ ನನ್ನ ಪರಿಶುದ್ಧತೆಯನ್ನು ತೋರಿಸುವೆನು ಮತ್ತು ಜನರೆಲ್ಲರ ಮುಂದೆ ನನ್ನ ಮಹಿಮೆಯನ್ನು ತೋರ್ಪಡಿಸುವೆನು,’ ” ಎಂದನು. ಆಗ ಆರೋನನು ಮಾತನಾಡದೆ ಸುಮ್ಮನಿದ್ದನು.


“ನಾನು ದೇವದರ್ಶನದ ಗುಡಾರವನ್ನೂ ಬಲಿಪೀಠವನ್ನೂ ಪರಿಶುದ್ಧ ಮಾಡುವೆನು. ಆರೋನನನ್ನೂ ಅವನ ಪುತ್ರರನ್ನೂ ನನಗೆ ಯಾಜಕ ಸೇವೆಮಾಡುವಂತೆ ಪವಿತ್ರ ಮಾಡುವೆನು.


“ಶುದ್ಧ ಬಂಗಾರದ ತಗಡನ್ನು ಮಾಡಿ ಮುದ್ರೆ ಕೆತ್ತುವ ಪ್ರಕಾರ, ಅದರಲ್ಲಿ ಹೀಗೆ ಕೆತ್ತಬೇಕು: ‘ಯೆಹೋವ ದೇವರಿಗೆ ಪರಿಶುದ್ಧ.’


ಯೆಹೋವ ದೇವರ ಸಮೀಪಕ್ಕೆ ಬರುವ ಯಾಜಕರು ಸಹ ಯೆಹೋವ ದೇವರು ಅವರನ್ನು ಸಾಯಿಸದಂತೆ ತಮ್ಮನ್ನು ಶುದ್ಧಿಮಾಡಿಕೊಳ್ಳಲಿ, ಇಲ್ಲವಾದರೆ ಅವರನ್ನೂ ನಾನು ತಟ್ಟನೆ ನಾಶಮಾಡುವೆನು,” ಎಂದರು.


“ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.


ಯಾಜಕನಾದ ಆರೋನನ ಸಂತತಿಯಲ್ಲಿ ನ್ಯೂನತೆವುಳ್ಳ ಯಾವ ಮನುಷ್ಯನೂ ಅಗ್ನಿ ಸಮರ್ಪಣೆಗಳನ್ನು ಅರ್ಪಿಸುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಬರಬಾರದು. ನ್ಯೂನತೆವುಳ್ಳವನು ತನ್ನ ದೇವರ ರೊಟ್ಟಿಯನ್ನು ಅರ್ಪಿಸುವುದಕ್ಕಾಗಿ ಸಮೀಪ ಬರಬಾರದು.


ನಾನು ಆ ಮನುಷ್ಯನಿಗೆ ವಿಮುಖನಾಗಿರುವೆನು. ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು. ಏಕೆಂದರೆ ಅವನು ನನ್ನ ಹೆಸರನ್ನು ಅಪವಿತ್ರಗೊಳಿಸುವಂತೆ ಮತ್ತು ನನ್ನ ಪವಿತ್ರ ಸ್ಥಳವನ್ನು ಅಶುದ್ಧಮಾಡುವಂತೆ ತನ್ನ ಮಕ್ಕಳನ್ನು ಮೋಲೆಕನಿಗೆ ಕೊಟ್ಟಿದ್ದಾನೆ.


ಆದರೆ ಅವನು ನ್ಯೂನತೆವುಳ್ಳವನಾದ್ದರಿಂದ ತೆರೆಯ ಒಳಗೆ ಹೋಗಬಾರದು ಹಾಗು ಯಜ್ಞವೇದಿಯ ಬಳಿಗೆ ಬರಬಾರದು. ಹೀಗೆ ಅವನು ನನ್ನ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


ಕೋರಹನಿಗೂ, ಅವನ ಸಮಸ್ತ ಸಮೂಹಕ್ಕೂ, “ಯೆಹೋವ ದೇವರು ತಮ್ಮ ಹತ್ತಿರ ಬರಮಾಡಿಕೊಳ್ಳುವ ಹಾಗೆ ತನ್ನವರು ಯಾರಾರೆಂಬುದನ್ನು ಮತ್ತು ಪರಿಶುದ್ಧ ಯಾರು ಎಂಬುದನ್ನು ನಾಳೆ ತೋರಿಸುವರು. ಅವರು ಯಾರನ್ನು ಆಯ್ದುಕೊಳ್ಳುವರೋ, ಅವರನ್ನು ಹತ್ತಿರ ಬರಮಾಡಿಕೊಳ್ಳುವರು. ನೀವು ಇದನ್ನು ಮಾಡಿರಿ:


“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುವಾಸನೆಗೋಸ್ಕರ ಅರ್ಪಿಸುವ ಅಂದರೆ, ದಹನಬಲಿಗಾಗಿ ಆಹಾರವನ್ನು ಅದರ ನೇಮಕವಾದ ಸಮಯದಲ್ಲಿ ನನಗೆ ಅರ್ಪಿಸುವಂತೆ ನೀವು ನೋಡಿಕೊಳ್ಳಿರಿ.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು