Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:15 - ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರು ಯೆಹೋವ ದೇವರಿಗೆ ಅರ್ಪಿಸುವ ಪರಿಶುದ್ಧವಾದವುಗಳನ್ನು ಅವರು ಅಪವಿತ್ರ ಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯದ ಪದಾರ್ಥಗಳನ್ನು ಯಾಜಕರು ಸಾಧಾರಣವೆಂದು ಎಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇಸ್ರಯೇಲರ ಸರ್ವೇಶ್ವರನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು ಸಾಧಾರಣವೆಂದು ಅಸಡ್ಡೆಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಇಟ್ಟ ನೈವೇದ್ಯಪದಾರ್ಥಗಳನ್ನು [ಯಾಜಕರು] ಸಾಧಾರಣವೆಂದೆಣಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲರು ಯೆಹೋವನಿಗೆ ಕೊಡುವ ಕಾಣಿಕೆಗಳು ಪರಿಶುದ್ಧವಾಗಿವೆ. ಆದ್ದರಿಂದ ಯಾಜಕರು ಆ ಪರಿಶುದ್ಧ ವಸ್ತುಗಳನ್ನು ಅಶುದ್ಧಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:15
6 ತಿಳಿವುಗಳ ಹೋಲಿಕೆ  

ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.


ಆದ್ದರಿಂದ ಅದನ್ನು ತಿನ್ನುವ ಪ್ರತಿಯೊಬ್ಬರೂ ತಮ್ಮ ಅಪರಾಧವನ್ನು ಹೊತ್ತುಕೊಳ್ಳಬೇಕು. ಏಕೆಂದರೆ ಯೆಹೋವ ದೇವರಿಗೆ ಪವಿತ್ರವಾದದ್ದನ್ನು ಅವರು ಅಶುದ್ಧಮಾಡಿದ್ದಾನೆ. ಅಂಥವರನ್ನು ತಮ್ಮ ಜನರ ಮಧ್ಯದೊಳಗಿಂದ ತೆಗೆದುಹಾಕಬೇಕು.


ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ. ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ. ಅವರು ಪರಿಶುದ್ಧವಾದದ್ದಕ್ಕೂ, ಅಪವಿತ್ರವಾದದ್ದಕ್ಕೂ ಬೇಧವೆಣಿಸಲಿಲ್ಲ. ಶುದ್ಧ, ಅಶುದ್ಧಗಳ ವ್ಯತ್ಯಾಸವಿಲ್ಲ ಎಂದು ಬೋಧಿಸಿದರು. ನನ್ನ ಸಬ್ಬತ್ ದಿನಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದ್ದರಿಂದ ನಾನು ಅವರಲ್ಲಿ ಅಪಕೀರ್ತಿಗೆ ಗುರಿಯಾಗಿದ್ದೇನೆ.


“ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.


ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು