ಯಾಜಕಕಾಂಡ 22:16 - ಕನ್ನಡ ಸಮಕಾಲಿಕ ಅನುವಾದ16 ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದುವರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು’” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಹಾಗೆ ಮಾಡಿದರೆ ತಾವು ಆ ನೈವೇದ್ಯಗಳನ್ನು ಊಟ ಮಾಡುವುದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಗೆ ಗುರಿಯಾಗುವರು, ನನ್ನ ಸೇವೆಗೆ ಯಾಜಕರನ್ನು ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಯಾಜಕರು ಅವುಗಳನ್ನು ಪರಿಶುದ್ಧವಾದವುಗಳೆಂದು ಪರಿಗಣಿಸದೆ ನೈವೇದ್ಯ ಪದಾರ್ಥಗಳನ್ನು ತಿಂದರೆ ಪಾಪಕ್ಕೆ ಒಳಗಾಗುವರು. ಯೆಹೋವನಾದ ನಾನೇ ಅವುಗಳನ್ನು ಪವಿತ್ರಗೊಳಿಸಿದ್ದೇನೆ.” ಅಧ್ಯಾಯವನ್ನು ನೋಡಿ |