ಯಾಜಕಕಾಂಡ 22:21 - ಕನ್ನಡ ಸಮಕಾಲಿಕ ಅನುವಾದ21 ತಮ್ಮ ಪ್ರಮಾಣವನ್ನು ಪೂರೈಸುವ ಹಾಗೆ ಯಾರಾದರೂ ಸಮಾಧಾನದ ಬಲಿಯನ್ನಾಗಲಿ, ಪಶುಗಳನ್ನಾಗಲಿ, ಕುರಿಗಳನ್ನಾಗಲಿ ಉಚಿತವಾದ ಕಾಣಿಕೆಯಾಗಿ ಯೆಹೋವ ದೇವರಿಗೆ ಅರ್ಪಿಸುವುದಾದರೆ, ಅದು ಅಂಗೀಕಾರಕ್ಕೆ ಪರಿಪೂರ್ಣವುಳ್ಳದ್ದಾಗಿರಬೇಕು. ಅದರೊಳಗೆ ಯಾವ ದೋಷವೂ ಕಳಂಕವೂ ಇರಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿ ಅಥವಾ ಕಾಣಿಕೆಯಾಗಿ ದನವನ್ನು ಅಥವಾ ಹಿಂಡಿನ ಆಡು ಇಲ್ಲವೇ ಕುರಿಗಳನ್ನು ತಂದರೆ ಅವು ಯೆಹೋವನಿಗೆ ಸಮರ್ಪಕವಾಗುವುದಕ್ಕಾಗಿ ಅದು ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಹರಕೆಯಾಗಿ ಅಥವಾ ಕಾಣಿಕೆಯಾಗಿ ಯಾರಾದರು ಶಾಂತಿಸಮಾಧಾನದ ಬಲಿಯನ್ನರ್ಪಿಸಲು ಆಶಿಸಿದರೆ ಅವರು ತರುವ ದನಕರುಗಳು, ಆಡು ಕುರಿಗಳು ಕಳಂಕರಹಿತವಾಗಿರಬೇಕು. ಯಾವುದಾದರೂ ಕುಂದುಕೊರತೆ ಇದ್ದರೆ ಆ ಬಲಿದಾನ ಸ್ವೀಕೃತವಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿಯಾಗಲಿ ಕಾಣಿಕೆಯಾಗಿಯಾಗಲಿ ದನವನ್ನು ಅಥವಾ ಆಡುಕುರಿಗಳನ್ನು ತಂದರೆ ಅವು ಸಮರ್ಪಕವಾಗುವದಕ್ಕೆ ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 “ಒಬ್ಬನು ಸಮಾಧಾನಯಜ್ಞವನ್ನು ಹರಕೆಯಾಗಿ ಅಥವಾ ಕಾಣಿಕೆಯಾಗಿ ಅರ್ಪಿಸುವಾಗ ಹೋರಿಯನ್ನಾಗಲಿ ಟಗರನ್ನಾಗಲಿ ಅರ್ಪಿಸಬೇಕು; ಅದು ಅಂಗದೋಷವಿಲ್ಲದ್ದಾಗಿರಬೇಕು; ಆರೋಗ್ಯವುಳ್ಳದ್ದಾಗಿರಬೇಕು. ಆಗ ಅದು ಸ್ವೀಕೃತವಾಗುವುದು. ಅಧ್ಯಾಯವನ್ನು ನೋಡಿ |