Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:25 - ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಪರಕೀಯನಿಂದ ತೆಗೆದುಕೊಂಡ ಅಂತಹ ಯಾವ ಪಶುವನ್ನೂ ನಿಮ್ಮ ದೇವರಿಗೆ ಆಹಾರವಾಗಿ ಅರ್ಪಿಸಬಾರದು. ಏಕೆಂದರೆ ಅವರ ಕುಂದುಳ್ಳದ್ದು ಮತ್ತು ದೋಷಗಳೂ ಅವುಗಳಲ್ಲಿ ಇರುತ್ತವೆ. ಅವು ನಿಮಗೋಸ್ಕರವಾಗಿ ಅಂಗೀಕಾರವಾಗುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅನ್ಯದೇಶದವನಿಂದ ತೆಗೆದುಕೊಂಡ ಅಂಥ ಪ್ರಾಣಿಯನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು. ಅದು ಕುಂದುಳ್ಳದ್ದು, ಕಳಂಕಿತವಾದದ್ದು. ಆದಕಾರಣ ಸ್ವೀಕೃತವಾಗದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ಪರದೇಶಸ್ಥರಿಂದ ಯೆಹೋವನಿಗೆ ಬಲಿಪಶುಗಳನ್ನು ತೆಗೆದುಕೊಳ್ಳಬಾರದು. ಯಾಕೆಂದರೆ ಆ ಪಶುಗಳಿಗೆ ಒಂದುವೇಳೆ ಪೆಟ್ಟಾಗಿರಬಹುದು. ಅವುಗಳಲ್ಲಿ ಏನಾದರೂ ದೋಷವಿರಬಹುದು. ಅವುಗಳು ಸಮರ್ಪಕವಾಗುವುದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:25
12 ತಿಳಿವುಗಳ ಹೋಲಿಕೆ  

ಅವರನ್ನು ಪರಿಶುದ್ಧರೆಣಿಸಿ, ಏಕೆಂದರೆ ನಿಮ್ಮ ದೇವರಾದ ನನಗೆ ಆಹಾರವನ್ನು ಸಮರ್ಪಿಸುವವರಾದ ಕಾರಣ ನೀನು ಅವರನ್ನು ದೇವರ ದಾಸರೆಂದು ಭಾವಿಸಬೇಕು. ನಿಮ್ನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವ ದೇವರೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನೂ ಪರಿಶುದ್ಧರೆಂದು ನೀನು ಭಾವಿಸಬೇಕು.


ಅವರು ತಮ್ಮ ಯೆಹೋವ ದೇವರಿಗೆ ಅಗ್ನಿಯಿಂದ ಮಾಡಿದ ಸಮರ್ಪಣೆಗಳನ್ನು ಮತ್ತು ತನ್ನ ದೇವರ ರೊಟ್ಟಿಯನ್ನು ಸಮರ್ಪಿಸುವುದರಿಂದ, ಅವರು ತಮ್ಮ ದೇವರ ಹೆಸರನ್ನು ಅಗೌರವಪಡಿಸದೆ, ತಮ್ಮ ದೇವರಿಗೆ ಪರಿಶುದ್ಧರಾಗಿರಬೇಕು. ಆದಕಾರಣ ಅವರು ಪರಿಶುದ್ಧರಾಗಿರುವರು.


ದೇವರಿಂದ ಹುಟ್ಟಿರುವವರು ಪಾಪದಲ್ಲಿ ಮುಂದುವರೆಯುವುದಿಲ್ಲವೆಂಬುದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದವರನ್ನು ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ಅಂಥವರನ್ನು ಕಾಪಾಡುವರು, ಕೆಡುಕನು ಅಂಥವರನ್ನು ಮುಟ್ಟುವುದಿಲ್ಲ.


ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.


ಆರೋನನ ಸಂತಾನವಲ್ಲದ ಪರಕೀಯನು ಯೆಹೋವ ದೇವರ ಸಮ್ಮುಖದಲ್ಲಿ ಧೂಪವನ್ನು ಅರ್ಪಿಸಬಾರದು, ಅರ್ಪಿಸಿದರೆ ಕೋರಹ ಮತ್ತು ಅವನ ಸಮೂಹಕ್ಕೆ ಆದ ಸ್ಥಿತಿಯೇ ಇವರಿಗೂ ಉಂಟಾಗುವುದೆಂಬುದನ್ನು ಇಸ್ರಾಯೇಲರಿಗೆ ಜ್ಞಾಪಿಸುವದಕ್ಕಾಗಿ ಅದು ಗುರುತಾಯಿತು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಅವುಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿಗೋಸ್ಕರ ನನ್ನ ಒಡಂಬಡಿಕೆಯನ್ನು ಮೀರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧ ಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು