Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:3 - ಕನ್ನಡ ಸಮಕಾಲಿಕ ಅನುವಾದ

3 “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:3
10 ತಿಳಿವುಗಳ ಹೋಲಿಕೆ  

ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


“ನಾನು ಎಡಗಡೆಯಲ್ಲಿರುವವರಿಗೆ, ‘ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಸತ್ತ ಮನುಷ್ಯನ ಶವವನ್ನು ಮುಟ್ಟಿ, ಶುದ್ಧಮಾಡಿಕೊಳ್ಳದವನು ಯೆಹೋವ ದೇವರ ಗುಡಾರವನ್ನು ಅಪವಿತ್ರಪಡಿಸುತ್ತಾನೆ, ಅಂಥವನನ್ನು ಇಸ್ರಾಯೇಲಿನವರೊಳಗಿಂದ ತೆಗೆದುಹಾಕಬೇಕು, ಶುದ್ಧೀಕರಣದ ನೀರು ಅವನ ಮೇಲೆ ಚಿಮುಕಿಸದ ಕಾರಣ ಅವನು ಅಶುದ್ಧನಾಗಿದ್ದಾನೆ. ಅವನ ಅಶುದ್ಧತ್ವವು ಇನ್ನೂ ಅವನ ಮೇಲೆ ಇರುವುದು.


“ಆರೋನನೊಂದಿಗೂ, ಅವನ ಪುತ್ರರೊಂದಿಗೂ ಮಾತನಾಡು, ಅವರು ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಮಾಡದಂತೆ ಇಸ್ರಾಯೇಲರು ನನಗೆ ಸಲ್ಲಿಸುವ ಪರಿಶುದ್ಧವಾದವುಗಳನ್ನು ಗೌರವದಿಂದ ಅವರು ಪ್ರತ್ಯೇಕವಾಗಿರಿಸಬೇಕು. ನಾನೇ ಯೆಹೋವ ದೇವರು.


ನಾನು ಅವರಿಗೆ, “ನೀವು ಯೆಹೋವ ದೇವರಿಗೆ ಪ್ರತಿಷ್ಠಿತರಾಗಿದ್ದೀರಿ. ಈ ವಸ್ತುಗಳು ಹಾಗೆಯೇ ಪ್ರತಿಷ್ಠಿತವು. ಈ ಬೆಳ್ಳಿ ಬಂಗಾರವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರಿಗೆ ಸಮರ್ಪಿತವಾದ ಕಾಣಿಕೆ.


ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು