Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:4 - ಕನ್ನಡ ಸಮಕಾಲಿಕ ಅನುವಾದ

4 “ ‘ಆರೋನನ ಸಂತತಿಯವರಲ್ಲಿ ಯಾವನಾದರೂ ಚರ್ಮರೋಗ ಇಲ್ಲವೆ ಸ್ರಾವವುಳ್ಳವನಿದ್ದರೆ, ಅವನು ಶುದ್ಧನಾಗುವವರೆಗೆ ಪರಿಶುದ್ಧವಾದವುಗಳನ್ನು ತಿನ್ನಬಾರದು. ಹೆಣದಿಂದ ಅಶುದ್ಧವಾದದ್ದನ್ನು ಮುಟ್ಟಿದವನು ಇಲ್ಲವೆ ತನ್ನೊಳಗಿಂದ ವೀರ್ಯ ಹೊರಟವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಅಥವಾ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಊಟಮಾಡಬಾರದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನಾಗಲಿ, ವೀರ್ಯಸ್ಖಲನ ಮಾಡಿಕೊಂಡವನಾಗಲಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 “ಆರೋನನ ಸಂತತಿಯವರಲ್ಲಿ ಯಾವನಿಗಾದರು ಕುಷ್ಟರೋಗವಾಗಲಿ, ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದುದನ್ನು ಮುಟ್ಟಿದವನು, ವೀರ್ಯಸ್ಖಲನ ಮಾಡಿಕೊಂಡವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕುಷ್ಠರೋಗವಾಗಲಿ ಮೇಹವಾಗಲಿ ಇದ್ದರೆ ಅವನು ಶುದ್ಧನಾಗುವ ತನಕ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ಉಣ್ಣಕೂಡದು. ಹೆಣದ ಸಂಪರ್ಕದಿಂದ ಅಶುದ್ಧವಾದದ್ದನ್ನು ಮುಟ್ಟಿದವನಾಗಲಿ ವೀರ್ಯಸ್ಖಲನ ಮಾಡಿಕೊಂಡವನಾಗಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 “ಆರೋನನ ಸಂತತಿಯವರಲ್ಲಿ ಯಾವನಿಗಾದರೂ ಕೆಟ್ಟದಾದ ಚರ್ಮರೋಗವಾಗಲಿ ಸ್ರಾವವಾಗಲಿ ಇದ್ದರೆ, ಅವನು ಶುದ್ಧನಾಗುವವರೆಗೆ ದೇವರಿಗೆ ನೈವೇದ್ಯವಾದ ಪದಾರ್ಥಗಳನ್ನು ತಿನ್ನಬಾರದು. ಅಶುದ್ಧನಾಗುವ ಪ್ರತಿ ಯಾಜಕನಿಗೂ ಈ ನಿಯಮ ಅನ್ವಯಿಸುತ್ತದೆ. ಆ ಯಾಜಕನು ಹೆಣವನ್ನು ಮುಟ್ಟಿದರೆ, ವೀರ್ಯಸ್ಖಲನ ಮಾಡಿಕೊಂಡರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:4
18 ತಿಳಿವುಗಳ ಹೋಲಿಕೆ  

ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನೀನು ಆರೋನನ ಮಕ್ಕಳಾದ ಯಾಜಕರೊಂದಿಗೆ ಮಾತನಾಡಿ, ಅವರಿಗೆ ಹೀಗೆ ಹೇಳು: ಸತ್ತವರ ದೇಹವನ್ನು ಮುಟ್ಟುವುದರಿಂದ ಯಾವ ಯಾಜಕನೂ ಅಪವಿತ್ರನಾಗಬಾರದು.


“ ‘ನೀವು ತಿನ್ನುವ ಯಾವುದಾದರೂ ಪ್ರಾಣಿ ಸತ್ತಿದ್ದರೆ, ಅದರ ಶವವನ್ನು ಮುಟ್ಟಿದವರು ಸಂಜೆಯವರೆಗೆ ಅಶುದ್ಧರಾಗಿರುವರು.


ಇಸ್ರಾಯೇಲರು ಯೆಹೋವ ದೇವರಿಗೆ ನೈವೇದ್ಯ ಮಾಡುವ ಪರಿಶುದ್ಧವಾದ ಬಲಿಗಳನ್ನೆಲ್ಲಾ ನಿನಗೂ ನಿನ್ನ ಪುತ್ರಪುತ್ರಿಯರಿಗೂ ಕ್ರಮ ಪ್ರಕಾರವಾದ ಭಾಗವಾಗಿ ಕೊಟ್ಟಿದ್ದೇನೆ. ಇದು ಯೆಹೋವ ದೇವರ ಮುಂದೆ ನಿನಗೂ ನಿನ್ನ ಸಂಗಡ ಇರುವ ನಿನ್ನ ಸಂತತಿಗೂ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಿರಬೇಕು,” ಎಂದರು.


ದಹನಬಲಿಗೆ ಒಳಗಾಗದ ಮಹಾಪರಿಶುದ್ಧವಾದ ವಸ್ತುಗಳು ನಿನಗೆ ಕಾಣಿಕೆಯಾಗಿ ಸಲ್ಲಬೇಕು ಯಾವುವೆಂದರೆ ಇಸ್ರಾಯೇಲರು ನನಗೆ ಸಮರ್ಪಿಸುವ ಧಾನ್ಯ, ದೋಷಪರಿಹಾರಕ ಬಲಿಗಳು ಮತ್ತು ಪ್ರಾಯಶ್ಚಿತ್ತ ಬಲಿಗಳು, ಇವುಗಳಲ್ಲಿ ದಹನವಾಗದೆ ಉಳಿದವುಗಳು ಮಹಾಪರಿಶುದ್ಧವಾದದರಿಂದ ನಿನಗೂ ನಿನ್ನ ಪುತ್ರರಿಗೂ ಸೇರಬೇಕು.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ಧಾನ್ಯ ಸಮರ್ಪಣೆಯಲ್ಲಿ ಉಳಿದದ್ದನ್ನು ಆರೋನನೂ ಅವನ ಪುತ್ರರೂ ತೆಗೆದುಕೊಳ್ಳಬೇಕು. ಅದು ಬೆಂಕಿಯಿಂದ ಮಾಡಿದ್ದಾಗಿದ್ದು ಯೆಹೋವ ದೇವರ ಸಮರ್ಪಣೆಗಳಲ್ಲಿ ಮಹಾಪರಿಶುದ್ಧವಾಗಿರುವುದು.


ವೀರ್ಯವು ಬಿದ್ದ ಪ್ರತಿಯೊಂದು ಬಟ್ಟೆ ಮತ್ತು ಪ್ರತಿಯೊಂದು ಚರ್ಮವನ್ನು ನೀರಿನಿಂದ ತೊಳೆದು, ಸಂಜೆಯವರೆಗೆ ಅಶುದ್ಧವಾಗಿರಬೇಕು.


ಆಗ ಹಗ್ಗಾಯನು, “ಹೆಣದಿಂದ ಅಶುದ್ಧವಾದವನು, ಇವುಗಳಲ್ಲಿ ಯಾವುದನ್ನಾದರೂ ಮುಟ್ಟಿದರೆ, ಅಶುದ್ಧವಾಗುವುದೋ?” ಎಂದನು. ಯಾಜಕರು ಉತ್ತರವಾಗಿ, “ಹೌದು, ಅಶುದ್ಧವಾಗುವುದು,” ಎಂದರು.


ಆದರೆ ಅಪವಿತ್ರನಾಗಿದ್ದು, ತನ್ನನ್ನು ಶುದ್ಧಪಡಿಸಿಕೊಳ್ಳದವನು ಸಭೆಯ ಮಧ್ಯದಿಂದ ತೆಗೆದುಹಾಕಬೇಕು ಏಕೆಂದರೆ ಅವನು ಯೆಹೋವ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿದ್ದಾನೆ. ನೀರು ಅವನ ಮೇಲೆ ಚಿಮಿಕಿಸಿಕೊಳ್ಳದ ಕಾರಣ ಅವನು ಅಪವಿತ್ರನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು