Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:9 - ಕನ್ನಡ ಸಮಕಾಲಿಕ ಅನುವಾದ

9 “ ‘ಯಾಜಕರು ಅದನ್ನು ಅಪವಿತ್ರ ಪಡಿಸಿದರೆ, ಅದರ ನಿಮಿತ್ತ ಅಪರಾಧಿಯಾಗಿ ಸಾಯದಂತೆ ನನ್ನ ವಿಧಿಗಳನ್ನು ಕೈಗೊಳ್ಳಬೇಕು. ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯಾಜಕರು ಈ ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 “ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸಾಯುವರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಈ ನನ್ನ ಆಜ್ಞೆಗಳನ್ನು ಅವರು ಅನುಸರಿಸಿ ನಡೆಯಬೇಕು. ಇವುಗಳನ್ನು ಮೀರಿ ನನ್ನ ನೈವೇದ್ಯವನ್ನು ಅಪವಿತ್ರಪಡಿಸಿದರೆ ಆ ದೋಷದ ಫಲವನ್ನು ಅನುಭವಿಸಿ ಸತ್ತಾರು. ಅವರನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 “ಯಾಜಕರು ನನ್ನ ಅಗತ್ಯತೆಗಳನ್ನು ಎಚ್ಚರಿಕೆಯಿಂದ ಪೂರೈಸಿದರೆ ಅಪರಾಧಕ್ಕೆ ಒಳಗಾಗುವುದಿಲ್ಲ. ಅವರು ಪವಿತ್ರವಾದವುಗಳನ್ನು ಅಪವಿತ್ರಗೊಳಿಸಿದರೆ ಸಾಯುವರು. ಯೆಹೋವನಾದ ನಾನೇ ಅವರನ್ನು ಪರಿಶುದ್ಧರನ್ನಾಗಿ ಮಾಡಿದ್ದೇನೆ ಮತ್ತು ಈ ವಿಶೇಷ ಸೇವೆಗಾಗಿ ಪ್ರತ್ಯೇಕಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:9
10 ತಿಳಿವುಗಳ ಹೋಲಿಕೆ  

ಆರೋನನೂ ಅವನ ಪುತ್ರರೂ ದೇವದರ್ಶನದ ಗುಡಾರಕ್ಕೆ ಬರುವ ಸಮಯದಲ್ಲಿಯೂ ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವುದಕ್ಕೆ ಬಲಿಪೀಠದ ಸಮೀಪಕ್ಕೆ ಬರುವ ಸಮಯದಲ್ಲಿಯೂ ದೋಷವನ್ನು ಹೊತ್ತು ಸಾಯದ ಹಾಗೆ ಇವುಗಳನ್ನು ಹಾಕಿಕೊಂಡಿರಬೇಕು. “ಇದೇ ಆರೋನನಿಗೂ ಅವನ ತರುವಾಯ ಅವನ ಸಂತತಿಯವರಿಗೂ ಇರಬೇಕಾದ ನಿತ್ಯವಾದ ಕಟ್ಟಳೆ.


ಆದಕಾರಣ ನೀವು ಅದರಲ್ಲಿ ಉತ್ತಮವಾದದ್ದನ್ನು ಅರ್ಪಿಸಿದಾಗ, ಅದರ ದೆಸೆಯಿಂದ ಯಾವ ದೋಷಕ್ಕೂ ನೀವು ಗುರಿಯಾಗುವುದಿಲ್ಲ. ಇಸ್ರಾಯೇಲರು ಸಮರ್ಪಿಸುವ ಪರಿಶುದ್ಧವಾದವುಗಳನ್ನು ಅಪವಿತ್ರ ಮಾಡದಿದ್ದರೆ ನೀವು ಸಾಯುವುದಿಲ್ಲ,’ ” ಎಂದರು.


ಇನ್ನು ಮೇಲೆ ಇಸ್ರಾಯೇಲರು ಪಾಪವನ್ನು ಹೊತ್ತುಕೊಂಡು ಸಾಯದ ಹಾಗೆ ದೇವದರ್ಶನದ ಗುಡಾರದ ಸಮೀಪಕ್ಕೆ ಬರಬಾರದು.


ಇಲ್ಲವೆ ಅವರು ಪರಿಶುದ್ಧವಾದವುಗಳನ್ನು ತಿನ್ನುವುದರಿಂದ ತಮ್ಮ ಮೇಲೆ ಅತಿಕ್ರಮದ ಅಪರಾಧವನ್ನು ಹೊತ್ತುಕೊಳ್ಳದಿರಲಿ. ಏಕೆಂದರೆ ಅವರನ್ನು ಶುದ್ಧೀಕರಿಸುವ ಯೆಹೋವ ದೇವರು ನಾನೇ.’ ”


ಆಗ ಯೆಹೋವ ದೇವರು ಮೋಶೆಗೆ ಹೇಳಿದ್ದೇನೆಂದರೆ, “ನಿನ್ನ ಅಣ್ಣನಾದ ಆರೋನನು ಮಂಜೂಷದ ಮೇಲಿರುವ ಕರುಣಾಸನದ ಮುಂದಿರುವ ತೆರೆಯ ಒಳಗೆ ಮಹಾಪರಿಶುದ್ಧ ಸ್ಥಳಕ್ಕೆ ಎಲ್ಲಾ ಸಮಯಗಳಲ್ಲಿ ಬಾರದಿರಲಿ, ಇಲ್ಲವಾದರೆ ಅವನು ಸಾಯುತ್ತಾನೆ, ಏಕೆಂದರೆ ಕರುಣಾಸನದ ಮೇಲೆ ಮೇಘದೊಳಗೆ ನಾನು ಪ್ರತ್ಯಕ್ಷನಾಗುವೆನು.


ಮೂರ್ಖರೇ, ಕುರುಡರೇ, ಯಾವುದು ದೊಡ್ಡದು? ಚಿನ್ನವೋ ಚಿನ್ನವನ್ನು ಪಾವನ ಮಾಡುವ ದೇವಾಲಯವೋ?


ಅವನು ಸಾಯದ ಹಾಗೆ ಆ ಧೂಪದ ಹೊಗೆಯು ಸಾಕ್ಷಿಯ ಮೇಲಿರುವ ಕರುಣಾಸನವು ಮುಚ್ಚಿಕೊಳ್ಳುವಂತೆ ಆ ಧೂಪವನ್ನು ಯೆಹೋವ ದೇವರ ಎದುರಿನಲ್ಲಿ ಬೆಂಕಿಯ ಮೇಲೆ ಹಾಕಬೇಕು.


ನಿಮಗಿಂತ ಮೊದಲಿನವರು ಮಾಡಿದಂತೆ ಅಸಹ್ಯವಾದ ಆಚರಣೆಗಳಲ್ಲಿ ಒಂದನ್ನಾದರೂ ನೀವು ಮಾಡದಂತೆ ಮತ್ತು ಅವುಗಳಲ್ಲಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದಂತೆ ನೀವು ನನ್ನ ಕಟ್ಟಳೆಗಳನ್ನು ಕೈಗೊಳ್ಳಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”


ಹೀಗಿರುವುದರಿಂದ ನಿಮ್ಮ ಯೆಹೋವ ದೇವರನ್ನು ಪ್ರೀತಿಸಿ, ಅವರ ಅಪೇಕ್ಷೆ, ಅವರ ತೀರ್ಪು, ಅವರ ನಿಯಮ ಹಾಗು ಅವರ ಆಜ್ಞೆಗಳನ್ನು ಯಾವಾಗಲೂ ಕೈಗೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು