ಯಾಜಕಕಾಂಡ 23:10 - ಕನ್ನಡ ಸಮಕಾಲಿಕ ಅನುವಾದ10 “ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೇಳಬೇಕಾದದ್ದೇನೆಂದರೆ: ‘ನಾನು ನಿಮಗೆ ಕೊಡುವ ದೇಶದೊಳಕ್ಕೆ ನೀವು ಬಂದಾಗ ಮತ್ತು ಅಲ್ಲಿಯ ಸುಗ್ಗಿಯನ್ನು ಕೊಯ್ದರೆ, ನಿಮ್ಮ ಸುಗ್ಗಿಯ ಪ್ರಥಮ ಫಲಗಳ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ ಜವೆಗೋದಿಯ ಪೈರನ್ನು ಕೊಯ್ಯುವಾಗ, ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನಾನು ನಿಮಗೆ ಕೊಡುವ ನಾಡನ್ನು ನೀವು ಸೇರಿದ ನಂತರ ಅಲ್ಲಿನ (ಜವೆಗೋದಿ) ಪೈರನ್ನು ಕೊಯ್ಯುವಾಗ ಪ್ರಥಮ ಫಲದ ಸಿವುಡನ್ನು ಯಾಜಕನ ಬಳಿಗೆ ತಂದೊಪ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದ ನಂತರ ಅಲ್ಲಿನ [ಜವೆಗೋದಿಯ] ಪೈರನ್ನು ಕೊಯ್ಯುವಾಗ ಪ್ರಥಮಫಲದ ಸಿವುಡನ್ನು ಯಾಜಕನ ಬಳಿಗೆ ತಂದು ಒಪ್ಪಿಸಬೇಕು. ನೀವು ಅಂಗೀಕಾರವಾಗುವಂತೆ ಅವನು ಅದನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮಗೆ ಕೊಡುವ ದೇಶದಲ್ಲಿ ನೀವು ನೆಲೆಸಿದ ನಂತರ ಅಲ್ಲಿ ಬೆಳೆಯನ್ನು ಕೊಯ್ಯುವಿರಿ. ಆ ಸಮಯದಲ್ಲಿ ನಿಮ್ಮ ಬೆಳೆಯ ಪ್ರಥಮ ಸಿವುಡನ್ನು ಯಾಜಕನ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿ |