Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:13 - ಕನ್ನಡ ಸಮಕಾಲಿಕ ಅನುವಾದ

13 ಇದರೊಂದಿಗೆ, ಧಾನ್ಯ ಸಮರ್ಪಣೆಯಲ್ಲಿ ಬೆರೆಸಿದ ಎಣ್ಣೆ ಮತ್ತು ಮೂರು ಕಿಲೋಗ್ರಾಂ ನಯವಾದ ಹಿಟ್ಟನ್ನು ಆಹ್ಲಾದಕರವಾದ ಪರಿಮಳದ ರೂಪದಲ್ಲಿ ಯೆಹೋವ ದೇವರಿಗೆ ಅರ್ಪಿಸಬೇಕು. ಇದಲ್ಲದೆ ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಸುಮಾರು ಒಂದು ಲೀಟರ್ ದ್ರಾಕ್ಷಾರಸ ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಅದರ ಸಮೇತ ಎಣ್ಣೆಬೆರೆತ ಎರಡು ಕಿಲೋಗ್ರಾಂ ಹಿಟ್ಟನ್ನು ಧಾನ್ಯನೈವೇದ್ಯವಾಗಿ ಅರ್ಪಿಸಬೇಕು. ಸರ್ವೇಶ್ವರನಿಗೆ ಪ್ರಿಯವಾದ ಸುವಾಸನೆಯುಂಟುಮಾಡುವುದಕ್ಕೆ ಅದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯ ಒಂದು ಲೀಟರ್ ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವದಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟೇ. ಯೆಹೋವನಿಗೆ ಸುವಾಸನೆಯನ್ನುಂಟುಮಾಡುವದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನೀವು ಎಣ್ಣೆ ಬೆರೆಸಿದ ಹದಿನಾರು ಬಟ್ಟಲು ಶ್ರೇಷ್ಠ ಗೋಧಿಹಿಟ್ಟನ್ನು ಧಾನ್ಯಸಮರ್ಪಣೆಗಾಗಿ ಅರ್ಪಿಸಬೇಕು. ನೀವು ಕಾಲುಭಾಗ ದ್ರಾಕ್ಷಾರಸವನ್ನು ಅರ್ಪಿಸಬೇಕು. ಆ ಯಜ್ಞದ ಸುವಾಸನೆಯು ಯೆಹೋವನಿಗೆ ಮೆಚ್ಚಿಕೆಯಾಗಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:13
15 ತಿಳಿವುಗಳ ಹೋಲಿಕೆ  

ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು. ನಿಮ್ಮ ಕಡೆಗೆ ತಿರುಗಿಕೊಂಡು ನಿಮ್ಮನ್ನು ಆಶೀರ್ವದಿಸಬಹುದು. ನಿಮ್ಮ ಯೆಹೋವ ದೇವರಿಗೆ ಅರ್ಪಿಸಲು ಬೇಕಾದ ಧಾನ್ಯ ಸಮರ್ಪಣೆ ಹಾಗು ಪಾನಾರ್ಪಣೆಯನ್ನು ನಿಮಗೆ ಧಾರಾಳವಾಗಿ ಉಳಿಸಬಹುದು, ಯಾರಿಗೆ ಗೊತ್ತು?


ಯಾಜಕರೇ, ಗೋಣಿತಟ್ಟು ಕಟ್ಟಿಕೊಂಡು ಗೋಳಾಡಿರಿ. ಬಲಿಪೀಠದ ಸೇವಕರೇ, ಗೋಳಾಡಿರಿ. ನನ್ನ ದೇವರ ಸೇವಕರೇ, ಬಂದು ಗೋಣಿತಟ್ಟಿನಲ್ಲಿ ರಾತ್ರಿಯೆಲ್ಲಾ ಕಳೆಯಿರಿ. ಏಕೆಂದರೆ, ಧಾನ್ಯ ಸಮರ್ಪಣೆಯೂ ಪಾನಾರ್ಪಣೆಯೂ ನಿಮ್ಮ ದೇವರ ಆಲಯದಿಂದ ನಿಂತುಹೋಗಿವೆ.


ಧಾನ್ಯ ಸಮರ್ಪಣೆಯನ್ನಾಗಲಿ ಪಾನಾರ್ಪಣೆಯನ್ನಾಗಲಿ ಯೆಹೋವ ದೇವರ ಆಲಯದಲ್ಲಿ ಅರ್ಪಿಸುವುದಿಲ್ಲ. ಯೆಹೋವ ದೇವರ ಸೇವಕರಾದ ಯಾಜಕರು ಗೋಳಾಡುತ್ತಾರೆ.


ಅದಕ್ಕೆ ಅರ್ಪಣೆಯಾಗಿ ಪ್ರತಿದಿನದ ಮುಂಜಾನೆಯಲ್ಲಿ ನೀನು ಸುಮಾರು ಎರಡುವರೆ ಕಿಲೋಗ್ರಾಂ ಗೋಧಿ ಹಿಟ್ಟಿನಲ್ಲಿ ಕಲಿಸುವ ಹಾಗೆ ಸುಮಾರು ಒಂದುವರೆ ಲೀಟರ್ ಎಣ್ಣೆಯನ್ನು ಸಿದ್ಧಮಾಡಬೇಕು. ಇದು ಯೆಹೋವ ದೇವರಿಗೆ ನಿತ್ಯನಿಯಮದ ಪ್ರಕಾರ ಎಡೆಬಿಡದ ಧಾನ್ಯ ಸಮರ್ಪಣೆಯಾಗಿದೆ.


ಅವನು ಒಂದೊಂದು ಹೋರಿಗೆ ಮತ್ತು ಟಗರಿಗೆ ಐದು ಕಿಲೋಗ್ರಾಂ ಗೋಧಿಹಿಟ್ಟನ್ನೂ ಸುಮಾರು ಮೂರುವರೆ ಲೀಟರ್ ಎಣ್ಣೆಯನ್ನು ಧಾನ್ಯ ಸಮರ್ಪಣೆಯಾಗಿ ಅರ್ಪಿಸಬೇಕು.


ನೀನು ನೀರನ್ನು ಸಹ ಅಳತೆಯ ಪ್ರಕಾರ ಸುಮಾರು ಅರ್ಧ ಲೀಟರ್ ಕಾಲಕಾಲಕ್ಕೆ ಸರಿಯಾಗಿ ಕುಡಿಯಬೇಕು.


ನಿತ್ಯ ದಹನಬಲಿಯ ಹೊರತು, ಪ್ರತಿ ಸಬ್ಬತ್ ದಿನಕ್ಕೆ ತಕ್ಕ ದಹನಬಲಿಯೂ ಅದರ ಪಾನದ ಅರ್ಪಣೆಯೂ ಇದೇ.


“ಎಂಟನೆಯ ದಿವಸದಲ್ಲಿ ಅವನು ಕಳಂಕರಹಿತವಾದ ಎರಡು ಕುರಿಮರಿಗಳನ್ನು ಮತ್ತು ಒಂದು ವರುಷದ ಕಳಂಕರಹಿತವಾದ ಹೆಣ್ಣು ಕುರಿಯನ್ನು, ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಐದು ಕಿಲೋಗ್ರಾಂ ಗೋಧಿ ಹಿಟ್ಟನ್ನು, ಒಂದನೆಯ ಮೂರು ಭಾಗ ಎಣ್ಣೆಯನ್ನು ತೆಗೆದುಕೊಳ್ಳಬೇಕು.


“ಆರೋನನೂ, ಅವನ ಪುತ್ರರೂ ಅಭಿಷಿಕ್ತರಾದ ದಿನದಲ್ಲಿ, ಅವರು ಯೆಹೋವ ದೇವರಿಗೆ ಸಮರ್ಪಿಸಬೇಕಾದ ಬಲಿಯು ಇದೇ. ಮೂರು ಸೇರು ಗೋಧಿ ಹಿಟ್ಟಿನಲ್ಲಿ ನಿರಂತರವಾಗಿರುವ ಧಾನ್ಯ ಸಮರ್ಪಣೆಗಾಗಿ ಮುಂಜಾನೆ ಅದರಲ್ಲಿ ಅರ್ಧಭಾಗವನ್ನು ಮತ್ತು ರಾತ್ರಿ ಅದರಲ್ಲಿ ಅರ್ಧಭಾಗವನ್ನು ಸಮರ್ಪಿಸಬೇಕು.


ಆರು ಕಿಲೋಗ್ರಾಂ ದಾಲ್ಚಿನ್ನಿಯನ್ನು ಪರಿಶುದ್ಧಸ್ಥಳದ ಅಳತೆಯ ಮೇರೆಗೆ ಇವುಗಳನ್ನು ನೀನು ತೆಗೆದುಕೊಳ್ಳಬೇಕು. ಸುಮಾರು ನಾಲ್ಕು ಲೀಟರಷ್ಟು ಓಲಿವ್ ಎಣ್ಣೆಯನ್ನು ಸಹ ತೆಗೆದುಕೊಂಡು,


ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ, ದಹನಬಲಿಗಳನ್ನಾಗಲಿ, ಧಾನ್ಯಗಳ ಅರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.


ನೀವು ಸಿವುಡನ್ನು ಅರ್ಪಿಸುವ ದಿನದಲ್ಲಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವಂತೆ ಒಂದು ವರ್ಷದ ಮತ್ತು ಕಳಂಕರಹಿತವಾದ ಕುರಿಮರಿಯನ್ನು ಅರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು