ಯಾಜಕಕಾಂಡ 23:14 - ಕನ್ನಡ ಸಮಕಾಲಿಕ ಅನುವಾದ14 ಅದೇ ದಿನದಲ್ಲಿ ನೀವು ನಿಮ್ಮ ದೇವರಿಗೆ ಬಲಿಯನ್ನು ತರುವವರೆಗೆ ರೊಟ್ಟಿಯನ್ನಾಗಲಿ, ಹುರಿದ ಕಾಳನ್ನಾಗಲಿ ಇಲ್ಲವೆ ಹಸಿರಾದ ತೆನೆಗಳನ್ನಾಗಲಿ ತಿನ್ನಬಾರದು. ಇದು ನಿಮಗೆ ನಿಮ್ಮ ಸಂತತಿಯ ಎಲ್ಲಾ ನಿವಾಸಗಳಲ್ಲಿಯೂ ಶಾಶ್ವತವಾದ ನಿಯಮವಾಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದ ಕಾಣಿಕೆಯನ್ನು ತಂದುಕೊಡುವವರೆಗೆ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ, ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನೀವು ಎಲ್ಲಿದ್ದರೂ ನಿಮಗೂ ನಿಮ್ಮ ಸಂತತಿಯವರಿಗೂ ಇದು ಶಾಶ್ವತ ನಿಯಮವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದುಕೊಡುವವರೆಗೂ [ಆ ವರುಷದ ಬೆಳೆಯ] ರೊಟ್ಟಿಯನ್ನಾಗಲಿ ಸುಟ್ಟ ತೆನೆಗಳನ್ನಾಗಲಿ ಹಸಿತೆನೆಗಳನ್ನಾಗಲಿ ತಿನ್ನಲೇಕೂಡದು. ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನೀವು ಯಾವ ಹೊಸ ಧಾನ್ಯವನ್ನಾಗಲಿ ಹಣ್ಣನ್ನಾಗಲಿ ಹೊಸ ಧಾನ್ಯದಿಂದ ಮಾಡಿದ ರೊಟ್ಟಿಯನ್ನಾಗಲಿ ದೇವರಿಗೆ ಅರ್ಪಿಸುವ ಮೊದಲು ತಿನ್ನಬಾರದು. ಈ ನಿಯಮವು ನಿಮ್ಮ ಎಲ್ಲಾ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸ ಸ್ಥಾನಗಳಲ್ಲಿಯೂ ಶಾಶ್ವತವಾಗಿದೆ. ಅಧ್ಯಾಯವನ್ನು ನೋಡಿ |