ಯಾಜಕಕಾಂಡ 23:21 - ಕನ್ನಡ ಸಮಕಾಲಿಕ ಅನುವಾದ21 ಅದೇ ದಿನದಲ್ಲಿ ಪವಿತ್ರ ಸಭೆ ಕೂಡುವುದೆಂದು ಪ್ರಕಟಿಸಬೇಕು ಮತ್ತು ಆ ದಿನದಲ್ಲಿ ನೀವು ಉದ್ಯೋಗವನ್ನೂ ಮಾಡಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ, ನೀವು ಎಲ್ಲೇ ಇದ್ದರೂ ಪಾಲಿಸಬೇಕಾದ ಶಾಶ್ವತ ನಿಯಮ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆ ದಿನದಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕೆಂಬುದಾಗಿ ಪ್ರಕಟಪಡಿಸಬೇಕು. ಆ ದಿನದಲ್ಲಿ ಯಾವ ಉದ್ಯೋಗವನ್ನು ನಡೆಸಬಾರದು. ಇದು ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕೆಂದು ಪ್ರಕಟಿಸಬೇಕು. ಅಂದು ಯಾವ ದುಡಿಮೆಯನ್ನು ಕೈಗೊಳ್ಳಬಾರದು. ನೀವು ಎಲ್ಲೇ ಇರಲಿ ಇದು ನಿಮಗೂ ನಿಮ್ಮ ಸಂತತಿಯವರಿಗೂ ಶಾಶ್ವತ ನಿಯಮವಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆ ದಿವಸದಲ್ಲಿ ದೇವಾರಾಧನೆಗಾಗಿ ಸಭೆ ಕೂಡಬೇಕೆಂಬದಾಗಿ ಪ್ರಸಿದ್ಧಪಡಿಸಬೇಕು. ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಇದು ನಿಮಗೂ ನಿಮ್ಮ ಸಂತತಿಯವರಿಗೂ ನಿಮ್ಮ ಎಲ್ಲಾ ನಿವಾಸಗಳಲ್ಲಿ ಶಾಶ್ವತನಿಯಮ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅದೇ ದಿನದಲ್ಲಿ ನೀವು ಪವಿತ್ರಸಭೆಯಾಗಿ ಕೂಡಬೇಕು. ನೀವು ಯಾವ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಈ ನಿಯಮವು ಶಾಶ್ವತವಾಗಿರುವುದು. ಅಧ್ಯಾಯವನ್ನು ನೋಡಿ |