Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:22 - ಕನ್ನಡ ಸಮಕಾಲಿಕ ಅನುವಾದ

22 “ ‘ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯುವಾಗ, ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು, ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನೂ ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 “‘ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು ಮತ್ತು ಹಕ್ಕಲಾಯಬಾರದು. ಇವುಗಳನ್ನು ಬಡವರಿಗೋಸ್ಕರವು ಹಾಗು ಪರದೇಶದವರಿಗೋಸ್ಕರವು ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ನಿಮ್ಮ ನಾಡಿನ ಹೊಲ ಕೊಯ್ಯುವಾಗ ಮೂಲೆ ಮೂಲೆಗಳಲ್ಲಿರುವುದನ್ನೆಲ್ಲಾ ಕೊಯ್ಯಬಾರದು, ಹಕ್ಕಲನ್ನು ಆಯಬಾರದು, ಬಡವರಿಗಾಗಿ ಹಾಗು ಪರದೇಶಿಗಳಿಗಾಗಿ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಿಮ್ಮ ದೇಶದ ಪೈರನ್ನು ಕೊಯ್ಯುವಾಗ ಹೊಲಗಳ ಮೂಲೆಗಳಲ್ಲಿರುವದನ್ನೆಲ್ಲಾ ಕೊಯ್ಯಬಾರದು, ಮತ್ತು ಹಕ್ಕಲಾಯಬಾರದು. ಇವನ್ನು ಬಡವರಿಗೋಸ್ಕರವೂ ಪರದೇಶದವರಿಗೋಸ್ಕರವೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾಗಿರುವ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಅಲ್ಲದೆ ನಿಮ್ಮ ದೇಶದಲ್ಲಿ ಪೈರುಗಳನ್ನು ಕೊಯ್ಯುವಾಗ ಹೊಲದ ಮೂಲೆಗಳವರೆಗೆ ಇರುವುದನ್ನೆಲ್ಲಾ ಕೊಯ್ಯಬೇಡಿರಿ. ನೆಲದ ಮೇಲೆ ಬೀಳುವ ಧಾನ್ಯಗಳನ್ನು ಹಕ್ಕಲಾಯಬಾರದು. ಬಡವರಿಗಾಗಿಯೂ ನಿಮ್ಮ ದೇಶದ ಮೂಲಕ ಪ್ರಯಾಣಮಾಡುವ ಪರದೇಶಸ್ಥರಿಗಾಗಿಯೂ ಅವುಗಳನ್ನು ಬಿಡಿರಿ. ನಾನೇ ನಿಮ್ಮ ದೇವರಾದ ಯೆಹೋವನು!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:22
15 ತಿಳಿವುಗಳ ಹೋಲಿಕೆ  

ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ದಬ್ಬಾಳಿಕೆಗೆ ಒಳಗಾದವನ ಪ್ರಾಣವನ್ನು ತೃಪ್ತಿಪಡಿಸಿದರೆ, ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವುದು. ನಿನ್ನ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು.


ನೀವು ನಿಮ್ಮೊಳಗೆ ಅಂಟಿಕೊಂಡಿರುವವುಗಳನ್ನು ಬಡವರಿಗೆ ದಾನ ಮಾಡಿಬಿಡಿರಿ, ಆಗ ನಿಮಗೆ ಎಲ್ಲವೂ ಶುದ್ಧವಾಗಿರುವುವು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ,


ಮೋವಾಬ್ಯಳಾದ ರೂತಳು ನೊವೊಮಿಗೆ, “ನಾನು ಹೊಲಕ್ಕೆ ಹೋಗಿ ಯಾರ ದಯೆಯು ನನಗೆ ಆಗುವುದೋ ಅವನ ಹೊಲದಲ್ಲಿ ಹಕ್ಕಲ ತೆನೆಗಳನ್ನು ಕೂಡಿಸಿ ಕೊಳ್ಳುವೆನು,” ಎಂದಳು. ನೊವೊಮಿ, “ಹೋಗಿ ಬಾ, ಮಗಳೇ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು