ಯಾಜಕಕಾಂಡ 23:28 - ಕನ್ನಡ ಸಮಕಾಲಿಕ ಅನುವಾದ28 ಆ ದಿವಸದಲ್ಲಿ ನೀವು ಕೆಲಸವನ್ನು ಮಾಡಬಾರದು. ಏಕೆಂದರೆ ಅದು ನಿಮಗೋಸ್ಕರ ನಿಮ್ಮ ದೇವರಾಗಿರುವ ಯೆಹೋವ ದೇವರ ಸನ್ನಿಧಿಯಲ್ಲಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಪ್ರಾಯಶ್ಚಿತ್ತದ ದಿವಸವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡೆಸಬಾರದು. ಅದು ದೋಷಪರಿಹಾರಕ ದಿನವಾಗಿದೆ, ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅ ದಿನದಂದು ಯಾವ ದುಡಿಮೆಯನ್ನೂ ಕೈಗೊಳ್ಳಬಾರದು. ಅದು ದೋಷಪರಿಹಾರಕ ದಿನ. ಅಂದು ನಿಮ್ಮ ಪರವಾಗಿ ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ದೋಷಪರಿಹಾರಕ ಆಚರಣೆ ನಡೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಆ ದಿನದಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅದು ದೋಷಪರಿಹಾರಕ ದಿವಸ; ಅದರಲ್ಲಿ ನಿಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರಕಾಚಾರವು ನಡೆಯುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನೀವು ಆ ದಿನದಲ್ಲಿ ಯಾವ ಕೆಲಸವನ್ನೂ ಮಾಡಬಾರದು. ಯಾಕೆಂದರೆ ಅದು ದೋಷಪರಿಹಾರಕ ದಿನವಾಗಿರುತ್ತದೆ. ಆ ದಿನದಲ್ಲಿ ಯಾಜಕರು ಯೆಹೋವನ ಸನ್ನಿಧಿಗೆ ಹೋಗಿ ಆಚಾರವಿಧಿಗಳ ಪ್ರಕಾರ ನಿಮಗಾಗಿ ಪ್ರಾಯಶ್ಚಿತ್ತ ಮಾಡುವರು. ಅಧ್ಯಾಯವನ್ನು ನೋಡಿ |
“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.