ಯಾಜಕಕಾಂಡ 23:3 - ಕನ್ನಡ ಸಮಕಾಲಿಕ ಅನುವಾದ3 “ ‘ಆರು ದಿವಸ ಕೆಲಸ ಮಾಡಬೇಕು. ಆದರೆ ಏಳನೆಯ ದಿನವು ಸಬ್ಬತ್ ದಿನ. ಆ ದಿನವು ಪರಿಶುದ್ಧ ದಿನವಾಗಿರುವುದು. ನೀವು ಆ ದಿನದಲ್ಲಿ ಕೆಲಸಮಾಡಬಾರದು. ನಿಮ್ಮ ಎಲ್ಲಾ ನಿವಾಸಗಳಲ್ಲಿಯೂ ಅದು ಯೆಹೋವ ದೇವರ ಸಬ್ಬತ್ ದಿನವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 “‘ಆರು ದಿನಗಳಲ್ಲಿ ನೀವು ಕೆಲಸವನ್ನು ಮಾಡಬೇಕು; ಏಳನೆಯ ದಿನ ಯಾವ ಕೆಲಸವನ್ನು ಮಾಡಬಾರದು, ಅದು ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನು ಮಾಡಬಾರದು. ನಿಮ್ಮ ಎಲ್ಲಾ ವಾಸಮಾಡುವ ಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆರು ದಿನಗಳಲ್ಲಿ ನೀವು ದುಡಿದು ಕೆಲಸಮಾಡಬೇಕು. ಏಳನೆಯ ದಿನ ಯಾವ ದುಡಿಮೆಯನ್ನೂ ಮಾಡಬಾರದ ಸಬ್ಬತ್ ದಿನ. ಅಂದು ದೇವರ ಆರಾಧನೆಗಾಗಿ ಸಭೆ ಸೇರಬೇಕು. ಆ ದಿನದಲ್ಲಿ ಯಾವ ವಿಧವಾದ ದುಡಿಮೆಯನ್ನೂ ಮಾಡಕೂಡದು. ನಿಮ್ಮ ನಿಮ್ಮ ನಿವಾಸಸ್ಥಳಗಳಲ್ಲೇ ಅದು ಸರ್ವೇಶ್ವರನಿಗೆ ಮೀಸಲಾದ ವಿಶ್ರಾಂತಿ ದಿನವಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆರು ದಿನಗಳಲ್ಲಿ ನೀವು ಕೆಲಸವನ್ನು ನಡಿಸಬೇಕು; ಏಳನೆಯ ದಿನವು ಯಾವ ಕೆಲಸವನ್ನೂ ಮಾಡಕೂಡದ ಸಬ್ಬತ್ ದಿನವಾಗಿದೆ. ಅದರಲ್ಲಿ ದೇವಾರಾಧನೆಗಾಗಿ ಸಭೆಕೂಡಬೇಕು. ಆ ದಿನದಲ್ಲಿ ಯಾವ ವಿಧವಾದ ಕೆಲಸವನ್ನೂ ಮಾಡಕೂಡದು. ನಿಮ್ಮ ಎಲ್ಲಾ ನಿವಾಸಸ್ಥಳಗಳಲ್ಲಿ ಅದು ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 “ಆರು ದಿನಗಳಲ್ಲಿ ನೀವು ಕೆಲಸಮಾಡಿರಿ. ಆದರೆ ಏಳನೆಯ ದಿನವು ವಿಶೇಷವಾದ ವಿಶ್ರಾಂತಿ ದಿನವಾದ ಸಬ್ಬತ್ತಾಗಿದೆ. ಆ ದಿನದಲ್ಲಿ ಪವಿತ್ರಸಭೆ ಕೂಡಬೇಕು. ನೀವು ಯಾವ ಕೆಲಸವನ್ನೂ ಮಾಡಬಾರದು. ನಿಮ್ಮ ಎಲ್ಲಾ ಮನೆಗಳಲ್ಲಿ ಅದು ಯೆಹೋವನಿಗೆ ಮೀಸಲಾದ ಸಬ್ಬತ್ತಾಗಿದೆ. ಅಧ್ಯಾಯವನ್ನು ನೋಡಿ |