ಯಾಜಕಕಾಂಡ 23:36 - ಕನ್ನಡ ಸಮಕಾಲಿಕ ಅನುವಾದ36 ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಸೇರಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಆ ದಿನದಲ್ಲಿ ಯಾವ ಉದ್ಯೋಗವನ್ನು ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಆ ಏಳು ದಿನಗಳಲ್ಲೂ ನೀವು ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಎಂಟನೆಯ ದಿನದಂದು ದೇವಾರಾಧನೆಗಾಗಿ ಸಭೆಸೇರಬೇಕು. ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿದಾನ ಮಾಡಬೇಕು. ಅದು ಸಭೆಸೇರುವ ದಿನವಾದುದರಿಂದ ಅಂದು ಎಲ್ಲ ದುಡಿಮೆಯನ್ನು ನಿಲ್ಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)36 ಆ ಏಳು ದಿನಗಳಲ್ಲಿಯೂ ನೀವು ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಎಂಟನೆಯ ದಿನದಲ್ಲಿಯೂ ದೇವಾರಾಧನೆಗಾಗಿ ಸಭೆಕೂಡಬೇಕು, ಯೆಹೋವನ ಸನ್ನಿಧಿಯಲ್ಲಿ ಹೋಮಮಾಡಬೇಕು. ಅದು ಸಭೆಕೂಡುವ ದಿನವಾದದರಿಂದ ಅದರಲ್ಲಿ ಯಾವ ಉದ್ಯೋಗವನ್ನೂ ನಡಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 ನೀವು ಏಳು ದಿನಗಳವರೆಗೆ ಅಗ್ನಿಯ ಮೂಲಕ ಯೆಹೋವನಿಗೆ ಯಜ್ಞವನ್ನು ಅರ್ಪಿಸಬೇಕು. ಎಂಟನೆಯ ದಿನದಲ್ಲಿ ಇನ್ನೊಂದು ಬಾರಿ ಸಭೆಯಾಗಿ ಸೇರಬೇಕು. ನೀವು ಅಗ್ನಿಯ ಮೂಲಕ ಯಜ್ಞವನ್ನು ಅರ್ಪಿಸಬೇಕು. ಇದು ಪವಿತ್ರಸಭೆಯಾಗಿರುವುದು. ಅಂದು ನೀವು ಯಾವ ಕೆಲಸವನ್ನೂ ಮಾಡಬಾರದು. ಅಧ್ಯಾಯವನ್ನು ನೋಡಿ |