Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:39 - ಕನ್ನಡ ಸಮಕಾಲಿಕ ಅನುವಾದ

39 “ ‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಭೂಮಿಯ ಫಲವನ್ನು ಕೂಡಿಸಿದಾಗ, ಯೆಹೋವ ದೇವರಿಗೆ ಏಳು ದಿವಸಗಳ ಹಬ್ಬವನ್ನು ಕೈಗೊಳ್ಳಬೇಕು. ಮೊದಲನೆಯ ದಿನವು ಸಬ್ಬತ್ ದಿನವಾಗಿರಬೇಕು ಮತ್ತು ಎಂಟನೆಯ ದಿನವು ಸಬ್ಬತ್ ದಿನವಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 “‘ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಯೆಹೋವನು ನೇಮಿಸಿದ ಪರ್ಣಶಾಲೆಗಳ ಜಾತ್ರೆಯನ್ನು ಏಳು ದಿನಗಳ ವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಮತ್ತು ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನು ಮಾಡದೆ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ - ತೋಪುಗಳ ಬೆಳೆಯನ್ನು ಕೂಡಿಸಿದ ನಂತರ ಸರ್ವೇಶ್ವರ ನೇಮಿಸಿದ ಪರ್ಣಕುಟೀರಗಳ ಜಾತ್ರೆಯನ್ನು ಏಳುದಿನದವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿ ಹಾಗು ಎಂಟನೆಯ ದಿನದಲ್ಲಿ ಎಲ್ಲ ದುಡಿಮೆಯನ್ನು ನಿಲ್ಲಿಸಿ ಸಂಪೂರ್ಣ ವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ತೋಟ ಮತ್ತು ತೋಪುಗಳ ಬೆಳೆಯನ್ನು ಕೂಡಿಸಿದನಂತರ ಯೆಹೋವನು ನೇವಿುಸಿದ [ಪರ್ಣಶಾಲೆಗಳ] ಜಾತ್ರೆಯನ್ನು ಏಳು ದಿನಗಳವರೆಗೂ ಆಚರಿಸಬೇಕು. ಮೊದಲನೆಯ ದಿನದಲ್ಲಿಯೂ ಎಂಟನೆಯ ದಿನದಲ್ಲಿಯೂ ಯಾವ ಕೆಲಸವನ್ನೂ ಮಾಡದೆ ಸಂಪೂರ್ಣವಿರಾಮದಿಂದಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ನೀವು ನಿಮ್ಮ ದೇಶದಲ್ಲಿ ಪೈರುಗಳನ್ನು ಸಂಗ್ರಹಿಸಿದ ನಂತರ, ಏಳು ದಿನಗಳವರೆಗೆ ನೀವು ಯೆಹೋವನ ಹಬ್ಬವನ್ನು ಆಚರಿಸಬೇಕು. ನೀವು ಮೊದಲನೆಯ ಮತ್ತು ಎಂಟನೆಯ ದಿನದಲ್ಲಿ ವಿಶ್ರಮಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:39
7 ತಿಳಿವುಗಳ ಹೋಲಿಕೆ  

“ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು. “ಹೊಲತೋಟಗಳ ಬೆಳೆಯನ್ನು ಕೂಡಿಸುವಾಗ ಅಂದರೆ, ವರ್ಷದ ಕೊನೆಯಲ್ಲಿ ಫಲಸಂಗ್ರಹದ ಹಬ್ಬವನ್ನು ಆಚರಿಸಬೇಕು.


ನೀವು ಕಣದ ಕೆಲಸವನ್ನೂ ದ್ರಾಕ್ಷಿ ಆಲೆಯ ಕೆಲಸವನ್ನೂ ಪೂರೈಸಿ, ಬೆಳೆಯನ್ನು ಮನೆಗೆ ತಂದಾಗ, ಏಳು ದಿನಗಳವರೆಗೂ ಗುಡಾರಗಳ ಹಬ್ಬವನ್ನು ಆಚರಿಸಬೇಕು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಈ ಏಳನೆಯ ತಿಂಗಳಿನ ಹದಿನೈದನೆಯ ದಿವಸವು ಏಳು ದಿವಸಗಳವರೆಗೆ ಯೆಹೋವ ದೇವರಿಗೆ ಗುಡಾರಗಳ ಹಬ್ಬವಾಗಿರುವುದು.


ಏಳು ದಿವಸ ನೀವು ಬೆಂಕಿಯ ಮೂಲಕ ಬಲಿಗಳನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಎಂಟನೆಯ ದಿವಸವು ನಿಮಗೆ ಪರಿಶುದ್ಧ ಕೂಟವಾಗಿರುವುದು. ನೀವು ಬೆಂಕಿಯ ಮೂಲಕ ಬಲಿಯನ್ನು ಯೆಹೋವ ದೇವರಿಗೆ ಅರ್ಪಿಸಬೇಕು. ಅದೊಂದು ಗಂಭೀರ ಸಭೆಯಾಗಿರುವುದು. ಅದರಲ್ಲಿ ನೀವು ಕಷ್ಟಕರವಾದ ಕೆಲಸಗಳನ್ನು ಮಾಡಬಾರದು.


“ಇಸ್ರಾಯೇಲರೊಂದಿಗೆ ಮಾತನಾಡಿ: ‘ಏಳನೆಯ ತಿಂಗಳಿನಲ್ಲಿ ಮೊದಲನೆಯ ದಿನದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥವಾದ ಸಬ್ಬತ್ ದಿನವಾಗಿರಬೇಕು. ಆ ದಿನ ಪರಿಶುದ್ಧ ಸಭೆಯ ಕೂಟವೂ ಇರಬೇಕು.


ಯೆಹೋವ ದೇವರ ವಿಶ್ರಾಂತಿಯ ದಿನಗಳ ಹೊರತಾಗಿಯೂ, ನೀವು ಯೆಹೋವ ದೇವರಿಗೆ ಸಮರ್ಪಿಸುವ ನಿಮ್ಮ ದಾನಗಳ ಹೊರತಾಗಿಯೂ, ನಿಮ್ಮ ಎಲ್ಲಾ ಹರಕೆಗಳ ಹೊರತಾಗಿಯೂ, ನಿಮ್ಮ ಎಲ್ಲಾ ಸ್ವಯಿಚ್ಛೆಯ ಕಾಣಿಕೆಗಳ ಹೊರತಾಗಿಯೂ ಸಲ್ಲಿಸಬೇಕಾದ ಅರ್ಪಣೆಗಳಿರುತ್ತವೆ.


ಮೊದಲನೆಯ ದಿವಸದಲ್ಲಿ ನೀವು ಸುಂದರವಾದ ಮರಗಳ ರೆಂಬೆಗಳನ್ನೂ, ಖರ್ಜೂರ ಮರಗಳ ರೆಂಬೆಗಳನ್ನೂ, ದಟ್ಟವಾದ ಮರಗಳ ರೆಂಬೆಗಳನ್ನೂ, ಹಳ್ಳದ ನೀರವಂಜಿ ಮರಗಳನ್ನೂ ತೆಗೆದುಕೊಂಡು ಏಳು ದಿನಗಳವರೆಗೆ ನಿಮ್ಮ ದೇವರಾಗಿರುವ ಯೆಹೋವ ದೇವರ ಎದುರಿನಲ್ಲಿ ಸಂತೋಷ ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು