Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:5 - ಕನ್ನಡ ಸಮಕಾಲಿಕ ಅನುವಾದ

5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯಲ್ಲಿ ಯೆಹೋವ ದೇವರ ಪಸ್ಕಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 “‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಯೆಹೋವನು ನೇಮಿಸಿದ ಪಸ್ಕ ಹಬ್ಬವನ್ನು ಆಚರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 “ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆ ವೇಳೆಯಲ್ಲಿ ಸರ್ವೇಶ್ವರ ನೇಮಿಸಿದ ಪಸ್ಕಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೇವೇಳೆಯಲ್ಲಿ ಯೆಹೋವನು ನೇವಿುಸಿದ ಪಸ್ಕಹಬ್ಬವಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನ ಪಸ್ಕಹಬ್ಬವು ಮೊದಲನೆ ತಿಂಗಳ ಹದಿನಾಲ್ಕನೆಯ ದಿನದ ಸಾಯಂಕಾಲ ಅಂದರೆ ಸೂರ್ಯಸ್ತಮಾನವಾದ ಸಮಯದಲ್ಲಿ ನಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:5
14 ತಿಳಿವುಗಳ ಹೋಲಿಕೆ  

ಇಸ್ರಾಯೇಲರು ಗಿಲ್ಗಾಲಿನಲ್ಲಿ ಇಳಿದುಕೊಂಡು ತಿಂಗಳಿನ ಹದಿನಾಲ್ಕನೆಯ ದಿವಸ ಸಂಜೆಯಲ್ಲಿ ಯೆರಿಕೋವಿನ ಬಯಲುಗಳಲ್ಲಿ ಪಸ್ಕವನ್ನು ಆಚರಿಸಿದರು.


ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ನೀವು ಪಸ್ಕದ ಊಟ ಮಾಡಲು ನಾವು ನಿಮಗಾಗಿ ಎಲ್ಲಿ ಸಿದ್ಧಮಾಡಬೇಕೆಂದು ಬಯಸುತ್ತೀರಿ?” ಎಂದು ಕೇಳಿದರು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಆಗ ಪಸ್ಕದ ಕುರಿಯು ಬಲಿಕೊಡಬೇಕಾಗಿದ್ದ ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನ ಬಂದಿತು.


ಅಂದು ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಯನ್ನು ವಧಿಸುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀವು ಪಸ್ಕದ ಊಟ ಮಾಡಲು ನಾವು ಎಲ್ಲಿಗೆ ಹೋಗಿ ಅದನ್ನು ಸಿದ್ಧಪಡಿಸೋಣ?” ಎಂದು ಕೇಳಿದರು.


“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು