Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 23:6 - ಕನ್ನಡ ಸಮಕಾಲಿಕ ಅನುವಾದ

6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಯೆಹೋವ ದೇವರಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ಹಬ್ಬವನ್ನು ಸರ್ವೇಶ್ವರನ ಗೌರವಾರ್ಥ ಆಚರಿಸಬೇಕು. ಅಂದು ಮೊದಲ್ಗೊಂಡು ಏಳು ದಿನಗಳಲ್ಲೂ ಹುಳಿರಹಿತ ರೊಟ್ಟಿಯನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಅದೇ ತಿಂಗಳ ಹದಿನೈದನೆಯ ದಿನದಲ್ಲಿ ಯೆಹೋವನ ಹುಳಿಯಿಲ್ಲದ ರೊಟ್ಟಿಯ ಹಬ್ಬವಿರುತ್ತದೆ. ನೀವು ಹುಳಿಯಿಲ್ಲದ ರೊಟ್ಟಿಯನ್ನು ಏಳು ದಿನಗಳವರೆಗೆ ತಿನ್ನುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 23:6
9 ತಿಳಿವುಗಳ ಹೋಲಿಕೆ  

ಆರು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಳನೆಯ ದಿವಸದಲ್ಲಿ ನಿಮ್ಮ ದೇವರಾದ ಯೆಹೋವ ದೇವರಿಗೆ ಸಭೆಯಾಗಿ ಕೂಡಿಬರಬೇಕು. ಆ ದಿನದಲ್ಲಿ ಕೆಲಸಮಾಡಬಾರದು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ಚೈತ್ರ ಮಾಸದ ಏಳು ದಿವಸ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ಅಬೀಬ ತಿಂಗಳಿನಲ್ಲಿ ನೀವು ಈಜಿಪ್ಟ್ ದೇಶವನ್ನು ಬಿಟ್ಟು ಬಂದಿದ್ದೀರಿ.


“ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವುದು. ನೀವು ಅದನ್ನು ಯೆಹೋವ ದೇವರಿಗೆ ಹಬ್ಬವಾಗಿ ತಲತಲಾಂತರಗಳಲ್ಲಿ ಆಚರಿಸಬೇಕು. ಅದನ್ನು ಶಾಶ್ವತ ನಿಯಮವೆಂದು ಎಂದೆಂದಿಗೂ ಆಚರಿಸಬೇಕು.


“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ. “ಒಬ್ಬರೂ ಕಾಣಿಕೆಯಿಲ್ಲದೆ ಬರಿಗೈಯಿಂದ ನನ್ನ ಸನ್ನಿಧಿಗೆ ಬರಬಾರದು.


ಅದರೊಂದಿಗೆ ಹುಳಿರೊಟ್ಟಿಯನ್ನು ತಿನ್ನಬಾರದು. ಏಳು ದಿವಸ ಹುಳಿಯಿಲ್ಲದ ಶ್ರಮೆಯ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ತ್ವರೆಯಾಗಿ ಈಜಿಪ್ಟ್ ದೇಶದೊಳಗಿಂದ ನೀವು ಹೊರಗೆ ಬಂದದ್ದರಿಂದ ನೀವು ಜೀವಿಸುವ ದಿವಸಗಳಲ್ಲೆಲ್ಲಾ ಇದನ್ನು ಜ್ಞಾಪಕಮಾಡಿಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು