Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:11 - ಕನ್ನಡ ಸಮಕಾಲಿಕ ಅನುವಾದ

11 ಇಸ್ರಾಯೇಲ್ ಸ್ತ್ರೀಯ ಮಗನು ಯೆಹೋವ ದೇವರ ನಾಮವನ್ನು ದೂಷಿಸಿ, ಶಪಿಸಿದನು. ಅವರು ಅವನನ್ನು ಮೋಶೆಯ ಬಳಿಗೆ ತಂದರು. ಅವನ ತಾಯಿಯ ಹೆಸರು ಶೆಲೋಮಿತ್. ಇವಳು ದಾನ್ ಕುಲದ ದಿಬ್ರೀಯನ ಮಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವನು ಯೆಹೋವನ ಹೆಸರನ್ನು ದೂಷಿಸಿ ಆತನನ್ನು ಶಪಿಸಿದ್ದರಿಂದ ಅವರು ಅವನನ್ನು ಮೋಶೆಯ ಬಳಿಗೆ ಹಿಡಿದು ಕರೆದುಕೊಂಡು ಬಂದರು. ಅವನ ತಾಯಿಯು ದಾನ್ ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬುವವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಆ ವ್ಯಕ್ತಿಯ ತಾಯಿ ದಾನ್ ಕುಲದ ದಿಬ್ರೀಯ ಮಗಳು ‘ಶೆಲೋಮೀತ್’ ಎಂದು ಅವಳ ಹೆಸರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 [ಯೆಹೋವನ] ಹೆಸರನ್ನು ದೂಷಿಸಿದದರಿಂದ ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. ಅವನ ತಾಯಿಯು ದಾನ್‍ಕುಲದ ದಿಬ್ರೀಯ ಮಗಳಾದ ಶೆಲೋಮೀತ್ ಎಂಬವಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವನು ದೂಷಿಸಲು ಪ್ರಾರಂಭಿಸಿ ಯೆಹೋವನ ನಾಮದ ಬಗ್ಗೆ ಕೆಟ್ಟಮಾತುಗಳನ್ನು ಹೇಳತೊಡಗಿದನು. ಆದ್ದರಿಂದ ಜನರು ಅವನನ್ನು ಮೋಶೆಯ ಬಳಿಗೆ ಹಿಡಿದು ತಂದರು. (ಆ ಮನುಷ್ಯನ ತಾಯಿಯ ಹೆಸರು ಶೆಲೋಮೀತ್. ಅವಳು ದಾನ್ ಕುಲದವನಾದ ದಿಬ್ರೀಯನ ಮಗಳು.)

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:11
33 ತಿಳಿವುಗಳ ಹೋಲಿಕೆ  

ಅವರು ಘೋರಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯುವರು. ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜನನ್ನೂ, ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.


ಆದರೆ ಈಗ ನಿಮ್ಮ ಕೈಚಾಚಿ, ಅವನ ಎಲುಬನ್ನೂ ಅವನ ಮಾಂಸವನ್ನೂ ಹೊಡೆದರೆ, ಅವನು ನಿಮ್ಮ ಮುಖದೆದುರಿಗೇ ನಿಮ್ಮನ್ನು ಶಪಿಸುವನು,” ಎಂದನು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


ಇವರು ಎಲ್ಲಾ ಕಾಲಗಳಲ್ಲಿ ಜನರಿಗೆ ನ್ಯಾಯತೀರಿಸಿ, ಕಠಿಣ ವ್ಯಾಜ್ಯಗಳನ್ನು ಮೋಶೆಯ ಬಳಿಗೆ ತರುತ್ತಿದ್ದರು. ಸಣ್ಣ ವ್ಯಾಜ್ಯಗಳನ್ನು ತಾವೇ ತೀರಿಸಿದರು.


ಇವರು ಎಲ್ಲಾ ಕಾಲಗಳಲ್ಲಿಯೂ ಜನರಿಗೆ ನ್ಯಾಯತೀರಿಸಲಿ. ಆದರೆ ದೊಡ್ಡ ವ್ಯಾಜ್ಯಗಳನ್ನೆಲ್ಲಾ ನಿನ್ನ ಮುಂದೆ ತಂದು, ಸಣ್ಣ ವ್ಯಾಜ್ಯಗಳನ್ನೆಲ್ಲಾ ತಾವೇ ತೀರಿಸಲಿ. ಆಗ ನಿನಗೆ ಸುಲಭವಾಗುವುದು. ಅವರೂ ನಿನ್ನ ಸಂಗಡ ಭಾರವನ್ನು ಹೊರುವರು.


ಮತ್ತೆ ದೇವರು ಮೋಶೆಗೆ, “ ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನ್ನನ್ನು ನಿಮ್ಮ ಬಳಿಗೆ ಕಳುಹಿಸಿದ್ದಾರೆ,’ ಎಂದು ಇಸ್ರಾಯೇಲರಿಗೆ ಹೇಳಬೇಕು, “ಇದೇ ಯುಗಯುಗಕ್ಕೆ ನನ್ನ ಹೆಸರೂ, ತಲತಲಾಂತರಕ್ಕೂ ನನ್ನನ್ನು ಸ್ಮರಿಸಬೇಕಾದ ಹೆಸರು.


ಆಕಾಶದಿಂದ ಒಂದೊಂದು ಸುಮಾರು ನಲವತ್ತೈದು ಕಿಲೋಗ್ರಾಂ ತೂಕದ ಬಹುದೊಡ್ಡ ಆಲಿಕಲ್ಲುಗಳು ಮನುಷ್ಯರ ಮೇಲೆ ಬಿದ್ದವು. ಆಲಿಕಲ್ಲಿನ ಉಪದ್ರವವು ಬಹು ಹೆಚ್ಚಾಗಿದ್ದರಿಂದಲೂ ಮನುಷ್ಯರು ದೇವರನ್ನು ದೂಷಿಸಿದರು.


ತಮ್ಮ ನೋವುಗಳಿಗಾಗಿಯೂ ಹುಣ್ಣುಗಳಿಗಾಗಿಯೂ ಪರಲೋಕದ ದೇವರನ್ನು ದೂಷಿಸಿದರು. ಆದರೆ ಅವರು, ತಮ್ಮ ಕೃತ್ಯಗಳಿಗಾಗಿ ಪಶ್ಚಾತ್ತಾಪ ಪಡಲಿಲ್ಲ.


ಮೊದಲು ದೇವದೂಷಕನೂ ಹಿಂಸಕನೂ ಅಪಮಾನ ಮಾಡುವವನೂ ಆಗಿದ್ದ ನಾನು ಅಜ್ಞಾನಿಯಾಗಿ ಅಪನಂಬಿಕೆಯಲ್ಲಿ ಹಾಗೆ ವರ್ತಿಸಿದ್ದರೂ ದೇವರು ನನಗೆ ಕರುಣೆತೋರಿದರು.


ಪವಿತ್ರ ವೇದದಲ್ಲಿ ಬರೆದಿರುವಂತೆ, “ನಿಮ್ಮ ದೆಸೆಯಿಂದ ಯೆಹೂದ್ಯರಲ್ಲದವರಲ್ಲಿ ದೇವರ ನಾಮವು ದೂಷಣೆಗೆ ಗುರಿಯಾಗುತ್ತಿದೆ.”


ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಈತನು ದೇವದೂಷಣೆ ಮಾಡಿದ್ದಾನೆ. ನಮಗೆ ಇನ್ನು ಹೆಚ್ಚಿನ ಸಾಕ್ಷಿಗಳು ಏತಕ್ಕೆ? ನೋಡಿ, ಈಗ ಈತನ ದೇವದೂಷಣೆಯನ್ನು ನೀವೇ ಕೇಳಿದ್ದೀರಲ್ಲಾ


ದೇವರೇ, ಏಳು; ನಿಮ್ಮ ನ್ಯಾಯವನ್ನು ವಾದಿಸಿರಿ. ದಿನವೆಲ್ಲಾ ಮೂರ್ಖನು ನಿಮ್ಮನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪಕಮಾಡಿಕೊಳ್ಳಿರಿ.


ಮೂರ್ಖರು ನಿಮ್ಮ ನಾಮವನ್ನು ನಿಂದಿಸುತ್ತಾರೆ. ಶತ್ರುಗಳು ನಿಮ್ಮನ್ನು ಹಾಸ್ಯಮಾಡುತ್ತಾರೆ. ಯೆಹೋವ ದೇವರೇ, ಇದನ್ನು ಜ್ಞಾಪಕಮಾಡಿಕೊಳ್ಳಿರಿ.


ಇದೆಲ್ಲದರಲ್ಲಿಯೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪು ಹೊರಿಸಲಿಲ್ಲ.


ಆದರೆ ನಿಮ್ಮ ಕೈಚಾಚಿ ಅವನ ಸೊತ್ತನ್ನೆಲ್ಲಾ ಅಳಿಸಿಬಿಡಿರಿ, ಆಗ ಅವನು ನಿಮ್ಮನ್ನು ಮುಖಾಮುಖಿಯಾಗಿ ಶಪಿಸುವನು,” ಎಂದನು.


ಔತಣದ ದಿನಗಳು ಮುಗಿದ ಬಳಿಕ, ಯೋಬನು, “ಬಹುಶಃ ನನ್ನ ಮಕ್ಕಳು ಪಾಪಮಾಡಿ, ಮನದಲ್ಲೇ ದೇವರನ್ನು ದೂಷಿಸಿರಬಹುದು,” ಎಂದುಕೊಂಡು, ಅವರನ್ನು ಶುದ್ಧಿಗೊಳಿಸಲು ವ್ಯವಸ್ಥೆ ಮಾಡುತ್ತಿದ್ದನು. ಬೆಳಿಗ್ಗೆ ಎದ್ದು ಪ್ರತಿಯೊಬ್ಬರಿಗಾಗಿ ದಹನಬಲಿಗಳನ್ನು ಅರ್ಪಿಸುತ್ತಿದ್ದನು. ಇದು ಯೋಬನ ದೈನಂದಿನ ವಾಡಿಕೆಯಾಗಿತ್ತು.


ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?


“ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.


ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.


ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.


ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.


ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.


ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ಹೇಗಿದ್ದರೂ ಈ ಕಾರ್ಯದಿಂದ ನೀನು ಯೆಹೋವ ದೇವರ ಶತ್ರುಗಳಿಗೆ ಬಹಳವಾಗಿ ದೇವದೂಷಣೆ ಮಾಡುವಂತೆ ಆಸ್ಪದ ಕೊಟ್ಟ ಕಾರಣ, ನಿನಗೆ ಹುಟ್ಟಿದ ಮಗುವು ಖಂಡಿತವಾಗಿ ಸಾಯುವುದು,” ಎಂದನು.


“ದೇವರನ್ನು ದೂಷಿಸಬೇಡ, ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.


ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು