ಯಾಜಕಕಾಂಡ 24:23 - ಕನ್ನಡ ಸಮಕಾಲಿಕ ಅನುವಾದ23 ಶಪಿಸಿದವನನ್ನು ಪಾಳೆಯದ ಹೊರಗೆ ತಂದು, ಅವನನ್ನು ಕಲ್ಲುಗಳಿಂದ ಹೊಡೆಯುವಂತೆ ಮೋಶೆಯು ಇಸ್ರಾಯೇಲರೊಂದಿಗೆ ಮಾತನಾಡಿದನು. ಆಗ ಇಸ್ರಾಯೇಲರು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದಂತೆಯೇ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಮೋಶೆ ಈ ಮಾತುಗಳನ್ನು ಇಸ್ರಾಯೇಲರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಮೋಶೆ ಈ ಮಾತುಗಳನ್ನು ಇಸ್ರಯೇಲರಿಗೆ ತಿಳಿಸಿದನು. ಅವರು ಆ ದೂಷಕನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡು ಹೋಗಿ ಕಲ್ಲೆಸೆದು ಕೊಂದರು. ಸರ್ವೇಶ್ವರ ಸ್ವಾಮಿ ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಯೇಲರು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಮೋಶೆ ಈ ಮಾತುಗಳನ್ನು ಇಸ್ರಾಯೇಲ್ಯರಿಗೆ ತಿಳಿಸಲಾಗಿ ಅವರು ದೂಷಿಸಿದವನಾದ ಆ ಮನುಷ್ಯನನ್ನು ಪಾಳೆಯದ ಹೊರಕ್ಕೆ ತೆಗೆದುಕೊಂಡುಹೋಗಿ ಕಲ್ಲೆಸೆದು ಕೊಂದುಬಿಟ್ಟರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಇಸ್ರಾಯೇಲ್ಯರು ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಬಳಿಕ ಮೋಶೆಯು ಇಸ್ರೇಲರೊಂದಿಗೆ ಮಾತಾಡಿದನು. ಆಗ ಅವರು ದೂಷಣೆ ಮಾಡಿದ ಮನುಷ್ಯನನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಅವನಿಗೆ ಕಲ್ಲೆಸೆದು ಕೊಂದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅವರು ಮಾಡಿದರು. ಅಧ್ಯಾಯವನ್ನು ನೋಡಿ |