ಯಾಜಕಕಾಂಡ 24:5 - ಕನ್ನಡ ಸಮಕಾಲಿಕ ಅನುವಾದ5 “ನೀನು ನಯವಾದ ಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಸುಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಓಮರನಷ್ಟು ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 “ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 “ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿಯೊಂದು ರೊಟ್ಟಿ ಎರಡೆರಡು ಕಿಲೋಗ್ರಾಂನದಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 “ಶ್ರೇಷ್ಠ ಗೋಧಿಹಿಟ್ಟನ್ನು ತೆಗೆದುಕೊಂಡು ಹನ್ನೆರಡು ರೊಟ್ಟಿಗಳನ್ನು ಮಾಡಬೇಕು. ಪ್ರತಿ ರೊಟ್ಟಿಯನ್ನು ಮಾಡಲು ಆರು ಸೇರು ಹಿಟ್ಟನ್ನು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿ |
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.