ಯಾಜಕಕಾಂಡ 24:6 - ಕನ್ನಡ ಸಮಕಾಲಿಕ ಅನುವಾದ6 ಅವುಗಳನ್ನು ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವ ದೇವರ ಸನ್ನಿಧಿಯಲ್ಲಿ ಒಂದು ಸಾಲಿನಲ್ಲಿ ಆರರಂತೆ, ಎರಡು ಸಾಲುಗಳನ್ನಾಗಿ ಇಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವುಗಳನ್ನು ಆರಾರು ರೊಟ್ಟಿಗಳ ಮೇರೆಗೆ ಎರಡು ರಾಶಿಗಳಾಗಿ, ಚೊಕ್ಕಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಸರ್ವೇಶ್ವರನ ಸಮ್ಮುಖದಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಅವುಗಳನ್ನು ಆರಾರರ ಮೇರೆಗೆ ಎರಡು ರಾಶಿಗಳಾಗಿ ಚೊಕ್ಕ ಬಂಗಾರದ ಮೇಜಿನ ಮೇಲೆ ಯೆಹೋವನ ಸನ್ನಿಧಿಯಲ್ಲಿ ಇಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವುಗಳನ್ನು ಯೆಹೋವನ ಸನ್ನಿಧಿಯಲ್ಲಿರುವ ಚಿನ್ನದ ಮೇಜಿನ ಮೇಲೆ ಎರಡು ಸಾಲಾಗಿ ಇಡಬೇಕು. ಒಂದೊಂದು ಸಾಲಿನಲ್ಲಿ ಆರಾರು ರೊಟ್ಟಿಗಳಿರುವವು. ಅಧ್ಯಾಯವನ್ನು ನೋಡಿ |
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.