8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
8 ಶಾಶ್ವತವಾದ ನಿಬಂಧನೆಯ ಮೇರೆಗೆ ಯಾಜಕನು ಯಾವಾಗಲೂ ಪ್ರತಿ ಸಬ್ಬತ್ ದಿನದಲ್ಲಿ ರೊಟ್ಟಿಗಳನ್ನು ತಂದು ಸರ್ವೇಶ್ವರನ ಸನ್ನಿಧಿಯಲ್ಲಿ ಕ್ರಮಪಡಿಸಿ ಅವುಗಳನ್ನು ಇಸ್ರಯೇಲರ ಪರವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.
8 ಯಾಜಕನು ಯಾವಾಗಲೂ ಪ್ರತಿ ಸಬ್ಬತ್‍ದಿನದಲ್ಲಿ ರೊಟ್ಟಿಗಳನ್ನು ತಂದು ಯೆಹೋವನ ಸನ್ನಿಧಿಯಲ್ಲಿ ಕ್ರಮಪಡಿಸಬೇಕು. ಶಾಶ್ವತವಾದ ನಿಬಂಧನೆಯ ಮೇರೆಗೆ ಅವುಗಳನ್ನು ಇಸ್ರಾಯೇಲ್ಯರಿಗೋಸ್ಕರ ಯೆಹೋವನಿಗೆ ಸಮರ್ಪಿಸಬೇಕು.
ನನ್ನ ದೇವರಾದ ಯೆಹೋವ ದೇವರಿಗೆ ಪ್ರತಿಷ್ಠೆ ಮಾಡುವುದಕ್ಕೂ, ದೇವಸನ್ನಿಧಿಗೆ ಪರಿಮಳ ಧೂಪವನ್ನು ಅರ್ಪಿಸುವ ನಿತ್ಯ ಸಮ್ಮುಖದ ರೊಟ್ಟಿಗೋಸ್ಕರವೂ, ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ, ಇಸ್ರಾಯೇಲರಿಗೆ ನಿರಂತರವಾಗಿರಲು ನೇಮಿಸಿದ ನಮ್ಮ ದೇವರಾದ ಯೆಹೋವ ದೇವರ ಹಬ್ಬಗಳಲ್ಲಿಯೂ, ಉದಯಕಾಲದ ಸಾಯಂಕಾಲದ ದಹನಬಲಿಗಳಿಗೋಸ್ಕರವೂ ನಮ್ಮ ದೇವರಾದ ಯೆಹೋವ ದೇವರ ನಾಮಕ್ಕೆ ಆಲಯವನ್ನು ಕಟ್ಟಿಸುತ್ತೇನೆ.
“ಸಮ್ಮುಖದ ರೊಟ್ಟಿಯ ಮೇಜಿನ ಮೇಲೆ ಅವರು ನೀಲಿವಸ್ತ್ರವನ್ನು ಹಾಸಿ, ಅದರ ಮೇಲೆ ಪಾತ್ರೆಗಳನ್ನು, ಸೌಟುಗಳನ್ನು, ಬೋಗುಣಿಗಳನ್ನು ಮತ್ತು ಪಾನಾರ್ಪಣೆಯ ಹೂಜಿಗಳನ್ನು ಇಡಬೇಕು. ನಿತ್ಯಾರ್ಪಣೆಯ ರೊಟ್ಟಿಯನ್ನು ಅದರ ಮೇಲೆ ಇಡಬೇಕು.
ಯೆಹೋವ ದೇವರ ಮಂದಿರದ ಸೇವೆಯ ಕಾರ್ಯದಲ್ಲಿರುವ ಸಮ್ಮುಖದ ರೊಟ್ಟಿಗೋಸ್ಕರವೂ, ಅರ್ಪಣೆ ಬಲಿಯ ನಯವಾದ ಹಿಟ್ಟಿಗೋಸ್ಕರವೂ, ಹುಳಿಯಿಲ್ಲದ ರೊಟ್ಟಿಗಳಿಗೋಸ್ಕರವೂ, ಬಾಂಡ್ಲಿಯಲ್ಲಿ ಮಾಡಿದ್ದಕ್ಕೋಸ್ಕರವೂ, ಕರಿದಿದ್ದಕ್ಕೋಸ್ಕರವೂ, ಸಮಸ್ತ ವಿವಿಧ ಅಳತೆಗೋಸ್ಕರವೂ ಆರೋನನ ಮಕ್ಕಳ ಬಳಿಯಲ್ಲಿ ಅವರಿಗೆ ನೇಮಕವಾಗಿತ್ತು.
ಅವರು ಪ್ರತಿ ಉದಯದಲ್ಲಿಯೂ, ಪ್ರತಿ ಸಾಯಂಕಾಲದಲ್ಲಿಯೂ ಯೆಹೋವ ದೇವರಿಗೆ ದಹನಬಲಿಗಳನ್ನೂ, ಸುಗಂಧ ಧೂಪವನ್ನೂ ಸುಡುತ್ತಾರೆ. ಇದಲ್ಲದೆ ಪರಿಶುದ್ಧ ಮೇಜಿನ ಮೇಲೆ ರೊಟ್ಟಿಗಳನ್ನು ಇಡುತ್ತಾ, ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭವನ್ನೂ, ಅದರ ದೀಪಗಳನ್ನೂ ಸಿದ್ಧಮಾಡಿ ಹಚ್ಚುತ್ತಾ ಇರುತ್ತಾರೆ. ನಾವು ನಮ್ಮ ದೇವರಾದ ಯೆಹೋವ ದೇವರ ಕಟ್ಟಳೆಯನ್ನು ಕೈಗೊಳ್ಳುತ್ತೇವೆ, ಆದರೆ ನೀವು ಅವರನ್ನು ಬಿಟ್ಟಿದ್ದೀರಿ.