Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 24:9 - ಕನ್ನಡ ಸಮಕಾಲಿಕ ಅನುವಾದ

9 ಅದು ಆರೋನನ ಮತ್ತು ಅವನ ಪುತ್ರರದಾಗಿರಬೇಕು. ಅವರು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಏಕೆಂದರೆ ಅದು ನಿತ್ಯವಾದ ನಿಯಮವಾಗಿ ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸುವವುಗಳಲ್ಲಿ ಅವನಿಗೆ ಮಹಾಪರಿಶುದ್ಧವಾಗಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವು ಆರೋನನಿಗೂ ಮತ್ತು ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದುದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಆ ರೊಟ್ಟಿಗಳನ್ನು ದೇವಸ್ಥಾನದ ಪ್ರಾಕಾರದಲ್ಲೇ ತಿನ್ನಬೇಕು. ಅವು ಸರ್ವೇಶ್ವರನಿಗೆ ಸಮರ್ಪಿತವಾದ ದಹನದ್ರವ್ಯಗಳಿಗೆ ಸೇರಿದವುಗಳಾಗಿರುವುದರಿಂದ ಶಾಶ್ವತ ನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವು ಆರೋನನಿಗೂ ಅವನ ಸಂತತಿಯವರಿಗೂ ಸಲ್ಲಬೇಕು. ಮಹಾಪರಿಶುದ್ಧವಾದ ಅವುಗಳನ್ನು ದೇವಸ್ಥಾನದ ಪ್ರಾಕಾರದಲ್ಲಿಯೇ ತಿನ್ನಬೇಕು. ಅವು ಯೆಹೋವನಿಗೆ ಸಮರ್ಪಿತವಾದ ಹೋಮದ್ರವ್ಯಗಳಿಗೆ ಸೇರಿದವುಗಳಾದದರಿಂದ ಶಾಶ್ವತನಿಯಮದ ಪ್ರಕಾರ ಯಾಜಕರಿಗೇ ಸಲ್ಲಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ರೊಟ್ಟಿಯು ಆರೋನನಿಗೆ ಮತ್ತು ಅವನ ಪುತ್ರರಿಗೆ ಸಲ್ಲತಕ್ಕದ್ದು. ಅವರು ರೊಟ್ಟಿಯನ್ನು ಪವಿತ್ರಸ್ಥಳದಲ್ಲಿ ತಿನ್ನುವರು. ಯಾಕೆಂದರೆ ಅದು ಮಹಾ ಪವಿತ್ರವಾದದ್ದು. ಅದು ಅಗ್ನಿಯ ಮೂಲಕ ಅರ್ಪಿಸಿದ ಯಜ್ಞಗಳಲ್ಲಿ ಒಂದಾಗಿದೆ. ಆ ರೊಟ್ಟಿಯು ಶಾಶ್ವತವಾಗಿ ಆರೋನನಿಗೆ ಸಲ್ಲತಕ್ಕದ್ದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 24:9
17 ತಿಳಿವುಗಳ ಹೋಲಿಕೆ  

ಮೋಶೆಯು ಆರೋನನಿಗೂ, ಅವನ ಪುತ್ರರಿಗೂ, “ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಆ ಮಾಂಸವನ್ನು ಬೇಯಿಸಿರಿ. ಅದನ್ನು ಪ್ರತಿಷ್ಠಿತ ಬುಟ್ಟಿಯೊಳಗಿರುವ ರೊಟ್ಟಿಯೊಡನೆ ತಿನ್ನಬೇಕು. ನಾನು ಆಜ್ಞಾಪಿಸಿ ಹೇಳಿದಂತೆ, ‘ಆರೋನನು ಮತ್ತು ಅವನ ಪುತ್ರರು ಅದನ್ನು ತಿನ್ನಬೇಕು.’


ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ಮೋಶೆ ನಿಯಮಕ್ಕೆ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನಲ್ಲವೇ” ಎಂದರು.


ಅವನು ಮಹಾಯಾಜಕನಾದ ಅಬಿಯಾತರನ ಕಾಲದಲ್ಲಿ, ದೇವರ ಆಲಯದೊಳಗೆ ಹೋಗಿ ಯಾಜಕರ ಹೊರತು ಬೇರೆಯವರು ತಿನ್ನುವುದಕ್ಕೆ ನಿಯಮ ಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತೆಗೆದುಕೊಂಡು ತಿಂದು, ತನ್ನ ಸಂಗಡಿಗರಿಗೂ ಕೊಟ್ಟನು,” ಎಂದರು.


ಅವನು ದೇವರ ಆಲಯದೊಳಗೆ ಹೋಗಿ, ಯಾಜಕರ ಹೊರತು ತಾನಾಗಲಿ ತನ್ನ ಸಂಗಡಿಗರಾಗಲಿ, ತಿನ್ನುವುದಕ್ಕೆ ಧರ್ಮಸಮ್ಮತವಲ್ಲದ ನೈವೇದ್ಯದ ರೊಟ್ಟಿಯನ್ನು ತಿನ್ನಲಿಲ್ಲವೇ?


“ಅದು ಮಹಾಪರಿಶುದ್ಧವಾದ್ದರಿಂದಲೂ ಯೆಹೋವ ಸನ್ನಿಧಿಯಲ್ಲಿ ಅವರಿಗಾಗಿ ಪ್ರಾಯಶ್ಚಿತ್ತ ಮಾಡುವುದಕ್ಕಾಗಿಯೂ ನೀವು ಸಭೆಯ ಅಪರಾಧವನ್ನು ಹೊರುವುದಕ್ಕಾಗಿ ದೇವರು ಅದನ್ನು ಕೊಟ್ಟಿದ್ದೆಂದೂ ನೀವು ತಿಳಿದು ಪಾಪ ಪರಿಹಾರದ ಬಲಿಯನ್ನು ಪರಿಶುದ್ಧವಾದ ಸ್ಥಳದಲ್ಲಿ ಏಕೆ ತಿನ್ನಲಿಲ್ಲ?


ಅದರಲ್ಲಿ ಉಳಿದದ್ದನ್ನು ಆರೋನನೂ, ಅವನ ಪುತ್ರರೂ ತಿನ್ನಬೇಕು. ಅದನ್ನು ಪರಿಶುದ್ಧ ಸ್ಥಳದಲ್ಲಿ ಹುಳಿಯಿಲ್ಲದ ರೊಟ್ಟಿಯೊಂದಿಗೆ ತಿನ್ನಬೇಕು. ಅದನ್ನು ಅವರು ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.


ಆಗ ಯೆಹೋವ ದೇವರ ಸನ್ನಿಧಿಯಿಂದ ತೆಗೆಯಲಾದ ಸಮ್ಮುಖದ ರೊಟ್ಟಿಗಳ ಹೊರತು, ಬೇರೆ ರೊಟ್ಟಿ ಅಲ್ಲಿ ಇಲ್ಲದ್ದರಿಂದ ಯಾಜಕನು ಅವನಿಗೆ ಪರಿಶುದ್ಧವಾಗಿಸಿದ ರೊಟ್ಟಿಯನ್ನು ಕೊಟ್ಟನು. ಏಕೆಂದರೆ ಅವುಗಳನ್ನು ತೆಗೆದುಕೊಳ್ಳುವ ದಿನದಲ್ಲಿ ಅವುಗಳಿಗೆ ಬದಲಾಗಿ ಬಿಸಿ ರೊಟ್ಟಿಗಳನ್ನು ಇಡಲೇಬೇಕು.


ಅವನು ದೇವರ ರೊಟ್ಟಿಯಲ್ಲಿ ಪರಿಶುದ್ಧವಾದದ್ದನ್ನೂ, ಮಹಾಪರಿಶುದ್ಧವಾದದ್ದನ್ನೂ ತಿನ್ನಬಹುದು.


“ಆದರೆ ನೀವು ಯೆಹೋವ ದೇವರ ಮೇಜು ಅಶುದ್ಧ, ‘ಅದರ ಫಲವೂ, ಅದರ ಆಹಾರವೂ ಅಸಹ್ಯ,’ ಎಂದು ಹೇಳಿ ಅದನ್ನು ಅಪವಿತ್ರ ಮಾಡಿದ್ದೀರಿ.


ಎಲ್ಲಾ ಸಭೆಯನ್ನು ದೇವದರ್ಶನದ ಗುಡಾರದ ಬಾಗಿಲ ಬಳಿಯಲ್ಲಿ ಒಟ್ಟಾಗಿ ಸೇರಿಸು,” ಎಂದರು.


ಇಸ್ರಾಯೇಲಿನವಳಾದ ಒಬ್ಬ ಸ್ತ್ರೀಗೂ, ಈಜಿಪ್ಟಿನವನಾದ ಪುರುಷನಿಗೂ ಹುಟ್ಟಿದ ಮಗನು ಇಸ್ರಾಯೇಲರ ಪಾಳ್ಯಕ್ಕೆ ಬಂದನು. ಇಸ್ರಾಯೇಲಿನವಳಾದ ಸ್ತ್ರೀಯ ಈ ಮಗನು ಇಸ್ರಾಯೇಲಿನ ಒಬ್ಬ ಮನುಷ್ಯನೊಂದಿಗೆ ಪಾಳೆಯದಲ್ಲಿ ಜಗಳವಾಡಿದರು.


ದೇವದರ್ಶನದ ಗುಡಾರದಲ್ಲಿ ಒಡಂಬಡಿಕೆಯ ಮಂಜೂಷದ ಮುಂದೆ ಇರುವ ಪರದೆಯ ಹೊರಗೆ, ಆರೋನನು ಮತ್ತು ಅವನ ಮಕ್ಕಳು ಸಂಜೆಯಿಂದ ಉದಯದವರೆಗೆ ಯೆಹೋವ ದೇವರ ಮುಂದೆ ದೀಪವನ್ನು ಸರಿಪಡಿಸುತ್ತಾ ಉರಿಸುತ್ತಿರಬೇಕು. ಈ ನಿಯಮವು ಇಸ್ರಾಯೇಲರಿಗೆ ಮತ್ತು ಅವರ ಸಂತತಿಯವರಿಗೆ ಶಾಶ್ವತವಾದ ನಿಯಮವಾಗಿರಬೇಕು.


“ ‘ನೀವು ಕೊಬ್ಬನ್ನಾಗಲಿ, ರಕ್ತವನ್ನಾಗಲಿ ತಿನ್ನದೆ ಇರುವುದು ನಿಮ್ಮ ಸಂತತಿಯವರಿಗೆಲ್ಲಾ ನಿಮ್ಮ ಎಲ್ಲಾ ನಿವಾಸಗಳಲ್ಲಿ ನಿರಂತರವಾದ ಕಟ್ಟಳೆಯಾಗಿರುವುದು,’ ” ಎಂದು ಹೇಳಿದರು.


“ಆರೋನನಿಗೂ ಅವನ ಪುತ್ರರಿಗೂ ಆಜ್ಞಾಪಿಸಿ ಹೀಗೆ ಹೇಳು, ‘ಇದು ದಹನಬಲಿಯ ನಿಯಮವಾಗಿದೆ. ದಹನಬಲಿ ಇಡೀ ರಾತ್ರಿ, ಅಂದರೆ ಬೆಳಗಿನವರೆಗೆ ಬಲಿಪೀಠದ ಅಗ್ನಿಕುಂಡದ ಮೇಲೆ ಇರಬೇಕು. ಬಲಿಪೀಠದ ಬೆಂಕಿಯು ಅದರೊಳಗೆ ಸುಡುತ್ತಾ ಇರುವುದು.


ಆಮೇಲೆ ಅವನು ತನ್ನ ಉಡುಪುಗಳನ್ನು ತೆಗೆದುಹಾಕಿ, ಬೇರೆ ಉಡುಪುಗಳನ್ನು ಧರಿಸಿಕೊಂಡು, ಆ ಬೂದಿಯನ್ನು ಪಾಳೆಯದ ಆಚೆಗೆ ಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.


ಮೋಶೆಯು ಆರೋನನೊಂದಿಗೂ ಉಳಿದ ಅವನ ಪುತ್ರರಾದ ಎಲಿಯಾಜರನೊಂದಿಗೂ ಈತಾಮಾರನೊಂದಿಗೂ ಮಾತನಾಡಿ, “ಯೆಹೋವ ದೇವರಿಗೆ ಬೆಂಕಿಯಿಂದ ಮಾಡಿದ ಬಲಿಗಳಲ್ಲಿ ಉಳಿದಿರುವ ಧಾನ್ಯ ಸಮರ್ಪಣೆಯನ್ನು ತೆಗೆದುಕೊಳ್ಳಿರಿ ಮತ್ತು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿಯಿಲ್ಲದ ರೊಟ್ಟಿ ತಿನ್ನಿರಿ. ಏಕೆಂದರೆ ಅದು ಮಹಾಪರಿಶುದ್ಧವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು