Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:10 - ಕನ್ನಡ ಸಮಕಾಲಿಕ ಅನುವಾದ

10 ಐವತ್ತನೆಯ ವರ್ಷವನ್ನು ಪರಿಶುದ್ಧಮಾಡಿ ದೇಶದಲ್ಲಿ ಎಲ್ಲಾ ನಿವಾಸಿಗಳಿಗೆ ಬಿಡುಗಡೆಯನ್ನು ಪ್ರಕಟಿಸಬೇಕು. ಅದು ನಿಮಗೆ ಐವತ್ತನೆಯ ವರ್ಷದ ವಾರ್ಷಿಕೋತ್ಸವವಾಗಿರಬೇಕು. ನಿಮ್ಮಲ್ಲಿ ಪ್ರತಿಯೊಬ್ಬನು ಅವನವನ ಆಸ್ತಿಗೂ, ಅವನವನ ಕುಟುಂಬಕ್ಕೂ, ಹಿಂದಿರುಗಿ ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನೀವು ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಿ, ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತು ಎಂಬುದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಮತ್ತು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನೀವು ಆ ಐವತ್ತನೆಯ ವರ್ಷವನ್ನು ದೇವರಿಗೆ ಮೀಸಲಾದ ವರ್ಷವೆಂದು ಭಾವಿಸಬೇಕು. ಆ ವರ್ಷ ನಾಡಿನ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂದು ಸಾರಬೇಕು. ಅದು ‘ಜೂಬಿಲಿ’ ಸಂವತ್ಸರವಾದುದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂಮಿಗಳಿಗೂ ಹಾಗು ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನೀವು ಐವತ್ತನೆಯ ವರುಷವನ್ನು ದೇವರಿಗೆ ಮೀಸಲಾದ ವರುಷವೆಂದು ಭಾವಿಸಿ ಅದರಲ್ಲಿ ದೇಶದ ನಿವಾಸಿಗಳೆಲ್ಲರಿಗೂ ಬಿಡುಗಡೆಯಾಯಿತೆಂಬದಾಗಿ ಸಾರಬೇಕು. ಅದು ಜೂಬಿಲಿ ಸಂವತ್ಸರವಾದದರಿಂದ ನೀವೆಲ್ಲರು ನಿಮ್ಮ ನಿಮ್ಮ ಸ್ವಂತ ಭೂವಿುಗಳಿಗೂ ಸ್ವಜನರ ಬಳಿಗೂ ಹೋಗಿ ಇರಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಐವತ್ತನೆಯ ವರ್ಷವನ್ನು ನೀವು ವಿಶೇಷ ವರ್ಷವನ್ನಾಗಿ ಮಾಡಬೇಕು. ನಿಮ್ಮ ದೇಶದಲ್ಲಿ ವಾಸಿಸುವ ಜನರೆಲ್ಲರಿಗೆ ನೀವು ಸ್ವಾತಂತ್ರ್ಯವನ್ನು ಘೋಷಿಸಬೇಕು. ಈ ಸಮಯವು ‘ಜ್ಯೂಬಿಲಿ’ ಎಂಬುದಾಗಿ ಕರೆಯಲ್ಪಡುವುದು. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಸ್ವಾಸ್ತ್ಯಕ್ಕೆ ಹಿಂತಿರುಗಿ ಹೋಗುವನು; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಕುಟುಂಬಕ್ಕೆ ಹಿಂತಿರುಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:10
30 ತಿಳಿವುಗಳ ಹೋಲಿಕೆ  

ಗುಲಾಮರಿಗೆ ಸ್ವಾತಂತ್ರ್ಯವನ್ನು ಘೋಷಿಸಲು ಅರಸನಾದ ಚಿದ್ಕೀಯನು ಯೆರೂಸಲೇಮಿನ ಎಲ್ಲಾ ಜನರೊಂದಿಗೆ ಒಡಂಬಡಿಕೆಯನ್ನು ಮಾಡಿದ ನಂತರ ಯೆಹೋವ ದೇವರಿಂದ ಯೆರೆಮೀಯನಿಗೆ ಈ ಮಾತು ಬಂದಿತು.


ಏಕೆಂದರೆ ಮುಯ್ಯಿಗೆ ಮುಯ್ಯಿ ತೀರಿಸುವ ದಿವಸವು ನನ್ನ ಹೃದಯದಲ್ಲಿದೆ. ನಾನು ವಿಮೋಚಿಸಿದವರ ವರುಷವು ಬಂತು.


ಸ್ವತಂತ್ರರಾಗಿರಿ, ಆದರೆ ಕೆಟ್ಟತನವನ್ನು ಮರೆಮಾಡುವುದಕ್ಕೆ ನಿಮ್ಮ ಸ್ವಾತಂತ್ರ್ಯವನ್ನು ಉಪಯೋಗಿಸಬೇಡಿರಿ. ದೇವರ ಸೇವಕರಂತೆಯೇ ಬಾಳಿರಿ.


ಪ್ರಿಯರೇ, ನೀವು ಸ್ವಾತಂತ್ರ್ಯಕ್ಕಾಗಿ ಕರೆಹೊಂದಿದವರು. ಆದರೆ ಆ ಸ್ವಾತಂತ್ರ್ಯವನ್ನು ಶಾರೀರಿಕ ಅನುಕೂಲಕ್ಕಾಗಿ ಉಪಯೋಗಿಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ದೀನರಾಗಿ ಸೇವೆಮಾಡಿರಿ.


“ ‘ಜೂಬಿಲಿಯ ಈ ವರ್ಷದಲ್ಲಿ ಪ್ರತಿಯೊಬ್ಬನು ತನ್ನ ಆಸ್ತಿಗೆ ಹಿಂದಿರುಗಬೇಕು.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಹಾಗರ್ ಅರೇಬಿಯಾದಲ್ಲಿರುವ ಸೀನಾಯಿ ಪರ್ವತ. ಅದು ಈಗಿನ ಯೆರೂಸಲೇಮಿಗೆ ಸರಿಹೊಂದುತ್ತಾಳೆ. ಏಕೆಂದರೆ ಆಕೆಯು ಈಗಲೂ ತನ್ನ ಮಕ್ಕಳ ಸಹಿತ ದಾಸ್ಯದಲ್ಲಿದ್ದಾಳೆ.


ಕರ್ತದೇವರೇ ಆತ್ಮರಾಗಿದ್ದಾರೆ. “ಕರ್ತದೇವರ ಆತ್ಮವು ಎಲ್ಲಿರುತ್ತದೋ ಅಲ್ಲಿ ಸ್ವಾತಂತ್ರ್ಯವಿರುವುದು.”


ನಾವು ನಮ್ಮ ಶತ್ರುಗಳ ಕೈಯಿಂದ ಬಿಡುಗಡೆಹೊಂದಿ ನಿರ್ಭಯವುಳ್ಳವರಾಗಿಯೂ


ಅವರು ದಬ್ಬಾಳಿಕೆಯಾದ ನ್ಯಾಯತೀರಿಸುತ್ತಾರೆ, ಹಸಿದವರಿಗೆ ಆಹಾರವನ್ನು ಕೊಡುತ್ತಾರೆ. ಯೆಹೋವ ದೇವರು ಸೆರೆಯವರನ್ನು ಬಿಡಿಸುತ್ತಾರೆ.


ನೀನು ಬಂಧಿತರಿಗೆ, ‘ಹೊರಗೆ ಬನ್ನಿರಿ,’ ಕತ್ತಲೆಯಲ್ಲಿರುವವರಿಗೆ, ‘ಬೆಳಕಿಗೆ ಬನ್ನಿರಿ,’ ಎಂದು ಹೇಳಬಹುದು. “ಅವರು ದಾರಿಗಳಲ್ಲಿ ಮೇಯಿಸುವರು. ಅವರ ಎಲ್ಲಾ ಎತ್ತರವಾದ ಪ್ರದೇಶಗಳೂ ಕೂಡ ಅವರಿಗೆ ಹುಲ್ಲುಗಾವಲಾಗಿರುವುವು.


ನಿಮ್ಮಲ್ಲಿ ಯಾರು ಅವರ ಪ್ರಜೆಗಳಾಗಿರುತ್ತೀರೋ, ಅಂಥವರು ಯೆಹೂದ, ಯೆರೂಸಲೇಮಿಗೆ ಹೋಗಿ, ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವ ದೇವರಿಗೆ ಒಂದು ದೇವಾಲಯವನ್ನು ಕಟ್ಟಲಿ, ಅವರ ಸಂಗಡ ಅವರ ದೇವರು ಇರಲಿ!


ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು.


“ ‘ಈ ವರುಷಗಳಲ್ಲಿ ಅವನು ಬಿಡಿಸಿಕೊಳ್ಳದೆ ಹೋದರೆ, ಜೂಬಿಲಿ ಸಂವತ್ಸರದಲ್ಲಿ ಅವನು ಮಕ್ಕಳೊಂದಿಗೆ ಬಿಡುಗಡೆಯಾಗಬೇಕು.


ಆದರೆ ಆತನು ತನ್ನ ಸೊತ್ತಿನೊಳಗಿಂದ ತನ್ನ ಸೇವಕರಲ್ಲಿ ಒಬ್ಬರಿಗೆ ದಾನವಾಗಿ ಕೊಟ್ಟರೆ, ಅದು ಬಿಡುಗಡೆ ವರ್ಷದವರೆಗೂ ಅವನಿಗಾಗಿದ್ದು ಆಮೇಲೆ ಮತ್ತೆ ರಾಜಕುಮಾರನಿಗೆ ಸೇರಬೇಕು. ಅವನ ಸೊತ್ತು ಅವನ ಮಕ್ಕಳಿಗೆ ಮಾತ್ರ ಸೇರಬೇಕು. ಇದು ಅವರದೇ.


ತರುವಾಯ ಅವನು ನಿನ್ನ ಬಳಿಯಿಂದ ತನ್ನ ಮಕ್ಕಳೊಂದಿಗೆ ಹೊರಟು ತನ್ನ ಕುಟುಂಬಕ್ಕೆ ಹಿಂದಿರುಗಬೇಕು. ತನ್ನ ಪಿತೃಗಳ ಸೊತ್ತಿಗೂ ಅವನು ಹಿಂದಿರುಗಬೇಕು.


ಆಗ ಒಡಂಬಡಿಕೆಯಲ್ಲಿ ಸೇರಿದ ಪ್ರಧಾನರೆಲ್ಲರೂ ಜನರೆಲ್ಲರೂ ತಮ್ಮ ದಾಸದಾಸಿಯರನ್ನು ಬಿಡುಗಡೆ ಮಾಡುವುದಾಗಿ ಒಪ್ಪಿಕೊಂಡರು. ಇನ್ನು ಮುಂದೆ ಅವರನ್ನು ದಾಸತ್ವದಲ್ಲಿ ಇಟ್ಟುಕೊಳ್ಳುವುದಿಲ್ಲ ಎಂದು ಅವರು ಒಪ್ಪಿದರು ಮತ್ತು ಅವರನ್ನು ಬಿಡುಗಡೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು