ಯಾಜಕಕಾಂಡ 25:11 - ಕನ್ನಡ ಸಮಕಾಲಿಕ ಅನುವಾದ11 ಐವತ್ತನೆಯ ಆ ವರುಷವು ನಿಮಗೆ ಜೂಬಿಲಿಯಾಗಿರುವುದು. ನೀವು ಬಿತ್ತಲೂಬಾರದು ಮತ್ತು ತನ್ನಷ್ಟಕ್ಕೆ ತಾನೇ ಬೆಳೆಯುವುದನ್ನು ಕೊಯ್ಯಲೂಬಾರದು ಇಲ್ಲವೆ ಕತ್ತರಿಸದಿದ್ದ ದ್ರಾಕ್ಷಿಬಳ್ಳಿಗಳಲ್ಲಿ ದ್ರಾಕ್ಷಿಹಣ್ಣುಗಳನ್ನು ಕೂಡಿಸಲೂಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ಐವತ್ತನೆಯ ವರ್ಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು, ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬೆಳದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಆ ಐವತ್ತನೆಯ ವರ್ಷದಲ್ಲಿ, ಅಂದರೆ ‘ಜೂಬಿಲಿ’ ಸಂವತ್ಸರದಲ್ಲಿ ನೀವು ಬಿತ್ತನೆ ಮಾಡಬಾರದು; ತಾನಾಗಿ ಬೆಳೆದ ಫಸಲನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ಕೃಷಿಮಾಡದೆ ಬಿಟ್ಟ ದ್ರಾಕ್ಷೀತೋಟದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆ ಐವತ್ತನೆಯ ವರುಷದಲ್ಲಿ ಅಂದರೆ ಜೂಬಿಲಿ ಸಂವತ್ಸರದಲ್ಲಿ ನೀವು ಬೀಜವನ್ನು ಬಿತ್ತಬಾರದು; ತಾನಾಗಿ ಬೆಳೆದ ಪೈರನ್ನು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಆದ ಹಣ್ಣನ್ನು ಸಂಗ್ರಹಿಸಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಐವತ್ತನೆಯ ವರ್ಷವು ನಿಮಗೆ ವಿಶೇಷವಾದ ಆಚರಣೆಯಾಗಿರುವುದು. ಬೀಜವನ್ನು ಬಿತ್ತಬೇಡಿರಿ. ತನ್ನಷ್ಟಕ್ಕೆ ತಾನೇ ಬೆಳೆದ ಪೈರುಗಳನ್ನು ಕೊಯ್ಯಬೇಡಿರಿ. ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಿಂದ ದ್ರಾಕ್ಷಿಯನ್ನು ಸಂಗ್ರಹಿಸಬೇಡಿರಿ. ಅಧ್ಯಾಯವನ್ನು ನೋಡಿ |