Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:17 - ಕನ್ನಡ ಸಮಕಾಲಿಕ ಅನುವಾದ

17 ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಆದುದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯ ಮಾಡಬಾರದು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ನಿಮ್ಮ ದೇವರಾದ ಸರ್ವೇಶ್ವರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು; ನಿಮ್ಮ ದೇವರಿಗೆ ಭಯಪಡುವವರಾಗಿರಬೇಕು; ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನೀವು ಒಬ್ಬರಿಗೊಬ್ಬರು ಮೋಸ ಮಾಡಬಾರದು. ನೀವು ದೇವರಿಗೆ ಭಯಪಡಬೇಕು! ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:17
32 ತಿಳಿವುಗಳ ಹೋಲಿಕೆ  

“ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


“ ‘ಕಿವುಡನನ್ನು ಶಪಿಸಬಾರದು. ಇಲ್ಲವೆ ಕಣ್ಣು ಕಾಣದವನನ್ನು ಮುಗ್ಗರಿಸುವಂತೆ ಮಾಡಬಾರದು. ನಿಮ್ಮ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.


ನೀನು ಕಠಿಣವಾಗಿ ಅವನ ಮೇಲೆ ಅಧಿಕಾರ ಚಲಾಯಿಸಬಾರದು. ನಿನ್ನ ದೇವರಿಗೆ ಭಯಪಡಬೇಕು.


ಆಗ ಮೋಶೆಯು ಜನರಿಗೆ, “ಭಯಪಡಬೇಡಿರಿ. ಏಕೆಂದರೆ ನಿಮ್ಮನ್ನು ಪರೀಕ್ಷಿಸುವುದಕ್ಕೋಸ್ಕರವೂ ನೀವು ಪಾಪಮಾಡದಂತೆ ಅವರ ಭಯವು ನಿಮಗಿರಲೆಂದೂ ದೇವರು ಬಂದಿದ್ದಾರೆ,” ಎಂದನು.


ಮೂರನೆಯ ದಿನದಲ್ಲಿ ಯೋಸೇಫನು ಅವರಿಗೆ, “ನಾನು ದೇವರಿಗೆ ಭಯಪಡುವವನಾಗಿದ್ದೇನೆ.


ಈ ವಿಷಯದಲ್ಲಿ ಯಾರೂ ಅತಿಕ್ರಮಿಸಿ ತಮ್ಮ ಸಹೋದರ ಸಹೋದರಿಯನ್ನು ವಂಚಿಸದಿರಲಿ. ಏಕೆಂದರೆ ನಾವು ಮೊದಲು ತಿಳಿಸಿ ನಿಮಗೆ ಗಂಭೀರವಾಗಿ ಎಚ್ಚರಿಸಿದಂತೆ ಈ ಪಾಪಗಳ ವಿಷಯದಲ್ಲಿ ಕರ್ತ ಯೇಸುವು ಮುಯ್ಯಿಗೆ ಮುಯ್ಯಿ ತೀರಿಸುವವರಾಗಿದ್ದಾರೆ.


ಅದು ನಿಜವೆ, ಆದರೆ ಅವರ ಅವಿಶ್ವಾಸದಿಂದಲೇ ಅವರನ್ನು ಮುರಿದು ಹಾಕಲಾಯಿತು. ನೀನಾದರೋ ವಿಶ್ವಾಸದಿಂದಲೇ ಇನ್ನೂ ನಿಂತಿರುವೆ. ಗರ್ವಪಡದೆ ಭಯದಿಂದಿರು.


“ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”


ದೇವರು ಪ್ರತಿಯೊಂದು ದೇಶದಲ್ಲಿಯೂ ತಮಗೆ ಭಯಪಡುವ ಮತ್ತು ಸರಿಯಾದದ್ದನ್ನು ಮಾಡುವ ಜನರನ್ನು ಸ್ವೀಕರಿಸುತ್ತಾರೆ.


ಅವನೂ ಅವನ ಕುಟುಂಬದವರು ಭಕ್ತಿವಂತರೂ ದೇವರಿಗೆ ಭಯಪಡುವವರೂ ಆಗಿದ್ದರು. ಅವನು ಕೊರತೆಯಲ್ಲಿರುವವರಿಗೆ ಧಾರಾಳವಾಗಿ ಕೊಡುತ್ತಿದ್ದನು. ಅವನು ಅನುದಿನವೂ ದೇವರಿಗೆ ಪ್ರಾರ್ಥನೆ ಮಾಡುತ್ತಿದ್ದನು.


ಆ ಸಮಯದಲ್ಲಿ ಯೂದಾಯ, ಗಲಿಲಾಯ, ಸಮಾರ್ಯದಲ್ಲೆಲ್ಲಾ ಇದ್ದ ಸಭೆಯು ಸಮಾಧಾನ ಹೊಂದಿತು. ಸಭೆ ಬಲಗೊಂಡು ಪವಿತ್ರಾತ್ಮರಿಂದ ಧೈರ್ಯಹೊಂದಿ ಸಂಖ್ಯೆಯಲ್ಲಿ ವೃದ್ಧಿಸುತ್ತಾ, ಕರ್ತ ಯೇಸುವಿನ ಭಯದಲ್ಲಿ ಮುನ್ನಡೆಯಿತು.


ಆದರೆ ಯಾರಿಗೆ ನೀವು ಭಯಪಡಬೇಕೆಂದು ನಾನು ನಿಮಗೆ ತೋರಿಸುತ್ತೇನೆ: ನಿಮ್ಮ ದೇಹವನ್ನು ಕೊಂದ ಮೇಲೆ, ನರಕದಲ್ಲಿ ಹಾಕುವುದಕ್ಕೆ ಅಧಿಕಾರವಿರುವ ದೇವರಿಗೆ ಭಯಪಡಿರಿ. ಹೌದು, ದೇವರಿಗೇ ಭಯಪಡಿರಿ, ಎಂದು ನಾನು ನಿಮಗೆ ಹೇಳುತ್ತೇನೆ.


“ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುತ್ತೇನೆ. ಆಗ ಮಾಟಗಾರರಿಗೆ, ವ್ಯಭಿಚಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ, ಮತ್ತು ನನಗೆ ಭಯಪಡದಿರುವವರಿಗೂ ನ್ಯಾಯತೀರಿಸಿ, ಶೀಘ್ರಸಾಕ್ಷಿಯಾಗಿರುವೆನು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಬಡವನ ಮತ್ತು ದರಿದ್ರನ ನ್ಯಾಯವನ್ನು ತೀರಿಸಿದನು. ಆಗ ಅವನಿಗೆ ಒಳ್ಳೆಯದಾಯಿತು. ನನ್ನನ್ನು ತಿಳಿದುಕೊಳ್ಳುವುದು ಇದೇ ಅಲ್ಲವೋ?” ಎಂದು ಯೆಹೋವ ದೇವರು ಹೇಳುತ್ತಾರೆ.


ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ; ನ್ಯಾಯಾಲಯದಲ್ಲಿ ದರಿದ್ರರನ್ನು ತುಳಿಯಬೇಡ.


ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ. ಆದರೆ ಮೂರ್ಖರು ಜ್ಞಾನವನ್ನೂ ಶಿಕ್ಷಣವನ್ನೂ ಅಸಡ್ಡೆ ಮಾಡುತ್ತಾರೆ.


ಯೆಹೋವ ದೇವರ ಭಯವು ಶುದ್ಧವಾಗಿದ್ದು, ಎಂದೆಂದಿಗೂ ಶಾಶ್ವತವಾಗಿದೆ. ಯೆಹೋವ ದೇವರ ತೀರ್ಪುಗಳು ಸತ್ಯವಾಗಿದ್ದು, ಅವೆಲ್ಲವೂ ನೀತಿಯುಳ್ಳದ್ದಾಗಿವೆ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ನಾನು ಅವರಿಗೆ, “ನೀವು ಮಾಡುವುದು ಒಳ್ಳೆಯದಲ್ಲ. ಇತರ ದೇಶದವರಾದ ನಮ್ಮ ಶತ್ರುಗಳ ನಿಂದೆಗೆ ಗುರಿಯಾಗದಂತೆ ನೀವು ನಮ್ಮ ದೇವರ ಭಯದಲ್ಲಿ ನಡೆಯಬೇಕಲ್ಲವೇ.


ಆದಕಾರಣ ಯೆಹೋವ ದೇವರ ಭಯವು ನಿಮ್ಮ ಮೇಲೆ ಇರಲಿ. ನೀವು ಜಾಗ್ರತೆಯಾಗಿದ್ದು ನಡೆಯಿರಿ. ಏಕೆಂದರೆ ನಮ್ಮ ದೇವರಾದ ಯೆಹೋವ ದೇವರ ಬಳಿಯಲ್ಲಿ ಅನ್ಯಾಯವಾದರೂ, ಮುಖದಾಕ್ಷಿಣ್ಯವಾದರೂ, ಲಂಚ ತೆಗೆದುಕೊಳ್ಳುವುದಾದರೂ ಇಲ್ಲ,” ಎಂದನು.


ಆದರೆ ನೀವು ಯೆಹೋವ ದೇವರಿಗೆ ಭಯಪಟ್ಟು, ನಿಮ್ಮ ಪೂರ್ಣಹೃದಯದಿಂದ ನಂಬಿಗಸ್ತರಾಗಿ ಅವರನ್ನು ಸೇವಿಸಿರಿ. ಏಕೆಂದರೆ ಅವರು ನಿಮಗೋಸ್ಕರ ಎಂಥ ಮಹತ್ತಾದ ಕಾರ್ಯಗಳನ್ನು ಮಾಡಿದರೆಂದು ಆಲೋಚಿಸಿರಿ.


ಅವರು ಮಾರ್ಗದಲ್ಲಿ ನಿಮಗೆ ಎದುರುಗೊಂಡು, ನೀವು ಆಯಾಸವುಳ್ಳವರಾಗಿಯೂ, ದಣಿದವರಾಗಿಯೂ ಇದ್ದ ಸಮಯದಲ್ಲಿ ನಿಮ್ಮ ಹಿಂದೆ ಇದ್ದ ಬಲಹೀನರೆಲ್ಲರನ್ನು ಹಿಂಭಾಗದಲ್ಲಿ ಸಂಹಾರ ಮಾಡಿದರು. ಅವರಿಗೆ ದೇವರ ಬಗ್ಗೆ ಯಾವ ಭಯವೂ ಇರಲಿಲ್ಲ.


“ ‘ನೆರೆಯವನಿಗೆ ಏನಾದರೂ ಮಾರಾಟ ಮಾಡಿದ್ದರೆ, ಇಲ್ಲವೆ ನೆರೆಯವನಿಂದ ಕೊಂಡುಕೊಂಡಿದ್ದರೆ, ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು.


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ಯೆಹೋವ ದೇವರ ದೂತನು ಅಬ್ರಹಾಮನಿಗೆ, “ಹುಡುಗನ ಮೇಲೆ ಕೈ ಹಾಕಬೇಡ; ಅವನಿಗೆ ಏನೂ ಮಾಡಬೇಡ; ಏಕೆಂದರೆ ನೀನು ದೇವರಿಗೆ ಭಯಪಡುತ್ತೀ ಎಂದು ಈಗ ನಾನು ತಿಳಿದಿದ್ದೇನೆ. ನೀನು ನಿನ್ನ ಒಬ್ಬನೇ ಮಗನನ್ನು ನನಗೆ ಅರ್ಪಿಸುವುದಕ್ಕೆ ಹಿಂಜರಿಯಲಿಲ್ಲ,” ಎಂದು ಹೇಳಿದನು.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು, ಆದರೆ ಬಡವರನ್ನು ಕನಿಕರಿಸುವವನು ದೇವರನ್ನು ಸನ್ಮಾನಿಸುವನು.


“ ‘ನಿಮ್ಮ ನೆರೆಯವನನ್ನು ವಂಚಿಸಬಾರದು. “ ‘ಇಲ್ಲವೆ ಅವನನ್ನು ಸುಲಿದುಕೊಳ್ಳಬಾರದು. ಕೂಲಿಯಾಳಿನ ಕೂಲಿಯು ನಿಮ್ಮ ಬಳಿಯಲ್ಲಿ ರಾತ್ರಿಯೆಲ್ಲಾ ಮತ್ತು ಮುಂಜಾನೆಯವರೆಗೆ ಇರಬಾರದು.


ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ಯೆಹೋವ ದೇವರು ತಮ್ಮ ಪ್ರಜೆಗಳ ಹಿರಿಯರ ಸಂಗಡ, ಮತ್ತು ಅವರ ಅಧಿಪತಿಗಳ ಸಂಗಡ ನ್ಯಾಯತೀರಿಸಲು ಪ್ರವೇಶಿಸುವರು. ಏಕೆಂದರೆ, “ನೀವು ನನ್ನ ದ್ರಾಕ್ಷಿತೋಟವನ್ನು ತಿಂದುಬಿಟ್ಟಿದ್ದೀರಿ. ಬಡವರಿಂದ ಕೊಳ್ಳೆ ಹೊಡೆದದ್ದು ನಿಮ್ಮ ಮನೆಗಳಲ್ಲಿ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು