Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:27 - ಕನ್ನಡ ಸಮಕಾಲಿಕ ಅನುವಾದ

27 ಅವನು ಅದನ್ನು ಮಾರಿದ ವರ್ಷಗಳನ್ನು ಲೆಕ್ಕಿಸಿ, ಅದನ್ನು ಮಾರಿದವನಿಗೆ ಮಿಕ್ಕ ಕ್ರಯವನ್ನು ಪೂರ್ತಿಮಾಡಿ, ತನ್ನ ಸ್ವಂತ ಹೊಲವನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು ಉಳಿದ ಕ್ರಯವನ್ನು ಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಆ ಭೂಮಿಯನ್ನು ಮಾರಿದಂದಿನಿಂದ ಕಳೆದ ವರ್ಷಗಳನ್ನು ಬಿಟ್ಟು, ಉಳಿದ ಅವಧಿಗೆ ಕ್ರಯಕೊಟ್ಟು ತನ್ನ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆ ಭೂವಿುಯನ್ನು ಮಾರಿದಂದಿನಿಂದ ಕಳೆದ ವರುಷಗಳನ್ನು ಬಿಟ್ಟು ವಿುಕ್ಕ ಕ್ರಯವನ್ನು ಕೊಟ್ಟು ತನ್ನ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಆಗ ಅವನು ಭೂಮಿಯನ್ನು ಮಾರಿ ಎಷ್ಟು ವರ್ಷವಾಯಿತೆಂದು ಲೆಕ್ಕ ಮಾಡಬೇಕು. ಅವನು ಆ ಸಂಖ್ಯೆಯನ್ನು ಉಪಯೋಗಿಸಿ ಭೂಮಿಗೆ ಕೊಡತಕ್ಕ ಹಣವನ್ನು ನಿರ್ಧರಿಸಬೇಕು. ಬಳಿಕ ಅವನು ಭೂಮಿಯನ್ನು ಮರಳಿ ಕೊಂಡುಕೊಳ್ಳಬೇಕು. ಆಗ ಭೂಮಿಯು ಮತ್ತೆ ಅವನ ಸ್ವತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:27
5 ತಿಳಿವುಗಳ ಹೋಲಿಕೆ  

ವರ್ಷಗಳು ಹೆಚ್ಚಿದಂತೆಯೇ ಫಲದ ಬೆಲೆಯನ್ನೂ ಹೆಚ್ಚಿಸಬೇಕು. ವರ್ಷಗಳು ಕಡಿಮೆಯಿರುವಂತೆಯೇ ಫಲದ ಬೆಲೆಯನ್ನು ಕಡಿಮೆ ಮಾಡಬೇಕು. ಫಲದ ವರ್ಷಗಳ ಸಂಖ್ಯೆಗನುಸಾರವಾಗಿಯೇ ಅವನು ನಿನಗೆ ಮಾರಾಟಮಾಡಬೇಕು.


ಬಿಡಿಸುವ ಬಂಧುವು ಇಲ್ಲದೆ ಹೋದರೆ, ಮಾರಿದವನೇ ಸ್ಥಿತಿವಂತನಾಗಿ ಅದನ್ನು ಬಿಡಿಸಿಕೊಳ್ಳುವಂತಾದರೆ,


ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.


ನಿಮ್ಮ ಸ್ವಾಧೀನದಲ್ಲಿರುವ ನಿಮ್ಮ ಎಲ್ಲಾ ಭೂಮಿಗೆ ಬಿಡುಗಡೆಯನ್ನು ಕೊಡಬೇಕು.


ಆದರೆ ಜೂಬಿಲಿ ಸಂವತ್ಸರವಾದ ಮೇಲೆ ತನ್ನ ಹೊಲವನ್ನು ಪ್ರತಿಷ್ಠೆ ಮಾಡಿದರೆ, ಜೂಬಿಲಿ ಸಂವತ್ಸರದವರೆಗೆ ಮಿಕ್ಕ ವರ್ಷಗಳ ಲೆಕ್ಕದ ಪ್ರಕಾರ ಯಾಜಕನು ಅವನಿಗೆ ಹಣವನ್ನು ನಿರ್ಧರಿಸಿ, ಕಟ್ಟಿದ ಕ್ರಯದಿಂದ ಕಳೆಯಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು