ಯಾಜಕಕಾಂಡ 25:28 - ಕನ್ನಡ ಸಮಕಾಲಿಕ ಅನುವಾದ28 ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು; ಆಗ ಆ ಭೂಮಿ ಪುನಃ ಮಾರಿದವನ ವಶಕ್ಕೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅವನು ಆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರ್ಷದಲ್ಲಿ ಅದು ಬಿಡುಗಡೆಯಾಗುವುದು. ಆಗ ಆ ಭೂಮಿ ಮರಳಿ ಅವನ ವಶಕ್ಕೆ ಬರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅವನು ಆ ಭೂವಿುಯನ್ನು ಸ್ವಾಧೀನಪಡಿಸಿಕೊಳ್ಳಲಾರದೆ ಹೋದರೆ ಅದು ಜೂಬಿಲಿ ಸಂವತ್ಸರದ ತನಕ ಕೊಂಡುಕೊಂಡವನ ವಶದಲ್ಲೇ ಇರಬೇಕು. ಜೂಬಿಲಿ ವರುಷದಲ್ಲಿ ಅದು ಬಿಡುಗಡೆಯಾಗುವದು; ಆಗ ಆ ಭೂವಿು ತಿರಿಗಿ ಅವನ ವಶಕ್ಕೆ ಬರುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಭೂಮಿಯನ್ನು ಮರಳಿ ಕೊಂಡುಕೊಳ್ಳಲು ಬೇಕಾದಷ್ಟು ಹಣ ಅವನಿಗೆ ದೊರಕದಿದ್ದರೆ, ಅವನು ಆ ಭೂಮಿಯನ್ನು ಯಾರಿಗೆ ಮಾರಿದ್ದಾನೋ ಅವನ ವಶದಲ್ಲಿ ಜ್ಯೂಬಿಲಿ ವರ್ಷದವರೆಗೆ ಇಡಬೇಕು. ಬಳಿಕ ಆ ವಿಶೇಷ ಬಿಡುಗಡೆಯ ಕಾಲದಲ್ಲಿ ಭೂಮಿಯು ಮೊದಲಿನ ಯಜಮಾನನ ಕುಟುಂಬಕ್ಕೆ ಮರಳಿ ಹೋಗುವುದು. ಹೀಗಾಗಿ ಆಸ್ತಿಯು ಮತ್ತೆ ಅದರ ಸರಿಯಾದ ಕುಟುಂಬಕ್ಕೆ ಸೇರುವುದು. ಅಧ್ಯಾಯವನ್ನು ನೋಡಿ |