Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:29 - ಕನ್ನಡ ಸಮಕಾಲಿಕ ಅನುವಾದ

29 “ ‘ಇದಲ್ಲದೆ ಒಬ್ಬನು ಗೋಡೆಯುಳ್ಳ ಪಟ್ಟಣದಲ್ಲಿರುವ ನಿವಾಸದ ಮನೆಯನ್ನು ಮಾರಿದರೆ, ಅದನ್ನು ಮಾರಿದ ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡುಗಡೆ ಮಾಡಬೇಕು. ಒಂದು ಪೂರ್ಣ ವರ್ಷದೊಳಗಾಗಿ ಅದನ್ನು ಬಿಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ಯಾವನಾದರು ಕೋಟೆಯಿರುವ ಪಟ್ಟಣದ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನದಿಂದ ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು. ಒಂದು ವರ್ಷ ಪೂರ್ತಿ ಅದನ್ನು ಬಿಡಿಸುವ ಹಕ್ಕು ಅವನಿಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರುಷ ಪೂರ್ತಿಯಾಗುವದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರುಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಯಾವನಾದರೂ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ, ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ಣಗೊಳ್ಳುವವರೆಗೆ ಹಿಂದಕ್ಕೆ ಪಡೆಯುವ ಹಕ್ಕು ಅವನಿಗೆ ಇನ್ನೂ ಇರುತ್ತದೆ. ಮನೆಯನ್ನು ಬಿಡಿಸಿಕೊಳ್ಳುವ (ಮರಳಿ ಪಡೆಯುವ) ಹಕ್ಕು ಒಂದು ವರ್ಷದವರೆಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:29
4 ತಿಳಿವುಗಳ ಹೋಲಿಕೆ  

ತಿರುಗಿ ಸಲ್ಲಿಸುವುದಕ್ಕೆ ಅವನಿಗೆ ಆಗದಿದ್ದರೆ, ಅವನು ಮಾರಿದ್ದು ಜೂಬಿಲಿಯ ವರ್ಷದವರೆಗೆ ಕೊಂಡುಕೊಂಡವನ ಕೈಯಲ್ಲಿ ಇರಬೇಕು ಮತ್ತು ಸಂಭ್ರಮದ ವರ್ಷದಲ್ಲಿ ಅದು ಬಿಡುಗಡೆಯಾಗಬೇಕು, ಅವನು ತನ್ನ ಸೊತ್ತನ್ನು ಪಡೆಯಬೇಕು.


ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು.


ಅದಕ್ಕೆ ಆಕೆಯ ಸಹೋದರನೂ, ತಾಯಿಯೂ, “ಹುಡುಗಿಯು ಕೆಲವು ದಿನ ಇರಲಿ. ಹತ್ತು ದಿನಗಳಾದರೂ ನಮ್ಮ ಬಳಿಯಲ್ಲಿ ಇದ್ದು ತರುವಾಯ ಹೋಗಲಿ,” ಎಂದರು.


“ ‘ಒಬ್ಬನು ತನ್ನ ಮನೆಯನ್ನು ಯೆಹೋವ ದೇವರಿಗೆ ಪರಿಶುದ್ಧವಾಗಿರಲೆಂದು ಪ್ರತಿಷ್ಠೆಪಡಿಸಿದರೆ, ಯಾಜಕನು ಅದು ಒಳ್ಳೆಯದೋ, ಕೆಟ್ಟದ್ದೋ ಎಂದು ಪರೀಕ್ಷಿಸಿ ಕ್ರಯವನ್ನು ಕಟ್ಟಬೇಕು. ಯಾಜಕನು ನಿರ್ಧರಿಸಿದ ಬೆಲೆಯೇ ಸ್ಥಿರವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು