ಯಾಜಕಕಾಂಡ 25:30 - ಕನ್ನಡ ಸಮಕಾಲಿಕ ಅನುವಾದ30 ಆದರೆ ವರ್ಷವು ಪೂರ್ಣವಾಗುವುದರೊಳಗಾಗಿ ಅದು ಬಿಡುಗಡೆಯಾಗದಿದ್ದರೆ, ಗೋಡೆಯ ಪಟ್ಟಣದೊಳಗಿರುವ ಆ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಜೂಬಿಲಿಯ ವರ್ಷದಲ್ಲಿ ಅದು ಬಿಡುಗಡೆಯಾಗಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಕೋಟೆಯಿರುವ ಪಟ್ಟಣದ ಆ ಮನೆಯನ್ನು ಒಂದು ವರ್ಷದೊಳಗೆ ಬಿಡಿಸಲಾಗದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲೂ ಬಿಡುಗಡೆ ಆಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ಉಳಿಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರುಷದೊಳಗಾಗಿ ಬಿಡಿಸಲ್ಪಡದೆ ಹೋದರೆ ಅದು ಜೂಬಿಲಿ ಸಂವತ್ಸರದಲ್ಲಿಯೂ ಬಿಡುಗಡೆಯಾಗದೆ ಕ್ರಯಕೊಟ್ಟವನಿಗೂ ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಆದರೆ ಮಾಲಿಕನು ಒಂದು ವರ್ಷ ಪೂರ್ಣಗೊಳ್ಳುವ ಮೊದಲು ಮನೆಯನ್ನು ಮರಳಿ ಕೊಂಡುಕೊಳ್ಳದಿದ್ದರೆ, ಆಗ ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯು ಅದನ್ನು ಕೊಂಡುಕೊಂಡವನಿಗೂ ಅವನ ಸಂತತಿಯವರಿಗೂ ಸೇರುವುದು. ಮನೆಯು ಜ್ಯೂಬಿಲಿ ವರ್ಷದಲ್ಲಿ ಅದರ ಮೊದಲಿನ ಯಜಮಾನನಿಗೆ ಸೇರುವುದಿಲ್ಲ. ಅಧ್ಯಾಯವನ್ನು ನೋಡಿ |