Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:33 - ಕನ್ನಡ ಸಮಕಾಲಿಕ ಅನುವಾದ

33 ಲೇವಿಯರಿಂದ ಏನಾದರೂ ಕೊಂಡುಕೊಂಡರೆ, ಕೊಂಡುಕೊಂಡ ಮನೆಯೂ, ಅವನ ಸ್ವಾಸ್ತ್ಯದ ಪಟ್ಟಣವೂ ಜೂಬಿಲಿಯ ವರ್ಷದಲ್ಲಿ ಬಿಡುಗಡೆಯಾಗಬೇಕು. ಏಕೆಂದರೆ ಲೇವಿಯರ ಪಟ್ಟಣಗಳ ಮನೆಗಳು ಇಸ್ರಾಯೇಲರ ಮಧ್ಯದಲ್ಲಿ ಅವರಿಗೆ ಸ್ವಾಧೀನವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ, ಲೇವಿಯರ ಸ್ವಂತವಾಗಿರುವ ಅಂತಹ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಲೇವಿಯರಲ್ಲಿ ಯಾರೂ ಅದನ್ನು ಬಿಡಿಸದೆ ಹೋದರೆ ಲೇವಿಯರ ಸೊತ್ತಾದ ಅಂಥ ಪೇಟೆಮನೆ ಮಾರಾಟವಾಗಿದ್ದರೂ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವುದು. ಏಕೆಂದರೆ ಇಸ್ರಯೇಲರ ಮಧ್ಯೆಯಿರುವ ಲೇವಿಯರ ಪೇಟೆಮನೆಗಳು ಅವರ ಶಾಶ್ವತ ಸೊತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಲೇವಿಯರೊಳಗೆ ಯಾರೂ ಅದನ್ನು ಬಿಡಿಸದೆಹೋದರೆ ಲೇವಿಯರ ಸ್ವಂತವಾಗಿರುವ ಅಂಥ ಪಟ್ಟಣಗಳಲ್ಲಿ ಮಾರಲ್ಪಟ್ಟ ಮನೆ ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗುವದು. ಲೇವಿಯರ ಪಟ್ಟಣಗಳಲ್ಲಿನ ಮನೆಗಳು ಇಸ್ರಾಯೇಲ್ಯರ ಮಧ್ಯದಲ್ಲಿರುವ ಅವರ ಸ್ವಾಸ್ತ್ಯವಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಒಬ್ಬನು ಲೇವಿಯಿಂದ ಮನೆಯನ್ನು ಕೊಂಡುಕೊಂಡರೆ, ಲೇವಿಯರ ಪಟ್ಟಣದಲ್ಲಿರುವ ಆ ಮನೆಯು ಜ್ಯೂಬಿಲಿ ಸಮಯದಲ್ಲಿ ತಿರುಗಿ ಲೇವಿಯರಿಗೆ ಸೇರುವುದು. ಯಾಕೆಂದರೆ ಲೇವಿಯರ ಪಟ್ಟಣಗಳಲ್ಲಿರುವ ಮನೆಗಳು ಲೇವಿ ಕುಟುಂಬಕ್ಕೆ ಸೇರಿದ್ದಾಗಿವೆ. ಇಸ್ರೇಲ್ ಜನರು ಆ ಪಟ್ಟಣಗಳನ್ನು ಲೇವಿಯರಿಗೆ ಕೊಟ್ಟಿದ್ದಾರೆ. ಅವು ಇಸ್ರೇಲರ ಮಧ್ಯದಲ್ಲಿರುವ ಲೇವಿಯರ ಆಸ್ತಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:33
4 ತಿಳಿವುಗಳ ಹೋಲಿಕೆ  

“ ‘ಲೇವಿಯರ ಪಟ್ಟಣಗಳ ವಿಷಯವಾಗಿಯೂ, ಅವರ ಸ್ವಾಧೀನವಾಗಿರುವ ಪಟ್ಟಣಗಳ ಮನೆಗಳ ವಿಷಯವಾಗಿಯೂ ಲೇವಿಯರು ಯಾವ ಸಮಯದಲ್ಲಿಯಾದರೂ ಬಿಡಿಸಿಕೊಳ್ಳಬಹುದು.


ಆದರೆ ಅವರ ಪಟ್ಟಣಗಳ ಉಪನಗರಗಳ ಹೊಲವನ್ನು ಮಾರಬಾರದು. ಏಕೆಂದರೆ ಅದು ಅವರಿಗೆ ಶಾಶ್ವತವಾದ ಸೊತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು