Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:36 - ಕನ್ನಡ ಸಮಕಾಲಿಕ ಅನುವಾದ

36 ನೀನು ಅವನಿಂದ ಬಡ್ಡಿಯನ್ನಾಗಲಿ ಇಲ್ಲವೆ ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನಿನ್ನ ಸಹೋದರನು ನಿನ್ನೊಂದಿಗೆ ಬದುಕುವಂತೆ ನಿನ್ನ ದೇವರಿಗೆ ಭಯಪಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ನೀವು ಅವನಿಂದ ಬಡ್ಡಿಯನ್ನಾಗಲಿ ಅಥವಾ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅವನಿಂದ ಬಡ್ಡಿಯನ್ನಾಗಲಿ, ಲಾಭವನ್ನಾಗಲಿ ತೆಗೆದುಕೊಳ್ಳಬಾರದು. ನೀವು ದೇವರಲ್ಲಿ ಭಯಭಕ್ತಿಯಿಟ್ಟು, ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೋಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ನೀವು ಅವನಿಂದ ಬಡ್ಡಿಯನ್ನಾಗಲಿ ಲಾಭವನ್ನಾಗಲಿ ತೆಗೆದುಕೊಳ್ಳಬಾರದು; ಅವನು ನಿಮ್ಮ ಬಳಿಯಲ್ಲಿ ಬದುಕುವಂತೆ ನೀವು ದೇವರಲ್ಲಿ ಭಯಭಕ್ತಿಯುಳ್ಳವರಾಗಿ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಅವನಿಗೆ ನೀವು ಸಾಲ ಕೊಡುವ ಹಣದ ಮೇಲೆ ಬಡ್ಡಿಯನ್ನು ಹೊರಿಸಬಾರದು. ದೇವರನ್ನು ಗೌರವಿಸಿರಿ. ನಿಮ್ಮ ಸ್ವಂತ ದೇಶದವನು ನಿಮ್ಮ ಸಂಗಡ ವಾಸಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:36
16 ತಿಳಿವುಗಳ ಹೋಲಿಕೆ  

“ನಿಮ್ಮ ಬಳಿಯಲ್ಲಿ ಬಡವರಾಗಿರುವ ನನ್ನ ಜನರಿಗೆ ಹಣವನ್ನು ಸಾಲವಾಗಿ ಕೊಟ್ಟರೆ, ಅವನಿಂದ ಬಡ್ಡಿ ತೆಗೆದುಕೊಳ್ಳಬಾರದು.


ಬಡ್ಡಿಗೆ ಸಾಲ ಕೊಡದೆ, ಲಾಭವನ್ನು ತೆಗೆದುಕೊಳ್ಳದೆ, ಅನ್ಯಾಯದಿಂದ ತನ್ನ ಕೈಯನ್ನು ಹಿಂತೆಗೆದು ವಾದಿ ಪ್ರತಿವಾದಿಗಳಿಗೆ ಸರಿಯಾಗಿ ನ್ಯಾಯತೀರಿಸಿ,


ತನ್ನ ಕೈಯನ್ನು ಪಾಪ ಮಾಡುವುದರಿಂದ ಹಿಂತೆಗೆದು ಬಡ್ಡಿಯನ್ನೂ, ಲಾಭವನ್ನೂ ತೆಗೆದುಕೊಳ್ಳದೆ, ನನ್ನ ವಿಧಿಗಳನ್ನು ಪಾಲಿಸಿ, ನನ್ನ ನಿಯಮಗಳಲ್ಲಿ ನಡೆದರೆ, ಅವನು ತನ್ನ ತಂದೆಯ ಅಕ್ರಮಗಳ ನಿಮಿತ್ತ ಸಾಯುವುದಿಲ್ಲ, ಅವನು ನಿಶ್ಚಯವಾಗಿ ಬದುಕುವನು.


ಸಾಲಕ್ಕೆ ಬಡ್ಡಿ ತೆಗೆದುಕೊಂಡು, ಲಾಭ ಪಡೆಯುವವನು ಆಗಿದ್ದರೆ, ಅವನು ಬದುಕುವನೋ? ಅವನು ಬದುಕುವುದಿಲ್ಲ, ಅವನು ಈ ಅಸಹ್ಯಗಳನ್ನೆಲ್ಲಾ ಮಾಡಿದ್ದರಿಂದ ಅವನು ಸಾಯುವುದು ನಿಶ್ಚಯ; ತನ್ನ ಮರಣಕ್ಕೆ ತಾನೇ ಕಾರಣ.


ಆದ್ದರಿಂದ ನೀವು ಒಬ್ಬರಿಗೊಬ್ಬರು ಅನ್ಯಾಯಮಾಡಬಾರದು. ಆದರೆ ದೇವರಿಗೆ ನೀನು ಭಯಪಡಬೇಕು. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚ ತೆಗೆದುಕೊಂಡಿದ್ದಾರೆ. ಬಡ್ಡಿಯನ್ನು ಲಾಭವನ್ನೂ ತೆಗೆದುಕೊಂಡಿದ್ದಾರೆ. ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭ ಮಾಡಿಕೊಂಡಿದ್ದಾರೆ. ನನ್ನನ್ನು ಮರೆತುಬಿಟ್ಟಿದ್ದಾರೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.


ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು, ಬಡವರ ಮೇಲೆ ದಯೆ ತೋರಿಸುವವನಿಗೆ ಅದನ್ನು ಕೂಡಿಸುವನು.


ಅವರು ಬಡವರಿಗೆ ಸಾಲ ಕೊಟ್ಟು ಬಡ್ಡಿಕೇಳದವರೂ; ನಿರಪರಾಧಿಯ ಕೇಡಿಗಾಗಿ ಲಂಚ ತೆಗೆದುಕೊಳ್ಳದವರೂ ಆಗಿರಬೇಕು. ಈ ರೀತಿಯಾಗಿ ಬಾಳುವವರು ಎಂದಿಗೂ ಕದಲುವುದಿಲ್ಲ.


ಆದರೆ ನನಗಿಂತ ಮುಂಚೆ ಇದ್ದ ಅಧಿಪತಿಗಳು ಜನರಿಗೆ ಭಾರವಾಗಿದ್ದು, ನಾಲ್ವತ್ತು ಬೆಳ್ಳಿನಾಣ್ಯ ಮೌಲ್ಯದ ರೊಟ್ಟಿಯನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಳ್ಳುತ್ತಿದ್ದರು. ಅವರ ಸೇವಕರು ಸಹ ಜನರ ಮೇಲೆ ದೊರೆತನ ನಡೆಸುತ್ತಾ ಇದ್ದರು. ಆದರೆ ದೇವರ ಭಯದ ನಿಮಿತ್ತ ನಾನು ಹಾಗೆ ಮಾಡಲಿಲ್ಲ.


ನೀನು ಅವನಿಗೆ ಹಣವನ್ನು ಸಾಲವಾಗಿ ಕೊಟ್ಟರೆ ಬಡ್ಡಿಯನ್ನು ಕೇಳಬಾರದು, ನಿನ್ನ ಆಹಾರವನ್ನು ಲಾಭಕ್ಕಾಗಿ ಸಾಲವಾಗಿ ಕೊಡಬೇಡ.


ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೆ; ದಾಸನಿಗೆ ಹೇಗೋ ಹಾಗೆಯೇ ಯಜಮಾನನಿಗೆ; ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ಸಾಲ ಪಡೆಯುವವನಿಗೆ; ಬಡ್ಡಿ ತೆಗೆಯುವವನಿಗೆ ಹೇಗೋ ಹಾಗೆಯೇ ಬಡ್ಡಿ ತರುವವನಿಗೆ ಆಗುವುದು.


ನನ್ನ ತಾಯಿಯೇ, ನನಗೆ ಕಷ್ಟ! ನೀನು ನನ್ನನ್ನು ಭೂಮಿಯ ಮೇಲೆಲ್ಲಾ ವ್ಯಾಜ್ಯಗಾರನಾಗಿಯೂ, ತರ್ಕದವನಾಗಿಯೂ ಹೆತ್ತಿದ್ದೀಯಲ್ಲಾ? ನಾನು ಬಡ್ಡಿಗೆ ಸಾಲ ಕೊಡಲಿಲ್ಲ. ಆದರೂ ಅವರೆಲ್ಲರು ನನ್ನನ್ನು ಶಪಿಸುತ್ತಾರೆ.


ಆಗ ನನ್ನ ಕೋಪವು ಉರಿಯುವುದು. ಖಡ್ಗದಿಂದ ನಿಮ್ಮನ್ನು ಕೊಲ್ಲುವೆನು. ನಿಮ್ಮ ಹೆಂಡತಿಯರು ವಿಧವೆಯರಾಗುವರು. ನಿಮ್ಮ ಮಕ್ಕಳು ದಿಕ್ಕಿಲ್ಲದವರಾಗುವರು.


ಕೆಲವರು, “ಈ ಬರಗಾಲದಲ್ಲಿ ನಾವು ಧಾನ್ಯ ಕೊಂಡುಕೊಳ್ಳುವ ಹಾಗೆ ನಮ್ಮ ಹೊಲಗಳನ್ನೂ, ದ್ರಾಕ್ಷಿತೋಟಗಳನ್ನೂ, ಮನೆಗಳನ್ನೂ ಒತ್ತೆ ಇಟ್ಟೆವು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು