Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:48 - ಕನ್ನಡ ಸಮಕಾಲಿಕ ಅನುವಾದ

48 ಅವನ ಸಹೋದರರಲ್ಲಿ ಒಬ್ಬನು ಈಡುಕೊಟ್ಟು ಅವನನ್ನು ವಿಮೋಚಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

48 ಅವನ ಬಂಧುಗಳಲ್ಲಿ ಯಾರಾದರೂ ಈಡುಕೊಟ್ಟು ಅವನನ್ನು ಬಿಡಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

48 ಅವನ ಸಂಬಂಧಿಕರಲ್ಲಿ ಯಾರಾದರೂ ಅವನನ್ನು ಮರಳಿ ಕೊಂಡುಕೊಳ್ಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:48
9 ತಿಳಿವುಗಳ ಹೋಲಿಕೆ  

ನಾವು ನಮ್ಮ ಸಹೋದರರ ಹಾಗೆಯೇ ಒಂದೇ ರಕ್ತಮಾಂಸದವರಾಗಿದ್ದೇವೆ; ನಮ್ಮ ಮಕ್ಕಳು ಅವರ ಮಕ್ಕಳ ಹಾಗೆಯೇ ಕ್ಷೇಮವಾಗಿದ್ದಾರೆ; ಆದರೂ ನಮ್ಮ ಪುತ್ರಪುತ್ರಿಯರನ್ನೂ ಗುಲಾಮರಾಗುವುದಕ್ಕೆ ತಂದಿದ್ದೇವೆ. ನಮ್ಮ ಪುತ್ರಿಯರಲ್ಲಿ ಕೆಲವರು ಆಗಲೇ ಗುಲಾಮರಾಗಿದ್ದಾರೆ. ಅವರನ್ನು ಬಿಡಿಸಲು ನಮಗೆ ಶಕ್ತಿ ಇಲ್ಲ. ಏಕೆಂದರೆ ನಮ್ಮ ಹೊಲಗಳೂ, ದ್ರಾಕ್ಷಿ ತೋಟಗಳೂ ಪರರ ಪಾಲಾಗಿವೆ,” ಎಂದರು.


“ಇತರ ಜನರಿಗೆ ಗುಲಾಮರಾಗಿ ಮಾರಟವಾಗಿರುವ ಯೆಹೂದ್ಯರಾದ ನಮ್ಮ ಸಹೋದರರನ್ನು ನಾವು ನಮಗೆ ಶಕ್ತಿಯಿದ್ದಷ್ಟು ಬಿಡಿಸುತ್ತಿದ್ದೆವು. ಆದರೆ ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ. ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎಂದೆನು. ಆಗ ಅವರು ಹೇಳಲು ಏನೂ ಸಿಗದ ಕಾರಣ ಅವರು ಮೌನವಾಗಿದ್ದರು.


“ ‘ನಿನ್ನ ಸಹೋದರನು ಬಡವನಾಗಿ ನಿನ್ನ ಬಳಿಯಲ್ಲಿ ಕ್ಷೀಣವಾಗಿ ಬಿದ್ದುಕೊಂಡರೆ, ಅವನು ಪರಕೀಯನಾಗಿದ್ದರೂ, ಪ್ರವಾಸಿಯಾಗಿದ್ದರೂ ಅವನು ನಿನ್ನ ಬಳಿಯಲ್ಲಿ ಬದುಕುವ ಹಾಗೆ ಅವನಿಗೆ ಸಹಾಯಮಾಡಬೇಕು.


“ ‘ನಿಮ್ಮ ಸಹೋದರನು ಬಡತನದ ನಿಮಿತ್ತವಾಗಿ ತನ್ನ ಸೊತ್ತಿನಲ್ಲಿ ಸ್ವಲ್ಪವನ್ನು ಮಾರಿದರೆ, ಅವನ ಬಂಧುವು ಅದನ್ನು ಬಿಡಿಸಿಕೊಳ್ಳಬೇಕು.


“ ‘ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿಯ ಸಂಪತ್ತು ಹೆಚ್ಚಾಗಲಾಗಿ ನಿನ್ನ ಸಹೋದರನು ಅವನ ಬಳಿಯಲ್ಲಿ ಬಡವನಾಗಿ ನಿನ್ನ ಬಳಿಯಲ್ಲಿರುವ ಪರಕೀಯ ಇಲ್ಲವೆ ಪ್ರವಾಸಿ ಇಲ್ಲವೆ ಪರಕೀಯನ ಸಂತತಿಯಲ್ಲಿ ಹುಟ್ಟಿದವನಿಗೆ ತನ್ನನ್ನು ಮಾರಿಕೊಂಡಿದ್ದರೂ ಅವನಿಗೆ ಬಿಡುಗಡೆಯಾಗಬಹುದು.


ಅವನ ಚಿಕ್ಕಪ್ಪನಾಗಲಿ ಇಲ್ಲವೆ ಅವನ ಚಿಕ್ಕಪ್ಪನ ಮಗನಾಗಲಿ ಇಲ್ಲವೆ ಅವನ ಕುಟುಂಬದಲ್ಲಿ ಸಮೀಪವಾಗಿರುವ ಸಂಬಂಧಿಕರಲ್ಲಿ ಯಾರಾಗಲಿ ಅವನನ್ನು ವಿಮೋಚಿಸಬಹುದು. ಇಲ್ಲವೆ ಅವನು ಶಕ್ತನಾಗಿದ್ದರೆ ತನ್ನನ್ನು ತಾನೇ ವಿಮೋಚಿಸಿಕೊಳ್ಳಬಹುದು.


ಪ್ರವಾದಿಗಳ ಗುಂಪಿನಲ್ಲಿದ್ದ ಒಬ್ಬ ಪ್ರವಾದಿಯ ಹೆಂಡತಿ ಎಲೀಷನಿಗೆ ಕೂಗಿ, “ನಿನ್ನ ದಾಸನಾದ ನನ್ನ ಗಂಡನು ಮರಣಹೊಂದಿದನು. ನಿನ್ನ ದಾಸನು ಯೆಹೋವ ದೇವರಿಗೆ ಭಯಪಡುವವನಾಗಿದ್ದನೆಂದು ನೀನು ಬಲ್ಲೆ. ಈಗ ಸಾಲಗಾರನು ನನ್ನ ಇಬ್ಬರು ಮಕ್ಕಳನ್ನು ತನಗೆ ದಾಸರಾಗಿ ತೆಗೆದುಕೊಳ್ಳಲು ಬಂದಿದ್ದಾನೆ,” ಎಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು