ಯಾಜಕಕಾಂಡ 25:5 - ಕನ್ನಡ ಸಮಕಾಲಿಕ ಅನುವಾದ5 ತನ್ನಷ್ಟಕ್ಕೆ ತಾನೇ ಬೆಳೆದಿರುವ ಪೈರನ್ನು ನೀವು ಕೊಯ್ಯಬಾರದು. ಇಲ್ಲವೆ ಕತ್ತರಿಸದಿರುವ ದ್ರಾಕ್ಷಿಯ ಬಳ್ಳಿಯ ದ್ರಾಕ್ಷಿಹಣ್ಣುಗಳನ್ನು ಕೂಡಿಸಬಾರದು. ಏಕೆಂದರೆ ಅದು ದೇಶಕ್ಕೆ ವಿಶ್ರಾಂತಿಯ ವರ್ಷವಾಗಿರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು, ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರ್ಷವೆಲ್ಲಾ ಭೂಮಿಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೊಲದಲ್ಲಿ ತಾನಾಗಿ ಬೆಳೆದ ಫಸಲನ್ನು ನೀವು ಕೂಡಿಸಿಟ್ಟುಕೊಳ್ಳಬಾರದು. ತಾನಾಗಿಯೇ ಬೆಳೆದ ದ್ರಾಕ್ಷಿ ಹಣ್ಣನ್ನು ಶೇಖರಿಸಿಟ್ಟುಕೊಳ್ಳಬಾರದು. ಆ ವರ್ಷ ಪೂರ್ತಿ ಭೂಮಿಗೆ ಸಂಪೂರ್ಣ ವಿಶ್ರಾಂತಿಯಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹೊಲದಲ್ಲಿ ತಾನಾಗಿ ಬೆಳೆದ ಪೈರನ್ನು ನೀವು ಕೂಡಿಸಿಟ್ಟುಕೊಳ್ಳಬಾರದು; ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ಹಣ್ಣನ್ನು ಸಂಗ್ರಹಿಸಬಾರದು. ಆ ವರುಷವೆಲ್ಲಾ ಭೂವಿುಗೆ ಸಂಪೂರ್ಣವಾಗಿ ವಿಶ್ರಾಂತಿಯಿರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಕೊಯ್ಲಿನ ನಂತರ ತನ್ನಷ್ಟಕ್ಕೆ ತಾನೇ ಬೆಳೆದ ಪೈರನ್ನೂ ಕೊಯ್ಯಬಾರದು. ನೀವು ನೋಡಿಕೊಳ್ಳದೆ ಬಿಟ್ಟ ದ್ರಾಕ್ಷಾಲತೆಗಳಲ್ಲಿ ಬಂದ ದ್ರಾಕ್ಷಿಯನ್ನು ಸಂಗ್ರಹಿಸಬಾರದು. ಭೂಮಿಗೆ ಒಂದು ವರ್ಷದ ವಿಶ್ರಾಂತಿಯಿರುವುದು. ಅಧ್ಯಾಯವನ್ನು ನೋಡಿ |