ಯಾಜಕಕಾಂಡ 25:50 - ಕನ್ನಡ ಸಮಕಾಲಿಕ ಅನುವಾದ50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಿನ ಜೂಬಿಲಿ ಸಂವತ್ಸರದವರೆಗೆ ಅವನೊಂದಿಗೆ ಲೆಕ್ಕಮಾಡಬೇಕು. ಅವನ ಮಾರಾಟದ ಕ್ರಯವು ವರುಷಗಳ ಲೆಕ್ಕದ ಪ್ರಕಾರ ಕೂಲಿಯಾಳಿನ ಸಮಯಕ್ಕೆ ತಕ್ಕಂತೆ ಅವನೊಂದಿಗೆ ಅದು ಇರುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕ ಮಾಡುವಂತೆ ಅವನ ವಿಷಯದಲ್ಲಿಯೂ ಲೆಕ್ಕ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 ಅವನು ತನ್ನನ್ನು ಮಾರಿಕೊಂಡ ವರ್ಷ ಮೊದಲುಗೊಂಡು ಮುಂದೆ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರ್ಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಅವನು ತನ್ನನ್ನು ಮಾರಿಕೊಂಡ ವರುಷ ಮೊದಲುಗೊಂಡು ಮುಂದಣ ಜೂಬಿಲಿ ಸಂವತ್ಸರದ ತನಕ ದಣಿಯ ಸಂಗಡ ವರುಷಗಳ ಲೆಕ್ಕವನ್ನು ಮಾಡಿ ಆ ಲೆಕ್ಕದ ಮೇರೆಗೆ ಬಿಡುಗಡೆಯ ಕ್ರಯವನ್ನು ಕೊಡಬೇಕು. ಕೂಲಿಯವನ ವಿಷಯದಲ್ಲಿ ಲೆಕ್ಕಿಸುವಂತೆ ಅವನ ವಿಷಯದಲ್ಲಿಯೂ ಲೆಕ್ಕಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 “ನೀವು ಬೆಲೆಯನ್ನು ತೀರ್ಮಾನಿಸುವುದು ಹೇಗೆಂದರೆ: ಅವನು ತನ್ನನ್ನು ಪರದೇಶಸ್ಥನಿಗೆ ಮಾರಿಕೊಂಡ ದಿನದಿಂದ ಹಿಡಿದು ಮುಂದಿನ ಜ್ಯೂಬಿಲಿ ವರ್ಷದವರೆಗೆ ವರ್ಷಗಳನ್ನು ಲೆಕ್ಕಿಸಿ ಬೆಲೆಯನ್ನು ತೀರ್ಮಾನಿಸಿರಿ. ಯಾಕೆಂದರೆ ಅವನು ತನ್ನನ್ನು ಕೇವಲ ಕೆಲವು ವರ್ಷಗಳವರೆಗೆ ಕೂಲಿಗೆ ಒಪ್ಪಿಸಿದ್ದಾನೆ. ಅಧ್ಯಾಯವನ್ನು ನೋಡಿ |