Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 25:8 - ಕನ್ನಡ ಸಮಕಾಲಿಕ ಅನುವಾದ

8 “ ‘ಇದಲ್ಲದೆ ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ವರ್ಷಗಳ ಕಾಲವು ಒಟ್ಟು ನಾಲ್ವತ್ತೊಂಬತ್ತು ವರ್ಷಗಳಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “‘ಅದಲ್ಲದೆ ಏಳು ವರ್ಷಕ್ಕೊಂದರಂತೆ ಏಳು ಸಬ್ಬತ್ ವರ್ಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಲ್ವತ್ತೊಂಭತ್ತು ವರ್ಷಗಳು ಕಳೆಯಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಅದಲ್ಲದೆ, ಏಳು ವರ್ಷಕ್ಕೆ ಒಂದರಂತೆ ಏಳು ಸಬ್ಬತ್ ವರ್ಷಗಳನ್ನು ಎಣಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲ, ಅಂದರೆ ನಾಲ್ವತ್ತೊಂಬತ್ತು ವರ್ಷಗಳು ಕಳೆದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅದಲ್ಲದೆ ಏಳು ವರುಷಕ್ಕೊಂದರಂತೆ ಏಳು ಸಬ್ಬತ್ ವರುಷಗಳನ್ನು ಲೆಕ್ಕಿಸಬೇಕು. ಆ ಏಳು ಸಬ್ಬತ್ ಸಂವತ್ಸರಗಳ ಕಾಲವು ಅಂದರೆ ನಾಲ್ವತ್ತೊಂಭತ್ತು ವರುಷಗಳು ಕಳೆದ ಮೇಲೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಅದಲ್ಲದೆ, ಏಳು ವರ್ಷಗಳ ಏಳು ಗುಂಪುಗಳನ್ನು ಲೆಕ್ಕಿಸಬೇಕು. ಈ ಏಳು ಗುಂಪುಗಳು ಸೇರಿ ನಲವತ್ತೊಂಭತ್ತು ವರ್ಷಗಳಾಗಿರುವವು. ಆ ಸಮಯದಲ್ಲಿ ಭೂಮಿಗೆ ಏಳು ವರ್ಷಗಳ ವಿಶ್ರಾಂತಿಯಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 25:8
7 ತಿಳಿವುಗಳ ಹೋಲಿಕೆ  

“ ‘ಸಬ್ಬತ್ ದಿನದ ಮಾರನೆಯ ದಿನ ನೀವು ನೈವೇದ್ಯವಾಗಿ ನಿವಾಳಿಸಿದ ಸಿವುಡನ್ನು ತಂದ ದಿನದಿಂದ ಏಳು ವಾರಗಳು ಪೂರ್ಣವಾಗುವವರೆಗೆ ಲೆಕ್ಕಿಸಬೇಕು.


ದೇವರು ತಮ್ಮ ಕಾರ್ಯಗಳನ್ನೆಲ್ಲಾ ಮುಗಿಸಿದ ಮೇಲೆ ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡರು.


ನಿಮ್ಮ ದೇಶದಲ್ಲಿರುವ ಹುಟ್ಟುವಳಿಯೆಲ್ಲಾ ನಿಮ್ಮ ಪಶು ಮತ್ತು ಕಾಡುಮೃಗಗಳಿಗೆ ಆಹಾರವಾಗಬಹುದು.


ಇದಾದ ಮೇಲೆ ಏಳನೆಯ ತಿಂಗಳಿನ ಹತ್ತನೆಯ ದಿವಸದಲ್ಲಿ ಐವತ್ತನೆಯ ವಾರ್ಷಿಕೋತ್ಸವಕ್ಕೆ ತುತೂರಿಯನ್ನು ಊದಿಸಬೇಕು. ಪ್ರಾಯಶ್ಚಿತ್ತದ ದಿನದಲ್ಲಿ ನಿಮ್ಮ ದೇಶದ ಎಲ್ಲಾ ಕಡೆಗಳಲ್ಲಿ ತುತೂರಿಯನ್ನು ಊದಿಸಬೇಕು.


“ಅಕ್ರಮಗಳನ್ನು ಮುಗಿಸುವುದಕ್ಕೂ, ಪಾಪಗಳನ್ನು ಮುಚ್ಚುವುದಕ್ಕೂ, ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡುವುದಕ್ಕೂ, ನಿತ್ಯವಾದ ನೀತಿಯನ್ನು ಬರಮಾಡುವುದಕ್ಕೂ, ಆ ದರ್ಶನಕ್ಕೂ, ಪ್ರವಾದಿಯ ನುಡಿಗೆ ಮುದ್ರೆಹಾಕುವುದಕ್ಕೂ, ಮಹಾಪರಿಶುದ್ಧ ಸ್ಥಳವನ್ನು ಅಭಿಷೇಕ ಮಾಡುವುದಕ್ಕೂ ನಿನ್ನ ಜನರ ಮೇಲೆಯೂ, ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.


ಇಸ್ರಾಯೇಲರಿಗೆ ಜೂಬಿಲಿ ವರ್ಷ ಬಂದಾಗ ಅವರ ಸೊತ್ತು ಅವರು ಸೇರಿಕೊಳ್ಳುವ ಗೋತ್ರಕ್ಕೆ ಸೇರಿಕೊಳ್ಳುತ್ತದೆ. ಹೀಗೆ ಅವರ ಸೊತ್ತು ಅಂದರೆ, ನಮ್ಮ ಪಿತೃಗಳ ಗೋತ್ರದ ಸೊತ್ತಿನಿಂದ ತೆಗೆಯಲಾಗುವುದು.”


ನಿಮ್ಮ ಹೆಸರಿನಿಂದ ದಿನವೆಲ್ಲಾ ಉಲ್ಲಾಸಪಟ್ಟು, ನಿಮ್ಮ ನೀತಿಯಲ್ಲಿ ಅವರು ಉನ್ನತಕ್ಕೇರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು