Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:1 - ಕನ್ನಡ ಸಮಕಾಲಿಕ ಅನುವಾದ

1 “ ‘ನೀವು ನಿಮಗಾಗಿ ವಿಗ್ರಹಗಳನ್ನಾಗಲಿ, ಕೆತ್ತಿದ ಪ್ರತಿಮೆಯನ್ನಾಗಲಿ ಮಾಡಿಕೊಳ್ಳಬೇಡಿರಿ, ಇಲ್ಲವೆ ನಿಲ್ಲಿಸುವ ಪ್ರತಿಮೆಯನ್ನು ಮಾಡಿಕೊಳ್ಳಬೇಡಿರಿ, ಕಲ್ಲಿನ ವಿಗ್ರಹಗಳನ್ನು ನಿಮ್ಮ ದೇಶದಲ್ಲಿಟ್ಟುಕೊಂಡು ಅದಕ್ಕೆ ಅಡ್ಡಬೀಳಬೇಡಿರಿ. ಏಕೆಂದರೆ ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಅಥವಾ ಕಲ್ಲು ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವುದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬೇಡಿ; ಕೆತ್ತಿದ ಪ್ರತಿಮೆಯನ್ನಾಗಲಿ, ಕಲ್ಲಿನ ಕಂಬವನ್ನಾಗಲಿ ನಿಲ್ಲಿಸಿಕೊಳ್ಳಬೇಡಿ; ಆರಾಧನೆಗಾಗಿ ವಿಚಿತ್ರವಾಗಿ ಕೆತ್ತಿದ ಸ್ತಂಭಗಳನ್ನು ನಿಮ್ಮ ನಾಡಿನಲ್ಲಿ ಇಡಬೇಡಿ. ನಾನೇ ನಿಮ್ಮ ಸರ್ವೇಶ್ವರನಾದ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನೀವು ವಿಗ್ರಹಗಳನ್ನು ಮಾಡಿಸಿಕೊಳ್ಳಬಾರದು; ಕೆತ್ತಿದ ಪ್ರತಿಮೆಯನ್ನಾಗಲಿ ಕಲ್ಲುಕಂಬವನ್ನಾಗಲಿ ನಿಲ್ಲಿಸಿಕೊಳ್ಳಬಾರದು; ಅಡ್ಡಬೀಳುವದಕ್ಕಾಗಿ ವಿಚಿತ್ರವಾಗಿ ಕೆತ್ತಿದ ಕಲ್ಲುಗಳನ್ನು ನಿಮ್ಮ ದೇಶದಲ್ಲಿ ಇಡಬಾರದು; ನಾನೇ ಯೆಹೋವನೆಂಬ ನಿಮ್ಮ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ವಿಗ್ರಹಗಳನ್ನು ಮಾಡಿಕೊಳ್ಳಬೇಡಿರಿ. ಆರಾಧಿಸಲು ಕೆತ್ತಿದ ವಿಗ್ರಹಗಳನ್ನಾಗಲಿ ಕಲ್ಲುಕಂಬಗಳನ್ನಾಗಲಿ ನಿಮ್ಮ ದೇಶದಲ್ಲಿ ಸ್ಥಾಪಿಸಬೇಡಿರಿ. ಯಾಕೆಂದರೆ ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:1
30 ತಿಳಿವುಗಳ ಹೋಲಿಕೆ  

“ ‘ನೀವು ವಿಗ್ರಹಗಳ ಕಡೆಗೆ ತಿರುಗಿಕೊಳ್ಳಬೇಡಿರಿ. ಇಲ್ಲವೆ ನಿಮಗೋಸ್ಕರವಾಗಿ ಎರಕದ ದೇವರುಗಳನ್ನು ಮಾಡಿಕೊಳ್ಳಬೇಡಿರಿ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.


“ಯೆಹೋವ ದೇವರಿಗೆ ಅಸಹ್ಯವಾಗಿರುವ ವಿಗ್ರಹವನ್ನಾಗಲಿ, ಎರಕ ಹೊಯ್ದದ್ದನ್ನಾಗಲಿ ಮಾಡಿಕೊಂಡು, ಶಿಲ್ಪಿಯ ಕೈಯಿಂದ ಮಾಡಿಸಿ, ಗುಪ್ತವಾಗಿ ನಿಲ್ಲಿಸಿಕೊಂಡವನು ಶಾಪಗ್ರಸ್ತನು,” ಎಂದು ಹೇಳಿದಾಗ, ಎಲ್ಲಾ ಜನರು, “ಆಮೆನ್,” ಎಂದು ಹೇಳಬೇಕು.


ನಿಮ್ಮ ಮುಂದೆ ಆ ದೇಶದ ಸಮಸ್ತ ನಿವಾಸಿಗಳನ್ನು ಹೊರಡಿಸಿ, ಅವರ ಚಿತ್ರಗಳನ್ನೂ ಅವರು ಕೆತ್ತಿದ ವಿಗ್ರಹಗಳನ್ನೂ ನಾಶಮಾಡಿ, ಅವರ ಸಮಸ್ತ ಪವಿತ್ರ ಸ್ಥಳಗಳನ್ನೂ ಹಾಳುಮಾಡಬೇಕು.


ಅವರ ದೇವರುಗಳಿಗೆ ನೀವು ಅಡ್ಡಬೀಳಲೂಬಾರದು, ಅವುಗಳನ್ನು ಆರಾಧಿಸಲೂಬಾರದು. ಇದಲ್ಲದೆ ನೀವು ಅವರ ಕೃತ್ಯಗಳ ಪ್ರಕಾರ ಮಾಡದೆ, ಅವರನ್ನು ನಿರ್ಮೂಲ ಮಾಡಿಬಿಟ್ಟು, ಅವರ ವಿಗ್ರಹಗಳನ್ನು ಪೂರ್ಣವಾಗಿ ಒಡೆದುಹಾಕಬೇಕು.


ನನ್ನ ಹೊರತಾಗಿ ಬೆಳ್ಳಿ ಬಂಗಾರಗಳ ದೇವರುಗಳನ್ನು ಮಾಡಿಕೊಳ್ಳಬೇಡಿರಿ.


ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳನ್ನು ಪ್ರೀತಿಸಿ ಅನುಸರಿಸುವರೆಲ್ಲರೂ ಹೊರಗಿರುವರು.


“ನಾವು ದೇವರ ಮಕ್ಕಳಾಗಿರುವುದರಿಂದ, ಮಾನವ ಕಲ್ಪನೆ, ಕುಶಲತೆಯಿಂದ ರೂಪಿಸಿದ ಬೆಳ್ಳಿ, ಬಂಗಾರ, ಶಿಲೆಯ ಮೂರ್ತಿಯಂತೆ ದೇವರು ಇದ್ದಾರೆಂದು ನಾವು ಭಾವಿಸಬಾರದು.


“ನಿಮಗಾಗಿ ದೇವರುಗಳ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಕೊಳ್ಳಬಾರದು.


ಆ ದಿನದಲ್ಲಿ ಮನುಷ್ಯರು ಪೂಜಿಸುವುದಕ್ಕೋಸ್ಕರ ಮಾಡಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಚಿನ್ನದ ವಿಗ್ರಹಗಳನ್ನೂ ಇಲಿ ಬಾವಲಿಗಳಿಗಾಗಿ ಬಿಸಾಡಿಬಿಡುವರು.


ವಿಗ್ರಹಗಳನ್ನು ಪೂಜಿಸಿ, ವಿಗ್ರಹಗಳಲ್ಲಿ ಹೆಮ್ಮೆ ಪಡುವವರೆಲ್ಲರು ನಾಚಿಕೆಪಡಲಿ; ಎಲ್ಲಾ ದೇವರುಗಳೇ, ಯೆಹೋವ ದೇವರನ್ನು ಆರಾಧಿಸಿರಿ!


“ನಿನ್ನನ್ನು ಈಜಿಪ್ಟ್ ದೇಶದಿಂದಲೂ ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ಏಕೆಂದರೆ ಇಸ್ರಾಯೇಲರು ನನ್ನ ದಾಸರು ಈಜಿಪ್ಟ್ ದೇಶದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿನ್ನ ದೇವರಾದ ಯೆಹೋವ ದೇವರು ನಾನೇ.


“ನಿನ್ನನ್ನು ಈಜಿಪ್ಟ್ ದೇಶದಿಂದಲೂ, ದಾಸತ್ವದ ನಾಡಿನೊಳಗಿಂದಲೂ ಹೊರಗೆ ತಂದ ನಿನ್ನ ದೇವರಾದ ಯೆಹೋವ ದೇವರು ನಾನೇ.


ತಮ್ಮ ಉನ್ನತ ಸ್ಥಳಗಳಿಂದ ದೇವರಿಗೆ ಬೇಸರಗೊಳಿಸಿದರು. ತಮ್ಮ ಮೂರ್ತಿಗಳಿಂದ ದೇವರಿಗೆ ದುಃಖಪಡಿಸಿದರು.


ಸಮಾಧಾನದ ಬಲಿಗಳ ರಕ್ತವನ್ನೂ, ಕೊಬ್ಬನ್ನೂ ಸಮರ್ಪಿಸುವ ಆರೋನನ ಪುತ್ರರಲ್ಲಿ ಒಬ್ಬನು ಭುಜದ ಬಲಭಾಗವನ್ನು ತನ್ನ ಪಾಲಾಗಿ ತೆಗೆದುಕೊಳ್ಳಲಿ.


ಅಲ್ಲಿ ದಾನ್ಯರು ಕೆತ್ತಿದ ವಿಗ್ರಹವನ್ನು ತಮಗಾಗಿ ಸ್ಥಾಪಿಸಿಕೊಂಡರು. ಇಸ್ರಾಯೇಲರು ಸೆರೆಯಾಗಿ ಹೋಗುವವರೆಗೆ ಮೋಶೆಯ ಮೊಮ್ಮಗನೂ, ಗೇರ್ಷೋಮನ ಮಗನೂ ಆದ ಯೋನಾತಾನನೂ ಅವನ ವಂಶದವರೂ ಅವನ ಮಕ್ಕಳೂ ದಾನನ ಗೋತ್ರದವರಿಗೆ ಯಾಜಕರಾಗಿದ್ದರು.


ಅವರ ಮುಂದೆ ಯೆಹೋವ ದೇವರು ಓಡಿಸಿಬಿಟ್ಟಿದ್ದ ಜನರ ಮತ್ತು ಇಸ್ರಾಯೇಲ್ ರಾಜರ ದುರಾಚಾರಗಳನ್ನು ಅವರು ಅನುಸರಿಸಿದರು.


ಇದಲ್ಲದೆ ಅವರು ಎತ್ತರವಾದ ಎಲ್ಲಾ ಗುಡ್ಡಗಳಲ್ಲಿ ತೋಪುಗಳನ್ನು ಹಾಕಿ, ಹಸಿರಾದ ಎಲ್ಲಾ ಮರಗಳ ಕೆಳಗೂ ತಮಗೆ ಅಶೇರ ವಿಗ್ರಹಸ್ತಂಭಗಳನ್ನು ನಿಲ್ಲಿಸಿದ್ದರು.


ಇದಲ್ಲದೆ ಅವರು ತಮ್ಮ ದೇವರಾದ ಯೆಹೋವ ದೇವರ ಸಮಸ್ತ ಆಜ್ಞೆಗಳನ್ನು ಬಿಟ್ಟುಬಿಟ್ಟು, ತಮಗೆ ತಾವೇ ಎರಡು ಎರಕದ ಕರುಗಳ ಮೂರ್ತಿಗಳನ್ನು ಮಾಡಿಕೊಂಡರು. ಅವರು ಅಶೇರ ಸ್ತಂಭವನ್ನು ನಿಲ್ಲಿಸಿ, ಆಕಾಶದ ಸೈನ್ಯಕ್ಕೆಲ್ಲಾ ಅಡ್ಡಬಿದ್ದು, ಬಾಳನನ್ನು ಸೇವಿಸಿ ತಮ್ಮ ಪುತ್ರಪುತ್ರಿಯರನ್ನೂ ಬೆಂಕಿಯಲ್ಲಿ ಬಲಿಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು