Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:16 - ಕನ್ನಡ ಸಮಕಾಲಿಕ ಅನುವಾದ

16 ನಾನು ಸಹ ಇದನ್ನು ನಿಮಗೆ ಮಾಡುವೆನು: ನಿಮ್ಮ ಮೇಲೆ ಭೀತಿಯನ್ನು ಉಂಟುಮಾಡುವ, ಕಣ್ಣುಗಳನ್ನು ಕ್ಷೀಣಿಸುವಂತೆಯೂ ಹೃದಯವು ಕುಗ್ಗಿ ದುಃಖಕ್ಕೊಳಗಾಗುವಂತೆಯೂ ಮಾಡುವ ಕ್ಷಯರೋಗವನ್ನೂ ಚಳಿಜ್ವರವನ್ನೂ ಬರಮಾಡುವೆನು. ನೀವು ವ್ಯರ್ಥವಾಗಿ ಬೀಜವನ್ನು ಬಿತ್ತುವಿರಿ. ಏಕೆಂದರೆ ನಿಮ್ಮ ಶತ್ರುಗಳು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನಿಮಗೆ ಮಾಡುವುದೇನೆಂದರೆ, ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ, ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವುದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ನೀವು ಈ ದಂಡನೆಗಳಿಗೆ ಗುರಿಯಾಗುವಿರಿ. ನಿಮಗೆ ಕ್ಷಯ ರೋಗ, ಚಳಿಜ್ವರ ಮುಂತಾದ ಭೀಕರ ವ್ಯಾಧಿಗಳು ಬರುವಂತೆ ಮಾಡುವೆನು. ಇವುಗಳ ನಿಮಿತ್ತ ನೀವು ಕಂಗೆಡುವಿರಿ, ಮನಗುಂದಿ ಹೋಗುವಿರಿ. ನಿಮ್ಮ ಬಿತ್ತನೆಯ ಫಲ ನಿಮಗೆ ಸಿಗದೆ ಹೋಗುವುದು. ಅದು ಶತ್ರುಗಳ ಪಾಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆಗ ನಾನು ನಿಮ್ಮ ಮಧ್ಯೆ ಭಯಂಕರ ಸಂಗತಿಗಳು ನಡೆಯುವಂತೆ ಮಾಡುವೆ. ನೀವು ವ್ಯಾಧಿಯಿಂದಲೂ ಜ್ವರದಿಂದಲೂ ನರಳುವಂತೆ ಮಾಡುವೆ. ಅವು ನಿಮ್ಮ ಕಣ್ಣುಗಳನ್ನು ನಾಶಮಾಡಿ ನಿಮ್ಮ ಪ್ರಾಣವನ್ನು ತೆಗೆದುಬಿಡುತ್ತವೆ; ನೀವು ಬೀಜ ಬಿತ್ತಿದರೂ ಅದರ ಫಲವು ದೊರೆಯುವುದಿಲ್ಲ: ನಿಮ್ಮ ವೈರಿಗಳು ನಿಮ್ಮ ಬೆಳೆಗಳನ್ನು ತಿಂದುಬಿಡುವರು!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:16
35 ತಿಳಿವುಗಳ ಹೋಲಿಕೆ  

ನಾನು ಬಿತ್ತುವುದನ್ನು ಬೇರೊಬ್ಬನು ಉಣ್ಣಲಿ; ನನ್ನ ಬೆಳೆಯು ಬುಡಮೇಲಾಗಲಿ.


ನನ್ನ ಬಲಿಪೀಠದ ಸೇವೆಯಿಂದ ನಾನು ತೆಗೆದು ಬಿಡದ ಮನುಷ್ಯನು, ನಿನ್ನ ಕಣ್ಣುಗಳನ್ನು ಕುಂದಿಸಿ, ನಿನ್ನ ಹೃದಯವನ್ನು ವೇದನೆ ಪಡಿಸುವುದಕ್ಕೆ ಇರುವನು. ನಿನ್ನ ಮನೆಯ ಸಂತತಿಯವರೆಲ್ಲಾ ಯೌವನ ಪ್ರಾಯದಲ್ಲಿಯೇ ಖಡ್ಗದಿಂದ ಸಾಯುವರು.


ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ; ಹಿಪ್ಪೆಗಳನ್ನು ತುಳಿದು ಎಣ್ಣೆ ಹಚ್ಚಿಕೊಳ್ಳದೆ ಇರುವೆ; ದ್ರಾಕ್ಷಾರಸಮಾಡಿ ಕುಡಿಯದೆ ಇರುವೆ.


“ಆದ್ದರಿಂದ ಮನುಷ್ಯಪುತ್ರನೇ, ನೀನು ಇಸ್ರಾಯೇಲಿನ ಮನೆತನದವರಿಗೆ ಹೀಗೆ ಹೇಳು: ‘ನೀವು ಹೇಳುತ್ತಿರುವುದು ಇದನ್ನೇ: “ನಮ್ಮ ಅಪರಾಧಗಳೂ ನಮ್ಮ ಪಾಪಗಳೂ ನಮ್ಮ ಮೇಲಿದ್ದು ನಾವು ಅವುಗಳಲ್ಲೇ ಕ್ಷೀಣಿಸುತ್ತಾ ಹೋದರೆ ಹೇಗೆ ಬದುಕುವೆವು ಎಂದು ಹೇಳುವಿರಲ್ಲಾ?” ’


ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.


ಆಗ ದೇವರು ಅವರ ದಿವಸಗಳನ್ನು ವ್ಯರ್ಥವಾಗಿಯೂ ಅವರ ವರ್ಷಗಳನ್ನು ಕಳವಳದಲ್ಲಿಯೂ ಕಳೆಯ ಹೋಗಲು ಅನುಮತಿಸಿದರು.


ಅವರು ನಿಮ್ಮ ಪಶುಗಳ ಫಲವನ್ನೂ ನಿಮ್ಮ ಭೂಮಿಯ ಫಲವನ್ನೂ ನೀವು ನಾಶವಾಗುವವರೆಗೆ ತಿಂದುಬಿಡುವರು. ಅವರು ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಓಲಿವ್ ಎಣ್ಣೆಯನ್ನೂ, ಪಶುಗಳ ಅಭಿವೃದ್ಧಿಯನ್ನೂ, ಕುರಿಗಳ ಮಂದೆಗಳನ್ನೂ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ಸಜೀವ ದೇವರ ಕೈಯಲ್ಲಿ ಬೀಳುವುದು ಭಯಂಕರವಾದದ್ದು.


ಯೆರೂಸಲೇಮಿಗೆ ವಿರೋಧವಾಗಿ ದಂಡು ಕಟ್ಟಿಕೊಂಡಿರುವ ಎಲ್ಲಾ ಜನರನ್ನು ಯೆಹೋವ ದೇವರು ವ್ಯಾಧಿಯಿಂದ ಬಾಧಿಸುವರು. ಹೀಗೆಯೇ, ಅವರು ನಿಂತಿರುವಾಗ, ಅವರ ಮಾಂಸವು ಕ್ಷಯಿಸಿ ಹೋಗುವುವು. ಅವರ ಕಣ್ಣುಗಳು ಕುಣಿಗಳಲ್ಲಿ ಇಂಗಿ ಹೋಗುವುವು. ಅವರ ನಾಲಿಗೆ ಅವರ ಬಾಯಲ್ಲಿ ಕ್ಷಯಿಸಿ ಹೋಗುವುದು.


ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ಸುಗ್ಗಿ ಮಾಡಿದ್ದೀರಿ; ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿಯಾಗಲಿಲ್ಲ; ಬಟ್ಟೆಯನ್ನು ಧರಿಸುತ್ತೀರಿ, ಆದರೆ ಬೆಚ್ಚಗೆ ಆಗಲಿಲ್ಲ; ಸಂಬಳ ಸಂಪಾದಿಸುತ್ತೀರಿ, ಅದನ್ನು ತೂತುಗಳುಳ್ಳ ಚೀಲಗಳಲ್ಲಿ ಹಾಕಿಡುತ್ತೀರಿ.”


ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ನಾನು ನಿನ್ನನ್ನು ನಿನ್ನ ಸ್ನೇಹಿತರೆಲ್ಲರೂ ದಿಗಿಲು ಪಡುವಂತೆ ಮಾಡುತ್ತೇನೆ. ಅವರು ತಮ್ಮ ಶತ್ರುಗಳ ಖಡ್ಗದಿಂದ ಬೀಳುವರು. ನಿನ್ನ ಕಣ್ಣುಗಳು ಅದನ್ನು ನೋಡುವುವು. ಯೆಹೂದ್ಯರನ್ನೆಲ್ಲಾ ನಾನು ಬಾಬಿಲೋನಿನ ಅರಸನ ಕೈಗೆ ಒಪ್ಪಿಸುವೆನು. ಅವನು ಅವರನ್ನು ಬಾಬಿಲೋನಿಗೆ ಒಯ್ದು ಖಡ್ಗದಿಂದ ಕೊಲ್ಲುವನು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಕಿಗಿಂತ ಹೆಚ್ಚಾಗಿರುವರು, ಯುವಕರ ತಾಯಿಗಳ ಮೇಲೆ ನಾಶ ಮಾಡುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು, ಅವರ ಮೇಲೆ ಕಳವಳವನ್ನೂ, ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಗೋಧಿಯನ್ನು ಬಿತ್ತಿದ್ದಾರೆ, ಆದರೆ ಮುಳ್ಳುಗಳನ್ನು ಕೊಯ್ಯುವವರು ಕಷ್ಟಪಟ್ಟಿದ್ದಾರೆ, ಆದರೆ ಪ್ರಯೋಜನವಾಗುವುದಿಲ್ಲ. ಯೆಹೋವ ದೇವರ ಉಗ್ರಕೋಪದ ಉರಿಯಿಂದ ನಿಮ್ಮ ಸುಗ್ಗಿಯ ನಿಮಿತ್ತ ನಾಚಿಕೆ ಪಡುವಿರಿ.”


ನಾನಿಲ್ಲದೆ ಕೈದಿಗಳ ಕೆಳಗೆ ಮುದುರಿಕೊಂಡು, ಹತರಾಗಿರುವವರ ಕೆಳಗೆ ಬಿದ್ದಿರುವುದೇ ಇವರ ಗತಿ. ಏಕೆಂದರೆ, ಇಷ್ಟೆಲ್ಲಾ ಆದರೂ ಅವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇದೆ.


ಸಿರಿಯಾದವರು ಎಫ್ರಾಯೀಮ್ಯರೊಂದಿಗೆ ಜತೆಗೂಡಿದ್ದಾರೆಂದು ದಾವೀದನ ವಂಶದವರಿಗೆ ತಿಳಿದಾಗ, ಆಹಾಜನ ಮತ್ತು ಅವರ ಪ್ರಜೆಯ ಹೃದಯವು ಅರಣ್ಯದ ಮರಗಳು ಗಾಳಿಗೆ ಅಲುಗಾಡುವಂತೆ ನಡುಗಿದವು.


ದುಷ್ಟನು ನನ್ನ ವೈರಿಯ ಮೇಲೆ ನೇಮಕವಾಗಲಿ; ಸೈತಾನನು ಅವನ ಬಲಗಡೆಯಲ್ಲಿ ನಿಂತುಕೊಳ್ಳಲಿ.


ಕ್ಷಣಮಾತ್ರದಲ್ಲಿ ಅವರು ನಾಶವಾದರು. ಅವರು ದಿಗಿಲುಬಿದ್ದು ಸಂಪೂರ್ಣವಾಗಿ ನಾಶವಾದರು.


ಅವನು ಆ ಬಾಣವನ್ನು ಎಳೆದರೆ, ಅದು ಬೆನ್ನಿನಿಂದ ಹೊರಡುವುದು; ಅವನ ಪಿತ್ತಕೋಶದಿಂದ ಅದರ ಮಿಂಚುವ ಮೊನೆ ಬರುವುದು; ಸಾವಿನ ಭಯವು ಅವನನ್ನೂ ಆವರಿಸುವುದು.


ಸುತ್ತಲೂ ದಿಗಿಲುಗಳು ಅವನನ್ನು ಹೆದರಿಸಿ, ಅವನ ಕಾಲುಗಳನ್ನು ಓಡುವಂತೆ ಮಾಡುವುವು.


ಯೆಹೋವ ದೇವರ ದೂತನು ಬಂದು ಅಬೀಯೆಜೆರನಾದ ಯೋವಾಷನಿಗೆ ಹೊಂದಿದ ಒಫ್ರದಲ್ಲಿರುವ ಏಲಾ ಮರದ ಕೆಳಗೆ ಕುಳಿತನು. ಆಗ ಯೋವಾಷನ ಮಗನಾದ ಗಿದ್ಯೋನನು ಮಿದ್ಯಾನ್ಯರಿಗೆ ಮರೆಯಾಗುವ ಹಾಗೆ ದ್ರಾಕ್ಷಿಯ ಆಲೆಯ ಬಳಿಯಲ್ಲಿ ಗೋಧಿಯನ್ನು ಬಡಿಯುತ್ತಿದ್ದನು.


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


ದೇವರು, “ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತಿಗೆ ಶ್ರದ್ಧೆಯಿಂದ ಕಿವಿಗೊಟ್ಟು, ಅವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ, ಅವರ ಆಜ್ಞೆಗಳಿಗೆ ಕಿವಿಗೊಟ್ಟು, ಅವರ ನಿಯಮಗಳನ್ನು ಕೈಗೊಂಡರೆ, ಈಜಿಪ್ಟಿನ ಮೇಲೆ ಬರಮಾಡಿದ ಯಾವ ವ್ಯಾಧಿಯನ್ನೂ ನಿಮ್ಮ ಮೇಲೆ ಬರಮಾಡುವುದಿಲ್ಲ. ನಿಮ್ಮನ್ನು ಸ್ವಸ್ಥಪಡಿಸುವ ಯೆಹೋವ ದೇವರು ನಾನೇ ಆಗಿದ್ದೇನೆ,” ಎಂದು ಪ್ರಕಟಪಡಿಸಿದರು.


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ದುಷ್ಟರ ಮನೆಯ ಮೇಲೆ ದೈವಶಾಪವಿದೆ. ಆದರೆ ನೀತಿವಂತರ ನಿವಾಸದ ಮೇಲೆ ದೈವಾಶೀರ್ವಾದವಿರುವುದು.


ಯೆಹೋವ ದೇವರು ತನ್ನ ಬಲಗೈಯಿಂದಲೂ, ತನ್ನ ಬಲವುಳ್ಳ ತೋಳಿನಿಂದಲೂ ಆಣೆಯಿಟ್ಟು ಹೇಳಿದ್ದೇನೆಂದರೆ: “ನಿಶ್ಚಯವಾಗಿ ನಾನು ಇನ್ನು ಮೇಲೆ ನಿನ್ನ ಧಾನ್ಯಗಳನ್ನು ನಿನ್ನ ಶತ್ರುಗಳಿಗೆ ಆಹಾರವಾಗಿ ಕೊಡುವುದಿಲ್ಲ. ನೀನು ಕಷ್ಟಪಟ್ಟು ಮಾಡಿದ ನಿನ್ನ ದ್ರಾಕ್ಷಾರಸವನ್ನು ವಿದೇಶಿಯರು ಕುಡಿಯುವುದಿಲ್ಲ.


“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.


ನಿಮ್ಮ ಮುಂಡಾಸಗಳು ನಿಮ್ಮ ತಲೆಯ ಮೇಲೆಯೂ ನಿಮ್ಮ ಪಾದರಕ್ಷೆಯು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವುವು. ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರಳುವಿರಿ.


“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.


ಆದಕಾರಣ ನೀವು ಬಡವನನ್ನು ತುಳಿದು ಅವರ ಧಾನ್ಯಕ್ಕೆ ತೆರಿಗೆ ವಿಧಿಸುತ್ತೀರಿ. ಆದ್ದರಿಂದ ನೀವು ಕೆತ್ತಿದ ಕಲ್ಲಿನ ಮನೆಗಳನ್ನು ಕಟ್ಟಿದ್ದೀರಿ. ಆದರೆ ನೀವು ಅವುಗಳಲ್ಲಿ ವಾಸ ಮಾಡದೇ ಇರುವಿರಿ. ರಮ್ಯವಾದ ದ್ರಾಕ್ಷಿತೋಟಗಳನ್ನು ನೆಟ್ಟಿರಲ್ಲಾ, ಆದರೆ ಅವುಗಳ ದ್ರಾಕ್ಷಾರಸವನ್ನು ಕುಡಿಯಲಾರಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು