Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:17 - ಕನ್ನಡ ಸಮಕಾಲಿಕ ಅನುವಾದ

17 ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಾನು ನಿಮ್ಮ ಮೇಲೆ ಉಗ್ರಕೋಪಗೊಳ್ಳುವುದರಿಂದ ನೀವು ನಿಮ್ಮ ಶತ್ರುಗಳ ಮುಂದೆ ಸೋತು ಹೋಗುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಬೆನ್ನಟ್ಟಿ ಬರದಿದ್ದರು ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಾನು ನಿಮ್ಮ ಮೇಲೆ ಕಡುಕೋಪಗೊಳ್ಳುವೆನು; ನೀವು ನಿಮ್ಮ ಶತ್ರುಗಳ ಮುಂದೆಯೇ ಸೋತುಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು. ಯಾರೂ ಬೆನ್ನಟ್ಟಿ ಬರದಿದ್ದರೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನಾನು ನಿಮ್ಮ ಮೇಲೆ ಉಗ್ರಕೋಪವನ್ನು ಮಾಡುವದರಿಂದ ನೀವು ನಿಮ್ಮ ಶತ್ರುಗಳ ಎದುರಿನಿಂದ ಸೋತು ಬೀಳುವಿರಿ; ನಿಮ್ಮ ವೈರಿಗಳು ನಿಮ್ಮನ್ನು ಆಳುವರು; ಯಾರೂ ಹಿಂದಟ್ಟದೆ ಇರುವಾಗಲೂ ನೀವು ಹೆದರಿ ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಾನು ನಿಮಗೆ ವಿಮುಖನಾಗಿರುವುದರಿಂದ ಆ ವೈರಿಗಳು ನಿಮ್ಮನ್ನು ಸೋಲಿಸುವರು. ಆ ವೈರಿಗಳು ನಿಮ್ಮನ್ನು ದ್ವೇಷಿಸುವರು ಮತ್ತು ನಿಮ್ಮನ್ನು ಆಳುವರು. ಯಾರೂ ನಿಮ್ಮನ್ನು ಬೆನ್ನಟ್ಟದಿದ್ದರೂ ಹೆದರಿಕೊಂಡು ಓಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:17
30 ತಿಳಿವುಗಳ ಹೋಲಿಕೆ  

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


“ ‘ಇದಲ್ಲದೆ ಇಸ್ರಾಯೇಲ್ ಮನೆತನದಲ್ಲಿ ಯಾವನಾದರೂ ನಿಮ್ಮ ಮಧ್ಯದೊಳಗೆ ಪ್ರವಾಸಿಯಾಗಿರುವ ಪರಕೀಯನಾದರೂ, ಯಾವುದೇ ತರದ ರಕ್ತವನ್ನು ತಿಂದರೆ, ರಕ್ತವನ್ನು ತಿನ್ನುವ ಆ ಪ್ರಾಣಕ್ಕೆ ನಾನು ವಿಮುಖನಾಗಿರುವೆನು, ಅವನನ್ನು ಅವನ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.


ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.


ಯೆಹೋವ ದೇವರು ನಿಮ್ಮನ್ನು ನಿಮ್ಮ ಶತ್ರುಗಳ ಮುಂದೆ ಸೋಲಿಸಿಬಿಡುವರು. ನೀವು ಒಂದೇ ಮಾರ್ಗದಲ್ಲಿ ಅವರಿಗೆ ವಿರೋಧವಾಗಿ ದಾಳಿಮಾಡಲು ಹೊರಟು, ಏಳು ಮಾರ್ಗಗಳಲ್ಲಿ ಅವರ ಮುಂದೆ ಓಡಿಹೋಗುವಿರಿ. ಭೂಮಿಯ ರಾಜ್ಯಗಳೆಲ್ಲವೂ ಇದನ್ನು ಕಂಡು ಬೆರಗಾಗುವವು.


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಆಕೆಯ ವೈರಿಗಳು ಆಕೆಯ ಯಜಮಾನರಾಗಿದ್ದಾರೆ. ಆಕೆಯ ಶತ್ರುಗಳು ನೆಮ್ಮದಿಯಿಂದ ಇದ್ದಾರೆ. ಏಕೆಂದರೆ ಆಕೆಯ ಅನೇಕ ಪಾಪಗಳ ನಿಮಿತ್ತ ಯೆಹೋವ ದೇವರು ಆಕೆಯನ್ನು ಸಂಕಟಪಡಿಸಿದ್ದಾರೆ. ಆಕೆಯ ಮಕ್ಕಳು ಶತ್ರುವಿನ ಮುಂದೆ ಸೆರೆಗೆ ಹೋಗಿದ್ದಾರೆ.


ಫಿಲಿಷ್ಟಿಯರು ಇಸ್ರಾಯೇಲರ ವಿರುದ್ಧ ಯುದ್ಧಮಾಡಿದರು. ಆಗ ಇಸ್ರಾಯೇಲರು ಫಿಲಿಷ್ಟಿಯರಿಂದ ಸೋತು ಓಡಿಹೋಗಿ, ಗಿಲ್ಬೋವ ಬೆಟ್ಟದಲ್ಲಿ ಹತರಾದರು.


ಫಿಲಿಷ್ಟಿಯರು ಯುದ್ಧಮಾಡಿದರು. ಇಸ್ರಾಯೇಲರು ಸೋತು, ತಮ್ಮ ತಮ್ಮ ಡೇರೆಗಳಿಗೆ ಓಡಿಹೋದರು. ಅಲ್ಲಿ ಮಹಾ ಸಂಹಾರವಾಯಿತು. ಇಸ್ರಾಯೇಲಿನ ಮೂವತ್ತು ಸಾವಿರ ಕಾಲಾಳುಗಳು ಮಡಿದರು.


ನೀನು ಭೂಮಿಯನ್ನು ವ್ಯವಸಾಯ ಮಾಡಿದರೂ ಅದು ಇನ್ನು ಮುಂದೆ ಫಲಿಸುವುದಿಲ್ಲ. ನೀನು ಭೂಲೋಕದಲ್ಲಿ ಅಲೆಮಾರಿಯಾಗಿ ತಿರುಗುವವನು ಆಗಿರುವೆ,” ಎಂದರು.


ಆದ್ದರಿಂದ ಜನರಲ್ಲಿ ಹೆಚ್ಚು ಕಡಿಮೆ ಮೂರು ಸಾವಿರ ಮಂದಿ ಅಲ್ಲಿಗೆ ಹೋದರು. ಆದರೆ ಅವರು ಆಯಿ ಎಂಬ ಪಟ್ಟಣದ ಮನುಷ್ಯರನ್ನು ಎದುರಿಸಲಾಗದೆ ಓಡಿಹೋದರು.


“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


“ಆದ್ದರಿಂದ ಇಸ್ರಾಯೇಲಿನ ದೇವರಾಗಿರುವ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ನಿನ್ನ ಮೇಲೆ ವಿಪತ್ತನ್ನು ಬರಮಾಡಲು ಮತ್ತು ಎಲ್ಲಾ ಯೆಹೂದವನ್ನು ನಾಶಮಾಡಲು ನಿರ್ಧರಿಸಿದ್ದೇನೆ.


ನನ್ನ ಮುಖವನ್ನು ಅವರಿಗೆ ವಿರೋಧವಾಗಿ ತಿರುಗಿಸುತ್ತೇನೆ. ಅವರು ಬೆಂಕಿಯೊಳಗಿಂದ ಹೊರಗೆ ಬಂದು ತಪ್ಪಿಸಿಕೊಂಡರೂ, ಮತ್ತೊಂದು ಬೆಂಕಿಯು ಅವರನ್ನು ದಹಿಸಿಬಿಡುವುದು. ನಾನು ನನ್ನ ಮುಖವನ್ನು ಅವರಿಗೆ ವಿರೋಧವಾಗಿ ಇಡುವಾಗ, ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಗೊಂಡು, ಅವರನ್ನು ಅರಾಮ್ ನಹರೈಮ್‌ದ ಅರಸನಾದ ಕೂಷನ್ ರಿಷಾತಯಿಮನ ಕೈಗೆ ಮಾರಿಬಿಟ್ಟರು. ಇಸ್ರಾಯೇಲರು ಕೂಷನ್‌ರಿಷಾತಯಿಮ್ ಎಂಬವನಿಗೆ ಎಂಟು ವರ್ಷ ಗುಲಾಮರಾಗಿದ್ದರು.


ಇಸ್ರಾಯೇಲರು ಮೋವಾಬ್ಯರ ಅರಸನಾದ ಎಗ್ಲೋನನನ್ನು ಹದಿನೆಂಟು ವರ್ಷ ಸೇವಿಸಿದರು.


ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದ್ದರಿಂದ ಇಸ್ರಾಯೇಲರು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಬಂಡೆಯ ಬಿರುಕುಗಳನ್ನೂ, ಗವಿಗಳನ್ನೂ, ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.


ನೀವು ಯೆಹೋವ ದೇವರ ಮಾತಿಗೆ ವಿಧೇಯರಾಗದಿದ್ದರೆ, ಯೆಹೋವ ದೇವರ ಆಜ್ಞೆಗೆ ವಿರೋಧವಾಗಿ ತಿರುಗಿಬಿದ್ದರೆ, ಯೆಹೋವ ದೇವರ ಹಸ್ತವು ನಿಮ್ಮ ಪಿತೃಗಳಿಗೆ ವಿರೋಧವಾಗಿದ್ದಂತೆಯೇ ನಿಮಗೂ ವಿರೋಧವಾಗಿರುವುದು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ಕೋಪಿಸಿಕೊಂಡು, ಅವರನ್ನು ಅರಾಮ್ಯರ ಅರಸನಾದ ಹಜಾಯೇಲನ ಕೈಯಲ್ಲಿಯೂ, ಹಜಾಯೇಲನ ಮಗ ಬೆನ್ಹದದನ ಕೈಯಲ್ಲಿಯೂ ಬಹುಕಾಲ ಒಪ್ಪಿಸಿದರು.


ಯೆಹೋವಾಹಾಜನ ಸೈನ್ಯದಲ್ಲಿ ಐವತ್ತು ಕುದುರೆ ರಾಹುತರು, ಹತ್ತು ರಥಗಳು, ಹತ್ತು ಸಾವಿರ ಜನ ಕಾಲಾಳುಗಳ ಹೊರತು ಏನೂ ಉಳಿಯಲಿಲ್ಲ. ಏಕೆಂದರೆ ಅರಾಮಿನ ಅರಸನು ಉಳಿದವರನ್ನು ಸಂಹರಿಸಿ, ತುಳಿದು, ಧೂಳಿನ ಹಾಗೆ ಮಾಡಿದನು.


ಓ, ಚೀಯೋನಿನಿಂದ ಇಸ್ರಾಯೇಲರಿಗೆ ರಕ್ಷಣೆಯು ಬಂದರೆ ಎಷ್ಟೋ ಒಳ್ಳೆಯದು! ದೇವರು ತಮ್ಮ ಜನರನ್ನು ಸೆರೆಯಿಂದ ತಿರುಗಿ ಬರಮಾಡುವಾಗ ಯಾಕೋಬ್ಯರು ಉಲ್ಲಾಸಗೊಳ್ಳುವರು. ಇಸ್ರಾಯೇಲರು ಸಂತೋಷಿಸುವರು.


ಒಬ್ಬನ ಬೆದರಿಕೆಗೆ ಸಾವಿರ ಜನರು ಓಡುವರು, ಐವರು ಹೆದರಿಸುವುದರಿಂದ ನೀವೆಲ್ಲರೂ ಓಡಿಹೋಗುವಿರಿ, ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.”


ಆದರೆ ಅವರು ತಿರುಗಿಬಿದ್ದು, ಆತನ ಪರಿಶುದ್ಧಾತ್ಮನನ್ನು ದುಃಖಪಡಿಸಿದರು. ಆದ್ದರಿಂದ ಆತನು ಬೇರೆಯಾಗಿ ಅವರಿಗೆ ಶತ್ರುವಾದನು. ಆತನೇ ಅವರಿಗೆ ವಿರೋಧವಾಗಿ ಯುದ್ಧಮಾಡಿದನು.


ಅವರು ಶತ್ರುವಿನ ಹಾಗೆಯೇ ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ. ವೈರಿಯ ಹಾಗೆ ತನ್ನ ಬಲಗೈ ಎತ್ತಿ ನಿಂತುಕೊಂಡು, ಕಣ್ಣಿಗೆ ರಮ್ಯವಾಗಿ ಕಾಣುವ ಎಲ್ಲವುಗಳನ್ನು ಕೊಂದುಹಾಕಿದ್ದಾರೆ. ಅವರು ತನ್ನ ರೋಷವೆಂಬ ಅಗ್ನಿಯನ್ನು ಚೀಯೋನ್ ಪುತ್ರಿಯ ಡೇರೆಯಲ್ಲಿ ಸುರಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು