Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:18 - ಕನ್ನಡ ಸಮಕಾಲಿಕ ಅನುವಾದ

18 “ ‘ಹೀಗೂ ನನ್ನ ಮಾತನ್ನು ಕೇಳದೆ ಹೋದರೆ, ನಾನು ನಿಮ್ಮನ್ನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಗೊಡದೆ ಹೋದರೆ ನಾನು ನಿಮ್ಮ ಪಾಪಗಳ ನಿಮಿತ್ತ ಏಳರಷ್ಟು ಹೆಚ್ಚಾಗಿ ದಂಡಿಸುವೆನು; ನಿಮ್ಮ ಗರ್ವವನ್ನು ಅಡಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಷ್ಟಾದರೂ ನೀವು ನನ್ನ ಮಾತಿಗೆ ಲಕ್ಷ್ಯಕೊಡದೆಹೋದರೆ ನಾನು ನಿಮ್ಮ ಪಾಪಗಳ ನಿವಿುತ್ತ ಏಳರಷ್ಟಾಗಿ ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಇಷ್ಟಾದರೂ ನೀವು ನನಗೆ ವಿಧೇಯರಾಗದಿದ್ದರೆ ನಿಮ್ಮ ಪಾಪಗಳಿಗಾಗಿ ಇನ್ನೂ ಏಳರಷ್ಟು ನಿಮ್ಮನ್ನು ಶಿಕ್ಷಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:18
10 ತಿಳಿವುಗಳ ಹೋಲಿಕೆ  

“ ‘ನನ್ನ ಮಾತನ್ನು ಕೇಳಲೊಲ್ಲದೆ ನನಗೆ ವಿರೋಧವಾಗಿ ನಡೆದರೆ, ನಾನು ನಿಮ್ಮ ಪಾಪಗಳಿಗೆ ತಕ್ಕಂತೆ ನಿಮ್ಮನ್ನು ಏಳರಷ್ಟು ಹೆಚ್ಚಾಗಿ ಬಾಧಿಸುವೆನು.


ನಾನು ಕೋಪದಿಂದ ನಿಮಗೆ ವಿರೋಧವಾಗಿ ನಡೆದು, ನಿಮ್ಮ ಪಾಪಗಳ ನಿಮಿತ್ತ ನಾನೇ ನಿಮ್ಮನ್ನು ಏಳರಷ್ಟಾಗಿ ಶಿಕ್ಷಿಸುವೆನು.


ನಾನು ಸಹ ನಿಮಗೆ ವಿರೋಧವಾಗಿ ನಡೆದು, ಇನ್ನೂ ಹೆಚ್ಚಾಗಿ ನಿಮ್ಮ ಪಾಪಗಳ ನಿಮಿತ್ತ, ಏಳರಷ್ಟು ಶಿಕ್ಷಿಸುವೆನು.


ತೃಪ್ತಿಪಟ್ಟವರು ಆಹಾರಕ್ಕಾಗಿ ಕೂಲಿ ಕೆಲಸಕ್ಕೆ ಹೋಗುತ್ತಾರೆ. ಹಸಿದವರು ಇನ್ನು ಮುಂದೆ ಹಸಿಯರು. ಬಂಜೆಯಾದವಳು ಏಳುಮಂದಿ ಮಕ್ಕಳನ್ನು ಹೆತ್ತಳು. ಅನೇಕ ಮಂದಿ ಮಕ್ಕಳನ್ನು ಹೆತ್ತವಳು ಬಲಹೀನಳಾದಳು.


ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ, ಅವನ ಮುಖಭಾವವು ಶದ್ರಕ್, ಮೇಶಕ್, ಅಬೇದ್‌ನೆಗೋ ಎಂಬವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಆ ಕುಲುಮೆಯನ್ನು ಸಾಧಾರಣವಾದ ಉರಿಗಿಂತ ಏಳರಷ್ಟು ಹೆಚ್ಚಾಗಿ ಉರಿ ಹಾಕಬೇಕೆಂದು ಆಜ್ಞಾಪಿಸಿದನು.


ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.


ನಿಮ್ಮ ನೀತಿಯ ನಿಯಮಗಳ ನಿಮಿತ್ತ, ನಾನು ದಿನಕ್ಕೆ ಏಳು ಸಾರಿ ನಿಮ್ಮನ್ನು ಸ್ತುತಿಸುತ್ತೇನೆ.


ಭೂಲೋಕದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ, ಈ ಸಾರಿ ನಾನು ಎಲ್ಲಾ ಉಪದ್ರವಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡುವೆನು.


ಆದಕಾರಣ ಯೆಹೋವ ದೇವರು ಕೋಪಗೊಂಡು ಜನರಿಗೆ ವಿರೋಧವಾಗಿ ಉರಿಗೊಂಡು ಅವರ ಮೇಲೆ ತಮ್ಮ ಕೈಚಾಚಿ, ಅವರನ್ನು ಹೊಡೆದಿದ್ದಾರೆ, ಬೆಟ್ಟಗುಡ್ಡಗಳು ಕಂಪಿಸಿದವು. ಅವರ ಹೆಣಗಳು ಹರಿದು ಬೀದಿಗಳ ಮಧ್ಯದಲ್ಲಿ ಬಿದ್ದಿರುವುವು. ಇಷ್ಟೆಲ್ಲಾ ಆದರೂ ದೇವರ ಕೋಪವು ತೀರದೆ, ಅವರ ಕೈ ಇನ್ನೂ ಚಾಚಿಯೇ ಇರುವುದು.


ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಿರಾಶರಾಗಿ ತಮ್ಮ ತಲೆಗಳನ್ನು ಮುಚ್ಚಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು