Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:25 - ಕನ್ನಡ ಸಮಕಾಲಿಕ ಅನುವಾದ

25 ಒಡಂಬಡಿಕೆಯನ್ನು ಮುರಿದದ್ದಕ್ಕಾಗಿ, ಮುಯ್ಯಿಗೆ ಮುಯ್ಯಿ ತೀರಿಸುವ ಖಡ್ಗವನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಸೇರಿದಾಗ, ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನಿಮ್ಮನ್ನು ಶತ್ರುವಿನ ಕೈಗೆ ಒಪ್ಪಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನೆಯನ್ನು ಮೀರಿದ್ದರಿಂದ ಆ ಕತ್ತಿಯು ಪ್ರತಿದಂಡನೆಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗ ಉಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಶತ್ರುಗಳ ಕತ್ತಿಯ ಮೂಲಕ ನಿಮ್ಮನ್ನು ಸಂಹರಿಸುವೆನು.ನೀವು ನನ್ನ ನಿಬಂಧನವನ್ನು ಮೀರಿದುದರಿಂದ ಆ ಕತ್ತಿ ಪ್ರತಿದಂಡನೆ ಮಾಡುವುದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ಅಂಟುರೋಗವುಂಟಾಗುವಂತೆ ಮಾಡುವೆನು. ಹೀಗೆ ನೀವು ಶತ್ರುಗಳಿಗೆ ಶರಣಾಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಶತ್ರುಗಳ ಕತ್ತಿಯ ಮೂಲಕವಾಗಿ ನಿಮ್ಮನ್ನು ಸಂಹರಿಸುವೆನು; ನೀವು ನನ್ನ ನಿಬಂಧನವನ್ನು ಮೀರಿದದರಿಂದ ಆ ಕತ್ತಿಯು ಪ್ರತಿದಂಡನೆಮಾಡುವದು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿರುವಾಗ ನಿಮ್ಮಲ್ಲಿ ಅಂಟುರೋಗವುಂಟಾಗುವಂತೆ ಮಾಡುವೆನು; ಹೀಗೆ ನೀವು ಶತ್ರುಗಳ ಕೈಗೆ ಬೀಳುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನೀವು ನನ್ನ ಒಡಂಬಡಿಕೆಯನ್ನು ಮೀರಿದ್ದರಿಂದ ನಾನು ನಿಮ್ಮನ್ನು ದಂಡಿಸುವೆನು. ನಿಮಗೆ ವಿರೋಧವಾಗಿ ಸೈನ್ಯಗಳನ್ನು ಬರಮಾಡುವೆ. ನೀವು ಭದ್ರತೆಗಾಗಿ ನಿಮ್ಮ ಪಟ್ಟಣಗಳೊಳಗೆ ಹೋಗುವಿರಿ. ಆದರೆ ವ್ಯಾಧಿಯು ನಿಮ್ಮಲ್ಲಿ ಹಬ್ಬುವಂತೆ ಮಾಡುವೆ. ನಿಮ್ಮ ವೈರಿಗಳು ನಿಮ್ಮನ್ನು ಸೋಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:25
42 ತಿಳಿವುಗಳ ಹೋಲಿಕೆ  

ನಾನು ಅವರನ್ನು ವ್ಯಾಧಿಯಿಂದ ಹೊಡೆದು ನಿರ್ಮೂಲ ಮಾಡುವೆನು. ನಿನ್ನನ್ನು ಅವರಿಗಿಂತ ದೊಡ್ಡದಾದ ಮತ್ತು ಬಲವುಳ್ಳ ಜನಾಂಗವನ್ನಾಗಿ ಮಾಡುವೆನು,” ಎಂದರು.


ನಾನು ಕಳುಹಿಸುವ ಕ್ಷಾಮದಿಂದ ದುಷ್ಟಮೃಗಗಳಿಂದ ನಿನಗೆ ಪುತ್ರ ಶೋಕ ಪ್ರಾಪ್ತಿಯಾಗುವುದು. ವ್ಯಾಧಿಯೂ, ರಕ್ತಪ್ರವಾಹವೂ ನಿನ್ನನ್ನು ಪೀಡಿಸುವುದು, ನಿನ್ನನ್ನು ಖಡ್ಗಕ್ಕೆ ತುತ್ತು ಮಾಡುವೆನು. ಇದು ಯೆಹೋವ ದೇವರಾದ ನನ್ನ ನುಡಿ.”


“ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ನಾನು ಬಂದು ದೇಶದ ಮೇಲೆ ಯಾವಾಗ ಖಡ್ಗವನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ,


“ ‘ಆದ್ದರಿಂದ ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾನೆ: ಇಗೋ, ನಾನು ನಿನ್ನ ಮೇಲೆ ಖಡ್ಗವನ್ನು ತರುತ್ತೇನೆ. ಮನುಷ್ಯರನ್ನೂ ಮೃಗಗಳನ್ನೂ ನಿನ್ನೊಳಗಿಂದ ಕಡಿದುಬಿಡುತ್ತೇನೆ.


ನೀವು ನನ್ನ ಕೋಲಿನ ಕೆಳಗೆ ನಡೆಯುವಾಗ, ನನ್ನ ಗಮನವು ನಿಮ್ಮ ಮೇಲೆ ಇರುತ್ತದೆ ಮತ್ತು ನಾನು ನಿಮ್ಮನ್ನು ಒಡಂಬಡಿಕೆಗೆ ತರುತ್ತೇನೆ.


“ಇಲ್ಲವೆ ನಾನು ಆ ದೇಶದ ಮೇಲೆ ಖಡ್ಗವನ್ನು ತರಿಸಿ, ‘ಖಡ್ಗವೇ, ಆ ದೇಶದಲ್ಲಿ ಹಾದುಹೋಗು,’ ಎಂದು ಹೇಳಿ, ಅದು ಮನುಷ್ಯರನ್ನೂ, ಮೃಗಗಳನ್ನೂ ಅದರೊಳಗಿಂದ ಕಡಿದುಬಿಟ್ಟಾಗ,


‘ಇಸ್ರಾಯೇಲಿನ ಪರ್ವತಗಳೇ, ಸಾರ್ವಭೌಮ ಯೆಹೋವ ದೇವರ ವಾಕ್ಯವನ್ನು ಕೇಳಿರಿ. ಹೌದು, ಸಾರ್ವಭೌಮ ಯೆಹೋವ ದೇವರು ಪರ್ವತಗಳಿಗೂ ಗುಡ್ಡಗಳಿಗೂ ನದಿಗಳಿಗೂ ಕಣಿವೆಗಳಿಗೂ ಹೀಗೆ ಹೇಳುತ್ತಾರೆ, ನಾನೇ ನಿಮ್ಮ ಮೇಲೆ ಖಡ್ಗವನ್ನು ಹಿಡಿದು, ನಿಮ್ಮ ಪೂಜಾಸ್ಥಳಗಳನ್ನು ನಾಶಮಾಡುತ್ತೇನೆ.


ನಾನು ಅವರಿಗೂ, ಅವರ ತಂದೆಗಳಿಗೂ ಕೊಟ್ಟ ದೇಶದೊಳಗಿಂದ ಅವರು ನಾಶವಾಗುವವರೆಗೂ ಖಡ್ಗವನ್ನೂ, ಕ್ಷಾಮವನ್ನೂ, ವ್ಯಾಧಿಯನ್ನೂ ಅವರಲ್ಲಿ ಕಳುಹಿಸುವೆನು.’ ”


ಮನೆಯ ಹೊರಗೆ ಖಡ್ಗವೂ ಒಳಗೆ ಭಯವೂ ಇವರಲ್ಲಿರುವುವು. ಪ್ರಾಯಸ್ಥರೂ ಕನ್ನಿಕೆಯರೂ ನರೆಕೂದಲಿನವರೂ ಹಾಲು ಕುಡಿಯುವ ಕೂಸುಗಳೂ ಖಡ್ಗಗಳಿಗೆ ಸಂಹಾರವಾಗುವರು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿಂದ ಹಾಳಾಗಿ ಹೋಗುವವರೆಗೆ ಯೆಹೋವ ದೇವರು ನಿಮಗೆ ವ್ಯಾಧಿಯು ಅಂಟಿಕೊಳ್ಳುವಂತೆ ಮಾಡುವರು.


ವಿವಿಧ ಕಡೆಗಳಲ್ಲಿ ಮಹಾಭೂಕಂಪಗಳೂ ಬರಗಳೂ ವ್ಯಾಧಿಗಳೂ ಇರುವುವು. ಭಯ ಹುಟ್ಟಿಸುವ ಘಟನೆಗಳೂ ಆಕಾಶದಿಂದ ಮಹಾಸೂಚನೆಗಳೂ ಆಗುವುವು.


“ಹಿಂದೊಮ್ಮೆ ಈಜಿಪ್ಟಿಗೆ ನಾನು ಮಾಡಿದಂತೆ ನಿಮ್ಮನ್ನು ವ್ಯಾಧಿಯಿಂದ ಬಾಧಿಸಿದೆ. ನಿಮ್ಮ ಕುದುರೆಗಳನ್ನು ತೆಗೆದುಕೊಂಡು ಹೋದವರ ಜೊತೆಯಲ್ಲಿ, ನಿಮ್ಮ ಯೌವನಸ್ಥರನ್ನೂ ಖಡ್ಗದಿಂದ ಕೊಂದು ಹಾಕಿದ್ದೇನೆ. ನಿಮ್ಮ ಪಾಳೆಯಗಳ ದುರ್ವಾಸನೆಯು ನಿಮ್ಮ ಮೂಗು ಸಹಿಸದ ಹಾಗೆ ಮಾಡಿದ್ದೇನೆ. ಆದರೂ ನೀವು ನನ್ನ ಕಡೆಗೆ ಹಿಂದಿರುಗಿಕೊಳ್ಳಲಿಲ್ಲ,” ಎಂದು ಯೆಹೋವ ದೇವರು ಹೇಳುತ್ತಾರೆ.


ಯುವಕರು ಮತ್ತು ವೃದ್ಧರು ಬೀದಿಗಳ ನೆಲದ ಮೇಲೆ ಮಲಗಿದ್ದಾರೆ. ನನ್ನ ಯುವಕರು, ಯುವತಿಯರು ಖಡ್ಗದಿಂದ ಹತರಾಗಿದ್ದಾರೆ. ನಿನ್ನ ಕೋಪದ ದಿನದಲ್ಲಿ ನೀನು ಅವರನ್ನು ಸಾಯಿಸಿರುವಿರಿ, ಕೊಂದುಹಾಕಿದಿರಿ, ಕನಿಕರಿಸಲಿಲ್ಲ.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ಯೆಹೋವ ದೇವರೇ, ನೀವು ಪ್ರತೀಕಾರ ಸಲ್ಲಿಸುವ ದೇವರಾಗಿದ್ದೀರಿ. ಮುಯ್ಯಿ ತೀರಿಸುವವರು ನೀವೇ; ದೇವರೇ, ನ್ಯಾಯ ತೀರಿಸುವಂತೆ ನಿಮ್ಮನ್ನು ಪ್ರಕಟಿಸಿಕೊಳ್ಳಿರಿ.


ಆದಕಾರಣ ಯೆಹೋವ ದೇವರು ಉದಯಕಾಲದಿಂದ ನೇಮಿಸಿದ ಕಾಲದವರೆಗೂ ಇಸ್ರಾಯೇಲರ ಮೇಲೆ ವ್ಯಾಧಿಯನ್ನು ಕಳುಹಿಸಿದರು. ಆಗ ದಾನಿನಿಂದ ಬೇರ್ಷೆಬದವರೆಗೂ ಇರುವ ಜನರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಾನು ಮಿಂಚುವ ಖಡ್ಗವನ್ನು ಹದಮಾಡಿ, ನನ್ನ ಕೈ ನ್ಯಾಯವನ್ನು ಹಿಡಿದುಕೊಳ್ಳುವಾಗ, ನನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ನನ್ನನ್ನು ದ್ವೇಷಿಸುವವರಿಗೆ ಮುಯ್ಯಿತೀರಿಸುವೆನು.


ಮುಯ್ಯಿಗೆ ಮುಯ್ಯಿ ತೀರಿಸುವುದೂ, ಪ್ರತಿಫಲ ಕೊಡುವುದೂ ನನ್ನದೇ. ತಕ್ಕ ಕಾಲದಲ್ಲಿ ಅವರ ಕಾಲು ಜಾರುವುದು. ಅವರ ವಿನಾಶದ ದಿವಸ ಸಮೀಪವಾಗಿದೆ. ಅವರಿಗೆ ಸಿದ್ಧವಾದ ದುರ್ಗತಿಯ ಕಾಲ ಬೇಗ ಬರುತ್ತವೆ.”


ಕೋರಹನ ನಿಮಿತ್ತ ಸತ್ತು ಹೋದವರ ಹೊರತಾಗಿ ವ್ಯಾಧಿಯಲ್ಲಿ ಸತ್ತವರು ಹದಿನಾಲ್ಕು ಸಾವಿರ ಏಳು ನೂರು ಮಂದಿಯಾಗಿದ್ದರು.


“ ‘ನಾನು ದೇಶದಲ್ಲಿ ಶಾಂತಿಯನ್ನು ಕೊಡುವೆನು, ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ. ದೇಶದಲ್ಲಿ ದುಷ್ಟಮೃಗಗಳು ಇಲ್ಲದ ಹಾಗೆ ನಾನು ಮಾಡುವೆನು. ಖಡ್ಗ ನಿಮ್ಮ ದೇಶದಲ್ಲಿ ಹಾದು ಹೋಗುವುದಿಲ್ಲ.


ಆಗ ಮೋಶೆಯು ಜನರ ಸಂಗಡ ಮಾತನಾಡಿ, “ನಿಮ್ಮೊಳಗಿಂದ ಜನರು ಯುದ್ಧಕ್ಕೆ ಸಿದ್ಧಮಾಡಿಕೊಳ್ಳಲಿ. ಅವರು ಮಿದ್ಯಾನ್ಯರಿಗೆ ವಿರೋಧವಾಗಿ ಹೋಗಿ, ಯೆಹೋವ ದೇವರ ಪ್ರತೀಕಾರವನ್ನು ಅವರಿಗೆ ತೀರಿಸಬೇಕು.


ಆಗ ಯೆಹೂದದಲ್ಲಿ ಮೂರು ಸಾವಿರ ಜನರು ಏಟಾಮ್ ಬಂಡೆಯ ಮೇಲಕ್ಕೆ ಏರಿಹೋಗಿ, ಸಂಸೋನನಿಗೆ, “ಫಿಲಿಷ್ಟಿಯರು ನಮ್ಮನ್ನು ಆಳುತ್ತಾ ಇದ್ದಾರೆಂದು ನಿನಗೆ ಗೊತ್ತಿಲ್ಲವೋ? ನೀನು ನಮಗೆ ಹೀಗೆ ಏಕೆ ಮಾಡಿದೆ?” ಎಂದರು. ಅದಕ್ಕವನು, “ಅವರು ನನಗೆ ಮಾಡಿದ ಪ್ರಕಾರವೇ, ನಾನು ಅವರಿಗೆ ಮಾಡಿದೆನು,” ಎಂದು ಅವರಿಗೆ ಹೇಳಿದನು.


“ನಿಮ್ಮ ಜನರಾದ ಇಸ್ರಾಯೇಲರು ನಿಮಗೆ ವಿರೋಧವಾಗಿ ಪಾಪಮಾಡಿದ್ದರಿಂದ, ತಮ್ಮ ಶತ್ರುವಿನ ಮುಂದೆ ಪರಾಭವಗೊಂಡು, ನಿಮ್ಮ ಕಡೆಗೆ ತಿರುಗಿಕೊಂಡು, ನಿಮ್ಮ ನಾಮವನ್ನು ಕೊಂಡಾಡಿ, ಈ ಆಲಯದಲ್ಲಿ ನಿಮಗೆ ವಿಜ್ಞಾಪನೆಯನ್ನೂ ಪ್ರಾರ್ಥನೆಯನ್ನೂ ಮಾಡಿದರೆ,


“ದೇಶದಲ್ಲಿ ಬರಗಾಲ, ಘೋರವ್ಯಾಧಿ, ಉರಿಗಾಳಿ, ಬೆಳೆಗಳ ಮೇಲೆ ಮಿಡತೆ, ಕಂಬಳಿಹುಳು ಇವುಗಳು ಇದ್ದರೆ, ಅಥವಾ ಅವರ ಶತ್ರುಗಳು ತಮ್ಮ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ, ಯಾವ ಬಾಧೆ ಯಾವ ಬೇನೆ ಇದ್ದರೂ,


ಅವರು ಚೀಯೋನಿನಲ್ಲಿ ನಮ್ಮ ದೇವರಾದ ಯೆಹೋವ ದೇವರ ಪ್ರತಿದಂಡನೆಯನ್ನೂ, ಆತನ ಆಲಯದ ಪ್ರತಿದಂಡನೆಯನ್ನೂ ತಿಳಿಸುತ್ತಾ, ಬಾಬಿಲೋನಿನ ದೇಶದಿಂದ ತಪ್ಪಿಸಿಕೊಂಡು ಓಡಿ ಹೋಗುವವರ ಸ್ವರವನ್ನು ಕೇಳಿರಿ.


“ಬಾಣಗಳನ್ನು ಮೆರುಗು ಮಾಡಿರಿ; ಡಾಲುಗಳನ್ನು ಎತ್ತಿಕೊಳ್ಳಿರಿ, ಯೆಹೋವ ದೇವರು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾರೆ; ಆತನ ಆಲೋಚನೆ ಬಾಬಿಲೋನಿಗೆ ವಿರೋಧವಾಗಿ ಅದನ್ನು ನಾಶಮಾಡುವುದಕ್ಕೆ ಇದೆ. ಏಕೆಂದರೆ ಇದು ಯೆಹೋವ ದೇವರ ಪ್ರತಿದಂಡನೆಯು, ಅವರ ದೇವಾಲಯದ ಪ್ರತಿದಂಡನೆಯಾಗಿದೆ.


ಆಗ ಅವರು ಫರೋಹನಿಗೆ, “ಹಿಬ್ರಿಯರ ದೇವರು ನಮ್ಮನ್ನು ಸಂದರ್ಶಿಸಿದ್ದಾರೆ. ಆದ್ದರಿಂದ ನಾವು ಮರುಭೂಮಿಯಲ್ಲಿ ಮೂರು ದಿವಸ ಪ್ರಯಾಣಮಾಡಿ, ನಮ್ಮ ಯೆಹೋವ ದೇವರಿಗೆ ಯಜ್ಞ ಅರ್ಪಿಸುವುದಕ್ಕೆ ನಾವು ಹೋಗಬೇಕು. ಇಲ್ಲವಾದರೆ ಅವರು ಉಪದ್ರವದಿಂದಲೋ ಖಡ್ಗದಿಂದಲೋ ನಮ್ಮನ್ನು ದಂಡಿಸುವರು,” ಎಂದರು.


ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಅವನ ವಿರುದ್ಧ ಬಂದದ್ದರಿಂದ, ಹೋಶೇಯನು ಅವನಿಗೆ ಸೇವಕನಾಗಿ ಅವನಿಗೆ ಕಪ್ಪವನ್ನು ಕೊಟ್ಟನು.


ಅವರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ ಅರಾಮ್ಯರು ಚಿಕ್ಕ ಗುಂಪಿನ ಸೈನ್ಯದ ಸಂಗಡ ಬಂದಿದ್ದರೂ, ಯೆಹೋವ ದೇವರು ಅವರ ಮಹಾ ಸೈನ್ಯವನ್ನು ಶತ್ರುಗಳ ಕೈಯಲ್ಲಿ ಒಪ್ಪಿಸಿದನು. ಹೀಗೆಯೇ ಯೆಹೋವ ದೇವರು ಯೋವಾಷನಿಗೆ ವಿರೋಧವಾಗಿ ತೀರ್ಪು ಮಾಡಿದರು.


ಆದರೆ ನೀವು ತಿರಸ್ಕರಿಸಿ ತಿರುಗಿಬಿದ್ದರೆ, ಖಡ್ಗದ ಬಾಯಿಗೆ ತುತ್ತಾಗುವಿರಿ,” ಏಕೆಂದರೆ ಯೆಹೋವ ದೇವರೇ ಇದನ್ನು ನುಡಿದಿದ್ದಾರೆ.


ಖಡ್ಗವನ್ನೇ ಗತಿಯಾಗ ಮಾಡುವೆನು. ಆದ್ದರಿಂದ ನಿಮ್ಮನ್ನು ಖಡ್ಗಕ್ಕೆ ನೇಮಿಸುವೆನು. ನೀವೆಲ್ಲರು ಕೊಲೆಗೆ ಬೊಗ್ಗಿಕೊಳ್ಳುವಿರಿ. ಏಕೆಂದರೆ, ನಾನು ಕರೆಯಲು, ನೀವು ಉತ್ತರ ಕೊಡಲಿಲ್ಲ. ನಾನು ಹೇಳಿದಾಗ ನೀವು ಕೇಳಲಿಲ್ಲ. ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದಿರಿ. ನಾನು ಮೆಚ್ಚದ್ದನ್ನು ಆರಿಸಿಕೊಂಡಿರಿ.”


“ ‘ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು. ಅವರ ಶತ್ರುಗಳ ಮುಂದೆಯೂ, ಅವರ ಪ್ರಾಣವನ್ನು ಹುಡುಕುವವರ ಕೈಯಿಂದಲೂ ಅವರನ್ನು ಖಡ್ಗದಿಂದ ಬೀಳುವಂತೆ ಮಾಡುವೆನು. ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು.


ಅವರ ಪಟ್ಟಣಗಳಲ್ಲಿ ಖಡ್ಗವು ಹೊಳೆಯುವುದು. ಅದು ಅವರ ಸುಳ್ಳು ಪ್ರವಾದಿಗಳನ್ನು ನುಂಗಿಹಾಕುತ್ತದೆ. ಮತ್ತು ಅವರ ಯೋಜನೆಗಳನ್ನು ಕೊನೆಗೊಳಿಸುತ್ತದೆ.


ಅವರ ಮುಂದೆ ವ್ಯಾಧಿಯು ಹೋಯಿತು. ವ್ಯಾಧಿಯು ಅವನ ಹೆಜ್ಜೆಗಳನ್ನು ಅನುಸರಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು