Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:30 - ಕನ್ನಡ ಸಮಕಾಲಿಕ ಅನುವಾದ

30 ಇದಲ್ಲದೆ ನಾನು ನಿಮ್ಮ ಉನ್ನತ ಸ್ಥಳಗಳನ್ನು ಹಾಳು ಮಾಡಿ, ನಿಮ್ಮ ಧೂಪವೇದಿಗಳನ್ನು ಕಡಿದುಹಾಕಿ, ನಿಮ್ಮ ಹೆಣಗಳನ್ನು ನಿಮ್ಮ ವಿಗ್ರಹಗಳ ಮೇಲೆ ಹಾಕುವೆನು. ನಿಮ್ಮ ಬಗ್ಗೆ ನಾನು ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದುಹಾಕುವೆನು; ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಬೀಸಾಡುವೆನು; ನಾನು ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು. ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು. ನಿಮ್ಮ ಬೊಂಬೆಗಳ ಬುರುಡೆಗಳ ಮೇಲೆ ನಿಮ್ಮ ಬುರುಡೆಗಳನ್ನು ಬಿಸಾಡುವೆನು; ನಿಮ್ಮ ಬಗ್ಗೆ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಿಮ್ಮ ಪೂಜಾಸ್ಥಳಗಳನ್ನು ಇಲ್ಲದಂತೆ ಮಾಡುವೆನು; ನೀವು ಸೂರ್ಯನ ಪೂಜೆಗೆ ಇಟ್ಟಿರುವ ಕಂಬಗಳನ್ನು ಕಡಿದು ಹಾಕುವೆನು; ನಿಮ್ಮ ಬೊಂಬೆಗಳ ಮುಂಡಗಳ ಮೇಲೆ ನಿಮ್ಮ ಮುಂಡಗಳನ್ನು ಬೀಸಾಡುವೆನು; ನಿಮ್ಮ ವಿಷಯದಲ್ಲಿ ಅಸಹ್ಯಪಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ನಾನು ನಿಮ್ಮ ಉನ್ನತವಾದ ಪೂಜಾಸ್ಥಳಗಳನ್ನು ನಾಶಮಾಡುವೆ. ನಾನು ನಿಮ್ಮ ಧೂಪವೇದಿಕೆಗಳನ್ನು ಕಡಿದುಹಾಕುವೆನು. ನಿಮ್ಮ ವಿಗ್ರಹಗಳ ಮೇಲೆ ನಿಮ್ಮ ಹೆಣಗಳನ್ನು ಹಾಕುವೆನು. ನೀವು ನನಗೆ ಬಹಳ ಅಸಹ್ಯರಾಗಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:30
28 ತಿಳಿವುಗಳ ಹೋಲಿಕೆ  

ಅಲ್ಲಿದ್ದ ಉನ್ನತ ಪೂಜಾಸ್ಥಳಗಳ ಯಾಜಕರನ್ನೆಲ್ಲಾ ಬಲಿಪೀಠಗಳ ಮೇಲೆ ಕೊಂದುಹಾಕಿ, ಅವುಗಳ ಮೇಲೆ ಮನುಷ್ಯರ ಎಲುಬುಗಳನ್ನು ಸುಟ್ಟು, ಯೋಷೀಯನು ಯೆರೂಸಲೇಮಿಗೆ ತಿರುಗಿಬಂದನು.


ಹೀಗಿರುವದರಿಂದ ಯಾಕೋಬನು ಬಲಿಪೀಠಗಳ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿಪುಡಿಮಾಡಿ, ಅಶೇರ ಸ್ತಂಭಗಳನ್ನೂ ಧೂಪವೇದಿಗಳನ್ನೂ ಇನ್ನು ಪ್ರತಿಷ್ಠಾಪಿಸದೆ ಹೋದರೆ ಅದೇ ಯಾಕೋಬನ ಅಪರಾಧಕ್ಕೆ ಪ್ರಾಯಶ್ಚಿತ್ತವಾಗುವುದು ಮತ್ತು ಅವನ ಪಾಪಪರಿಹಾರವನ್ನು ಸೂಚಿಸುವ ಪೂರ್ಣಫಲವು ಇದೇ ಆಗಿದೆ.


ಆಮೇಲೆ ಅವರಲ್ಲಿ ಹತರಾದವರು, ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಬಲಿಪೀಠಗಳ ಸುತ್ತಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ, ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸಿರಾದ ಮರದ ಕೆಳಗೂ, ಪ್ರತಿಯೊಂದು ದಪ್ಪವಾದ ಏಲಾ ಮರದ ಕೆಳಗಡೆಯೂ, ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವುದರಲ್ಲಿಯೂ ನಾನೇ ಯೆಹೋವ ದೇವರೆಂದು ತಿಳಿಯುವಿರಿ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿ ಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟು ಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ. ಕ್ಷೇಮ ಕಾಲವನ್ನು ಎದುರು ನೋಡಿದೆವು, ಹಾ, ಅಂಜಿಕೆಯೇ.


ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.


ಇದಾದನಂತರ ಅಲ್ಲಿ ಇರುವವರಾದ ಸಮಸ್ತ ಇಸ್ರಾಯೇಲರು ಯೆಹೂದ ಪಟ್ಟಣಗಳಿಗೆ ಹೊರಟುಹೋಗಿ, ವಿಗ್ರಹಗಳನ್ನು ಮುರಿದು, ಅಶೇರ ಸ್ತಂಭಗಳನ್ನು ಕಡಿದು, ಸಮಸ್ತ ಯೆಹೂದ, ಬೆನ್ಯಾಮೀನ್, ಎಫ್ರಾಯೀಮ್, ಮನಸ್ಸೆ ದೇಶಗಳಲ್ಲಿ ಯಾವುದನ್ನೂ ಉಳಿಸಲಿಲ್ಲ, ಉನ್ನತ ಪೂಜಾಸ್ಥಳಗಳನ್ನು ಮತ್ತು ಬಲಿಪೀಠಗಳನ್ನು ಕೆಡವಿಹಾಕಿದರು. ಆಗ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಆಸ್ತಿಪಾಸ್ತಿಯಿರುವ ಪಟ್ಟಣಗಳಿಗೆ ತಿರುಗಿ ಹೋದರು.


ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.


ಯೋಷೀಯನು ತಿರುಗಿಕೊಂಡು ಅಲ್ಲಿ ಬೆಟ್ಟದಲ್ಲಿದ್ದ ಸಮಾಧಿಗಳನ್ನು ಕಂಡು, ಸಮಾಧಿಗಳಿಂದ ಎಲುಬುಗಳನ್ನು ತೆಗೆದುಕೊಂಡು, ದೇವರ ಮನುಷ್ಯನು ಹೇಳಿದ ಈ ಮಾತುಗಳನ್ನು ಯೆಹೋವ ದೇವರ ವಾಕ್ಯದ ಪ್ರಕಾರ, ಬಲಿಪೀಠದ ಮೇಲೆ ಅವುಗಳನ್ನು ಸುಟ್ಟು ಅದನ್ನು ಅಶುದ್ಧ ಮಾಡಿದನು.


ಯೋಷೀಯನು ಯೆಹೂದದ ಪಟ್ಟಣಗಳಿಂದ ಯಾಜಕರೆಲ್ಲರನ್ನು ಬರಮಾಡಿ, ಗಿಬೆಯ ಪಟ್ಟಣದಿಂದ ಬೇರ್ಷೆಬದವರೆಗೂ, ಯಾಜಕರು ಧೂಪ ಸುಡುತ್ತಿದ್ದ ಉನ್ನತ ಪೂಜಾಸ್ಥಳಗಳನ್ನೂ ಅಶುದ್ಧ ಮಾಡಿದನು. ಅನಂತರ ಪುರಾಧಿಕಾರಿಯಾದ ಯೆಹೋಶುವನ ಬಾಗಿಲಿನ ದ್ವಾರದಲ್ಲಿದ್ದ ಬಾಗಿಲುಗಳ ಉನ್ನತ ಸ್ಥಳಗಳನ್ನು ಕೆಡವಿ ಹಾಕಿದನು.


ಅವನು ಯೆಹೋವ ದೇವರ ಅಪ್ಪಣೆಯಿಂದ ಆ ಪೀಠವನ್ನು ಕುರಿತು: “ಪೀಠವೇ, ಪೀಠವೇ! ದಾವೀದನ ಸಂತಾನದಲ್ಲಿ ಯೋಷೀಯ ಎಂಬ ಹೆಸರುಳ್ಳ ಒಬ್ಬ ಮಗನು ಹುಟ್ಟುವನು. ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು ಬಲಿಯಾಗಿ ಅರ್ಪಿಸುವನು. ಮನುಷ್ಯರ ಎಲುಬುಗಳನ್ನು ನಿನ್ನ ಮೇಲೆ ಸುಡಲಾಗುವವು,” ಎಂದು ಯೆಹೋವ ದೇವರು ಹೇಳುತ್ತಾರೆ ಎಂದನು.


ನನ್ನ ನಿಯಮಗಳನ್ನು ನೀವು ತಿರಸ್ಕರಿಸಿದರೆ, ನನ್ನ ನಿರ್ಣಯಗಳಿಗೆ ಅಸಹ್ಯಪಟ್ಟರೆ, ನೀವು ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಎಲ್ಲಾ ಆಜ್ಞೆಗಳ ಪ್ರಕಾರ ಮಾಡದೆ ಹೋದರೆ,


ಇದಲ್ಲದೆ ನಾನು ನನ್ನ ಗುಡಾರವನ್ನು ನಿಮ್ಮ ಮಧ್ಯದಲ್ಲಿ ಮಾಡಿಕೊಳ್ಳುವೆನು. ನನ್ನ ಪ್ರಾಣವು ನಿಮ್ಮನ್ನು ತಿರಸ್ಕರಿಸುವುದಿಲ್ಲ.


ನಾನು ನಿಮ್ಮೆದುರಿನಲ್ಲಿಯೇ ಹೊರಗೆ ಹಾಕಿದ ಜನಾಂಗಗಳಂತೆ ನೀವು ನಡೆಯಬಾರದು. ಏಕೆಂದರೆ ಅವರು ಇಂಥವುಗಳನ್ನೆಲ್ಲಾ ಮಾಡಿದ್ದಾರೆ. ಆದಕಾರಣ ನಾನು ಅವರನ್ನು ಕಂಡು ಅಸಹ್ಯಗೊಂಡಿದ್ದೇನೆ.


ಏಕೆಂದರೆ ಈ ಸ್ಥಳದವರ ಕೂಗು ಯೆಹೋವ ದೇವರ ಸನ್ನಿಧಿಯಲ್ಲಿ ದೊಡ್ಡದಾಗಿರುವುದರಿಂದ ನಾವು ಇದನ್ನು ನಾಶ ಮಾಡುತ್ತೇವೆ. ಯೆಹೋವ ದೇವರು ನಮ್ಮನ್ನು ಕಳುಹಿಸಿದ್ದಾರೆ.”


ಯೆಹೋವ ದೇವರು ಅದನ್ನು ನೋಡಿ ಬೇಸರದಿಂದ ತಮ್ಮ ಪುತ್ರಪುತ್ರಿಯರನ್ನು ದಂಡಿಸಿದರು.


ಏಕೆಂದರೆ ಅವನು ಬೇತೇಲಿನಲ್ಲಿರುವ ಬಲಿಪೀಠಕ್ಕೆ ವಿರೋಧವಾಗಿಯೂ, ಸಮಾರ್ಯ ಪಟ್ಟಣಗಳಲ್ಲಿರುವ ಪೂಜಾಸ್ಥಳಗಳ ಸಮಸ್ತ ಮನೆಗಳಿಗೆ ವಿರೋಧವಾಗಿಯೂ, ಯೆಹೋವ ದೇವರ ಮಾತಿನಿಂದ ಕೂಗಿದ ಮಾತು ನಿಶ್ಚಯವಾಗಿ ಆಗುವುದು,” ಎಂದನು.


ಆಗ ಯೆಹೋವ ದೇವರು ತಮ್ಮ ಜನರ ಮೇಲೆ ಬಹು ಬೇಸರಗೊಂಡರು. ದೇವರು ತಮ್ಮ ವಾರಸುದಾರರಾದ ಇಸ್ರಾಯೇಲರ ಮೇಲೆ ಅಸಂತೋಷಗೊಂಡು,


ಅವರು ನನಗೆ, “ಮನುಷ್ಯಪುತ್ರನೇ, ನನ್ನ ಸಿಂಹಾಸನದ ಸ್ಥಳವನ್ನೂ ನನ್ನ ಅಂಗಾಲುಗಳ ಸ್ಥಳವನ್ನೂ ಮತ್ತು ನಾನು ಇಸ್ರಾಯೇಲರ ಮಧ್ಯದಲ್ಲಿ ನಿತ್ಯವಾಗಿ ವಾಸವಾಗಿರುವ ಸ್ಥಳವನ್ನೂ ನನ್ನ ಪರಿಶುದ್ಧ ಹೆಸರನ್ನೂ ಇಸ್ರಾಯೇಲಿನ ಮನೆತನದವರೂ ಎಂದರೆ ಅವರಾದರೂ ಅವರ ಅರಸರಾದರೂ ತಮ್ಮ ವ್ಯಭಿಚಾರದಿಂದಲೂ ಅವರ ಅರಸರ ಮರಣದ ಸಮಯದಲ್ಲಿ ಅವರ ಅಂತ್ಯಕ್ರಿಯೆಯ ವಿಧಿಗಳ ಅರ್ಪಣೆಯಿಂದ ಅಪವಿತ್ರಗೊಳಿಸುವುದಿಲ್ಲ.


ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ. ಸರ್ವಶಕ್ತ ದೇವರಾದ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟುಕೊಂಡಿದ್ದಾರೆ: ನಾನು ಯಾಕೋಬಿನ ಅಹಂಕಾರವನ್ನು ಅಸಹ್ಯಿಸಿಕೊಂಡು, ಅವನ ಅರಮನೆಗಳನ್ನು ಹಗೆಮಾಡುತ್ತೇನೆ. ಆದಕಾರಣ ಪಟ್ಟಣವನ್ನೂ ಅದರಲ್ಲಿರುವ ಸಮಸ್ತವನ್ನೂ ನಾನು ಒಪ್ಪಿಸಿ ಬಿಡುತ್ತೇನೆ.


“ಇಸಾಕನ ಉನ್ನತ ಪೂಜಾಸ್ಥಳಗಳು ನಾಶವಾಗುವುವು. ಇಸ್ರಾಯೇಲಿನ ಪರಿಶುದ್ಧ ಸ್ಥಳಗಳು ಹಾಳಾಗುವುವು. ನಾನು ಖಡ್ಗದೊಂದಿಗೆ ಯಾರೊಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು.”


ಆದರೆ ಮೊದಲು ನಾನು ಅವರ ಅಕ್ರಮಕ್ಕೂ, ಅವರ ಪಾಪಕ್ಕೂ ಎರಡಷ್ಟು ಪ್ರತಿಫಲ ಕೊಡುತ್ತೇನೆ. ಅವರು ನನ್ನ ದೇಶವನ್ನು ತಮ್ಮ ದುಷ್ಕೃತ್ಯಗಳಿಂದ ಅಪವಿತ್ರ ಮಾಡಿ, ನನ್ನ ಸೊತ್ತನ್ನು ತಮ್ಮ ಅಸಹ್ಯ ವಿಗ್ರಹಗಳಿಂದ ತುಂಬಿಸಿದ್ದಾರೆ,” ಎಂದು ಯೆಹೋವ ದೇವರು ಹೇಳುತ್ತಾರೆ.


ಅನಂತರ ನಿನ್ನನ್ನು ಅವರ ಕೈಗಳಿಗೆ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ, ನಿನ್ನ ಉನ್ನತ ಸ್ಥಾನಗಳನ್ನು ಒಡೆದು ಬಿಡುವರು. ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ, ನಿನ್ನ ಸುಂದರ ಆಭರಣಗಳನ್ನು ಕಸಿದುಕೊಂಡು, ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿಹೋಗುವರು.


ಅವರ ಹೃದಯವು ವಂಚಕವಾದದ್ದು. ಈಗ ಅವರು ಅಪರಾಧಗಳನ್ನು ಹೊರಬೇಕು. ಯೆಹೋವ ದೇವರು ಅವರ ಬಲಿಪೀಠಗಳನ್ನು ಕೆಡವಿ, ಅವರ ವಿಗ್ರಹಗಳನ್ನು ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು