Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:33 - ಕನ್ನಡ ಸಮಕಾಲಿಕ ಅನುವಾದ

33 ನಿಮ್ಮನ್ನು ಜನಾಂಗಗಳಲ್ಲಿ ಚದರಿಸಿ, ನಿಮ್ಮ ಹಿಂದೆ ಖಡ್ಗವನ್ನು ಬೀಸುವೆನು. ನಿಮ್ಮ ಭೂಮಿ ಹಾಳಾಗಿರುವುದು, ನಿಮ್ಮ ಪಟ್ಟಣಗಳು ನಾಶವಾಗಿರುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ನಿಮ್ಮನ್ನು ಅನ್ಯಜನಗಳಲ್ಲಿ ಚದುರಿಸಿ, ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವುದು, ನಿಮ್ಮ ಪಟ್ಟಣಗಳು ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ನಿಮ್ಮನ್ನು ಅನ್ಯಜನಗಳ ನಡುವೆ ಚದರಿಸಿ ನಿಮ್ಮ ಹಿಂದೆ ಕತ್ತಿಬೀಸುವೆನು. ನಿಮ್ಮ ನಾಡು ನಾಶವಾಗುವುದು. ಪಟ್ಟಣಗಳು ಪಾಳುಬೀಳುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ನಿಮ್ಮನ್ನು ಅನ್ಯಜನಗಳಲ್ಲಿ ಚದರಿಸಿ ನಿಮ್ಮ ಹಿಂದೆ ಕತ್ತಿಯನ್ನು ಬೀಸುವೆನು. ನಿಮ್ಮ ದೇಶವು ಹಾಳಾಗುವದು, ನಿಮ್ಮ ಪಟ್ಟಣಗಳು ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ನಾನು ನಿಮ್ಮನ್ನು ಜನಾಂಗಗಳ ಮಧ್ಯದಲ್ಲಿ ಚದರಿಸಿಬಿಡುವೆನು. ಕತ್ತಿಯನ್ನು ಇರಿದು ನಿಮ್ಮನ್ನು ನಾಶಮಾಡುವೆ. ನಿಮ್ಮ ಭೂಮಿ ಬರಿದಾಗುವುದು ಮತ್ತು ನಿಮ್ಮ ಪಟ್ಟಣಗಳು ನಾಶವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:33
34 ತಿಳಿವುಗಳ ಹೋಲಿಕೆ  

ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರಗಾಳಿಯಿಂದ ಚದರಿಸಿ ಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು. ಹಾದು ಹೋಗುವವನೂ, ತಿರುಗಿಕೊಳ್ಳುವವನೂ ಇಲ್ಲದೆ ಹೋಯಿತು. ಏಕೆಂದರೆ ರಮ್ಯವಾದ ದೇಶವನ್ನು ಹಾಳುಮಾಡಿದರು.”


ನಾನು ಅವರನ್ನು ಇತರ ಜನಾಂಗಗಳಲ್ಲಿ ಚದರಿಸುತ್ತೇನೆಂದೂ, ದೇಶಗಳಲ್ಲಿ ಹರಡಿಸುತ್ತೇನೆಂದೂ ಮರುಭೂಮಿಯಲ್ಲಿ ಅವರ ಮೇಲೆ ಕೈಯೆತ್ತಿ ಪ್ರಮಾಣಮಾಡಿದೆನು.


ಆಗ ಯೆಹೋವ ದೇವರು ನಿಮ್ಮನ್ನು ದೇಶಗಳಲ್ಲಿ ಚದರಿಸಿಬಿಡುವರು. ಯೆಹೋವ ದೇವರು ನಿಮ್ಮನ್ನು ಅಟ್ಟಿದ ದೇಶಗಳ ಮಧ್ಯದಲ್ಲಿ ನೀವು ಸ್ವಲ್ಪ ಮಂದಿಯಾಗಿ ಉಳಿಯುವಿರಿ.


ನಿನ್ನನ್ನು ಜನಾಂಗಗಳಲ್ಲಿ ಚದರಿಸಿ, ದೇಶಗಳಲ್ಲಿ ಹರಡಿಸುವೆನು. ನಿನ್ನ ಅಶುದ್ಧತ್ವವನ್ನು ನಿನ್ನಿಂದ ತೆಗೆದು ನಾಶಮಾಡುವೆನು.


ಕಡಿಯತಕ್ಕ ಕುರಿಗಳಂತೆ ನಮ್ಮನ್ನು ಅವರಿಗೆ ಒಪ್ಪಿಸಿದ್ದೀರಿ; ಜನಾಂಗಗಳಲ್ಲಿ ನಮ್ಮನ್ನು ಚದರಿಸಿದ್ದೀರಿ.


ಇದಲ್ಲದೆ ಅವರು ಖಡ್ಗಕ್ಕೆ ತುತ್ತಾಗಿ ಬೀಳುವರು ಮತ್ತು ಸೆರೆಯಾಗಿ ಎಲ್ಲಾ ರಾಷ್ಟ್ರಗಳಲ್ಲಿ ಒಯ್ಯುವರು. ಯೆಹೂದ್ಯರಲ್ಲದವರ ಕಾಲ ಪರಿಪೂರ್ಣವಾಗುವವರೆಗೆ ಅವರು ಯೆರೂಸಲೇಮನ್ನು ತುಳಿದುಹಾಕುವರು.


ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ; ದೂರ ಹೋಗಿರಿ, ದೂರ ಹೋಗಿರಿ, ಮುಟ್ಟಬೇಡಿರಿ, ಎಂದು ಕೂಗಿಕೊಂಡರು. ಅವರು ಓಡಿಹೋಗಿ ಅಲೆದಾಡುತ್ತಿರುವಾಗ, ಅವರು ಇನ್ನು ಮೇಲೆ ಅಲ್ಲಿ ವಾಸಮಾಡುವುದಿಲ್ಲ, ಎಂದು ಬೇರೆ ಜನಾಂಗಗಳೊಳಗೆ ಹೇಳಿದರು.


ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


“ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,


“ದಯಮಾಡಿ ನಿಮ್ಮ ಸೇವಕನಾದ ಮೋಶೆಗೆ ಹೇಳಿದ ಈ ಮಾತನ್ನು ಜ್ಞಾಪಕಮಾಡಿಕೊಳ್ಳಿರಿ. ಮೋಶೆಯ ಮುಖಾಂತರ, ‘ನೀವು ದ್ರೋಹ ಮಾಡಿದರೆ, ನಾನು ನಿಮ್ಮನ್ನು ಜನಾಂಗಗಳ ನಡುವೆ ಚದರಿಸಿಬಿಡುವೆನು.


ತಮ್ಮ ಕೈಯನ್ನು ಎತ್ತಿ ಅವರಿಗೆ ಪ್ರಮಾಣ ಮಾಡಬೇಕಾಯಿತು.


ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ. ನಿಮ್ಮ ಹೊಲಗಳನ್ನು ಪರರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಇತರ ಜನರಿಂದ ಕೆಡವಿಬಿದ್ದು ಹಾಳಾಗಿದೆ.


ಆಗ ನಾನು ಯೆಹೂದದ ಪಟ್ಟಣಗಳಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ಉಲ್ಲಾಸದ ಶಬ್ದವನ್ನೂ, ಸಂತೋಷ ಶಬ್ದವನ್ನೂ, ಮದುಮಗನ ಶಬ್ದವನ್ನೂ, ಮದುಮಗಳ ಶಬ್ದವನ್ನೂ ನಿಲ್ಲಿಸುವೆನು. ಏಕೆಂದರೆ, ದೇಶವು ಹಾಳಾಗುವುದು.


“ಅಡವಿಯ ಗಾಳಿಯಿಂದ ಹಾರಿಹೋಗುವ ಹೊಟ್ಟಿನಂತೆ ಅವರನ್ನು ಚದರಿಸುವೆನು.


ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.


“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ: ದೂರದಲ್ಲಿರುವ ದ್ವೀಪಗಳಲ್ಲಿ ಅದನ್ನು ಸಾರಿರಿ! ‘ಇಸ್ರಾಯೇಲನ್ನು ಚದರಿಸಿದಾತನೇ ಅವರನ್ನು ಕೂಡಿಸಿ, ಕುರುಬನು ತನ್ನ ಮಂದೆಯನ್ನು ಕಾಯುವ ಹಾಗೆ ಅವರನ್ನು ಕಾಯುವನು’ ಎಂದು ಪ್ರಕಟಿಸಿರಿ.


ಅದರ ಮೂರನೆಯ ಒಂದು ಪಾಲನ್ನು ನಗರದ ಮಧ್ಯದಲ್ಲಿ ಮುತ್ತಿಗೆಯ ದಿವಸಗಳು ಮುಗಿದ ಮೇಲೆ ಬೆಂಕಿಯಿಂದ ಸುಡಬೇಕು. ಮೂರನೆಯ ಒಂದು ಪಾಲನ್ನು ತೆಗೆದುಕೊಂಡು ಖಡ್ಗದಿಂದ ಸುತ್ತಲೂ ಕಡಿಯಬೇಕು. ಉಳಿದ ಮೂರನೆಯ ಪಾಲನ್ನು ಗಾಳಿಗೆ ಚೆಲ್ಲಬೇಕು ಮತ್ತು ನಾನು ಅವುಗಳ ಹಿಂದೆ ಖಡ್ಗವನ್ನು ಬೀಸುವೆನು.


ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋಗಿದ್ದರೂ, ಖಡ್ಗವು ನನ್ನ ಆಜ್ಞಾನುಸಾರ ಅಲ್ಲಿಯೂ ಅವರನ್ನು ಕೊಲ್ಲುವುದು. “ಅವರ ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.”


“ಪಾಪ ಮಾಡದವನು ಯಾವನೂ ಇಲ್ಲವಲ್ಲಾ. ಆದ್ದರಿಂದ ಅವರು ನಿಮಗೆ ವಿರೋಧವಾಗಿ ಪಾಪಮಾಡಲು, ನೀವು ಅವರ ಮೇಲೆ ಕೋಪಿಸಿಕೊಂಡು ದೂರವಾದರೂ, ಸಮೀಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಹೋಗುವಂತೆ ನೀವು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ,


ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.


ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾ ಕಷ್ಟ ನಿಂದೆಗಳಿಗೆ ಒಳಗಾಗಿದ್ದಾರೆ. ಯೆರೂಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.


ಆಗ ಹಾಮಾನನು ಅರಸನಾದ ಅಹಷ್ವೇರೋಷನಿಗೆ, “ನಿನ್ನ ರಾಜ್ಯದ ಸಕಲ ಪ್ರಾಂತಗಳಲ್ಲಿರುವ ಜನರೊಳಗೆ ಚದರಿ ಬಂದು ವಾಸಿಸುವ ಪ್ರತ್ಯೇಕವಾದ ಜನಾಂಗದ ಜನರಿದ್ದಾರೆ. ಅವರ ರೀತಿನೀತಿಗಳು ಎಲ್ಲಾ ಜನರಿಗಿಂತಲೂ ಬೇರೆಯಾಗಿರುತ್ತವೆ. ಈ ಜನರು ಅರಸನ ನಿಯಮಗಳನ್ನು ಕೈಗೊಳ್ಳುವುದೇ ಇಲ್ಲ. ಆದಕಾರಣ ಇಂಥವರನ್ನು ಸುಮ್ಮನೇ ಬಿಡುವುದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.


ನಿಮ್ಮ ಜನರನ್ನು ನೀವು ಕ್ರಯವಿಲ್ಲದೆ ಮಾರಿಬಿಟ್ಟಂತಿದೆ. ಆ ಮಾರಾಟದಿಂದ ಲಾಭ ಏನೂ ಇಲ್ಲದಂತಿದೆ.


ಆಗ ನಾನು, “ಯೆಹೋವ ದೇವರೇ, ಇದು ಎಷ್ಟರವರೆಗೆ?” ಎಂದೆನು. ಅದಕ್ಕೆ ಅವರು ಹೀಗೆ ಉತ್ತರಕೊಟ್ಟರು, “ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯನಿಲ್ಲದೆ, ಹೊಲಗಳು ಸಂಪೂರ್ಣವಾಗಿ ಹಾಳಾಗುವವರೆಗೂ,


ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ. ಇತರ ಜನಾಂಗಗಳನ್ನು ನಾಶ ಮಾಡುವವನು ಹೊರಟಿದ್ದಾನೆ. ನಿನ್ನ ದೇಶವನ್ನು ಹಾಳು ಮಾಡುವುದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ. ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವುದು.


ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’


ಜನಭರಿತವಾಗಿದ್ದ ನಗರಿಯು ಹೇಗೆ ಬರಿದಾಗಿ ಹೋಗಿದೆ! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ, ಈಗ ಹೇಗೆ ವಿಧವೆಯಾಗಿದ್ದಾಳೆ! ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ, ಹೇಗೆ ಈಗ ದಾಸಿಯಂತಾಗಿದ್ದಾಳೆ!


ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು. ಅವರು ಇನ್ನು ಅವರನ್ನು ಲಕ್ಷಿಸುವುದಿಲ್ಲ. ಅವರು ಯಾಜಕರನ್ನು ಗೌರವಿಸಲಿಲ್ಲ. ಅವರು ಹಿರಿಯರಿಗೆ ದಯೆ ತೋರಿಸಲಿಲ್ಲ.


ನಿವಾಸಿಗಳುಳ್ಳ ಪಟ್ಟಣಗಳು ಹಾಳಾಗುವುವು. ದೇಶವು ನಿರ್ಜನವಾಗುವುದು. ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”


ಇಗೋ, ನಾಶನದಿಂದ ಅವರು ತಪ್ಪಿಸಿಕೊಂಡರೂ ಈಜಿಪ್ಟ್ ಅವರನ್ನು ಕೂಡಿಸುವುದು. ಮೋಫ್ ಪಟ್ಟಣವು ಅವರನ್ನು ಹೂಳುವುದು. ಅವರ ಬೆಳ್ಳಿಯ ಬೊಕ್ಕಸಗಳು ಮುಳ್ಳು ಪೊದೆಗಳ ಪಾಲಾಗುವುವು. ಮುಳ್ಳುಗಿಡಗಳು ಅವರ ಗುಡಾರಗಳನ್ನು ಆವರಿಸಿಕೊಂಡಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು