ಯಾಜಕಕಾಂಡ 26:35 - ಕನ್ನಡ ಸಮಕಾಲಿಕ ಅನುವಾದ35 ನೀವು ನಿಮ್ಮ ಶತ್ರುಗಳ ದೇಶದಲ್ಲಿ ವಾಸವಾಗಿದ್ದಾಗ, ಹಾಳುಬಿದ್ದ ನಿಮ್ಮ ನಾಡು ತಾನು ಹೊಂದದ ವಿಶ್ರಾಂತಿಯನ್ನು ಈಗ ಸುದೀರ್ಘವಾಗಿ ಹೊಂದಿಕೊಳ್ಳುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಸಬ್ಬತ್ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿನಗಳಲ್ಲಿ ಅನುಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ದೊರಕದ ಸಕಾಲದ ವಿಶ್ರಾಂತಿಯನ್ನು ಅದು ಹಾಳುಬಿದ್ದಿರುವ ದಿನಗಳಲ್ಲಿ ಸುದೀರ್ಘವಾಗಿ ಅನುಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನೀವು ಅದರಲ್ಲಿ ವಾಸವಾಗಿದ್ದಾಗ ಅದಕ್ಕೆ ತಕ್ಕ ಕಾಲದಲ್ಲಿ ದೊರೆಯದ ವಿಶ್ರಾಂತಿಯನ್ನು, ಅದು ಹಾಳುಬಿದ್ದಿರುವ ಎಲ್ಲಾ ದಿವಸಗಳಲ್ಲಿ ಅನುಭವಿಸುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಪ್ರತಿ ಏಳು ವರ್ಷದ ನಂತರ ಭೂಮಿಗೆ ವಿಶ್ರಾಂತಿ ಕೊಡಬೇಕೆಂದು ಧರ್ಮಶಾಸ್ತ್ರ ಹೇಳಿದಂತೆ, ನೀವು ವೈರಿಗಳ ದೇಶದಲ್ಲಿ ವಾಸಿಸಿದ ಕಾಲವೆಲ್ಲಾ ನೀವು ಭೂಮಿಗೆ ಕೊಡದೆ ಇದ್ದ ವಿಶ್ರಾಂತಿಯನ್ನು ಆ ಸಮಯದಲ್ಲಿ ಭೂಮಿಯು ಪಡೆದುಕೊಳ್ಳುವುದು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ಪ್ರತಿಯೊಬ್ಬನು ತನ್ನ ಸಹೋದರನಿಗೂ, ಪ್ರತಿ ಮನುಷ್ಯನು ತನ್ನ ನೆರೆಯವನಿಗೂ ಬಿಡುಗಡೆಯನ್ನು ಸಾರುವುದರಲ್ಲಿ ನೀವು ನನಗೆ ಕಿವಿಗೊಡಲಿಲ್ಲ. ಇಗೋ, ನಾನು ಖಡ್ಗ, ಬರ, ವ್ಯಾಧಿ ಇವುಗಳಿಗಾಗಿಯೇ ನಿಮಗೆ ಬಿಡುಗಡೆಯನ್ನು ಸಾರುತ್ತೇನೆ ಎಂದು ಯೆಹೋವ ದೇವರು ಹೇಳುತ್ತಾರೆ ಮತ್ತು ಭೂಮಿಯ ಎಲ್ಲಾ ರಾಜ್ಯಗಳಿಗೆ ನಿಮ್ಮನ್ನೂ ತಿರಸ್ಕಾರ ಹೊಂದುವಂತೆ ಮಾಡುವೆನು.