Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 26:38 - ಕನ್ನಡ ಸಮಕಾಲಿಕ ಅನುವಾದ

38 ಜನಾಂಗಗಳೊಳಗೆ ನಾಶವಾಗುವಿರಿ. ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ತಿಂದುಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ, ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅನ್ಯಜನಗಳಲ್ಲಿ ಚದರಿಹೋಗಿ ಕಣ್ಮರೆಯಾಗುವಿರಿ. ಶತ್ರುಗಳ ದೇಶ ನಿಮ್ಮನ್ನು ಕಬಳಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅನ್ಯಜನಗಳಲ್ಲಿ ಚದರಿಸಲ್ಪಟ್ಟು ಕಾಣಿಸದೆ ಹೋಗುವಿರಿ; ನಿಮ್ಮ ಶತ್ರುಗಳ ದೇಶವು ನಿಮ್ಮನ್ನು ನುಂಗಿಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ನೀವು ಬೇರೆ ಜನಾಂಗಗಳಲ್ಲಿ ಬೆರೆತು ಇಲ್ಲದಂತಾಗುವಿರಿ. ನಿಮ್ಮ ವೈರಿಗಳ ದೇಶದಲ್ಲಿ ನೀವು ಮಾಯವಾಗಿ ಹೋಗುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 26:38
10 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀವು ವಾಸಿಸುವುದಕ್ಕೆ ಹೋಗಲು ಮನಸ್ಸು ಮಾಡುವ ಸ್ಥಳದಲ್ಲಿ ಖಡ್ಗದಿಂದಲೂ ಕ್ಷಾಮದಿಂದಲೂ ವ್ಯಾಧಿಯಿಂದಲೂ ಸಾಯುವಿರೆಂದು ಈಗ ನಿಶ್ಚಯವಾಗಿ ತಿಳಿದುಕೊಳ್ಳಿರಿ,” ಎಂದನು.


ಆ ದಿನದಲ್ಲಿ ದೊಡ್ಡ ತುತೂರಿಯು ಊದಲಾಗುವುದು. ಆಗ ಅಸ್ಸೀರಿಯ ದೇಶದಲ್ಲಿ ಚದರಿಹೋದವರೂ, ಈಜಿಪ್ಟ್ ದೇಶದಲ್ಲಿ ಗಡೀಪಾರಾದವರೂ, ಯೆರೂಸಲೇಮಿನ ಪರಿಶುದ್ಧ ಪರ್ವತದ ಬಳಿಗೆ ಬಂದು ಯೆಹೋವ ದೇವರನ್ನು ಆರಾಧಿಸುವರು.


ಇದಲ್ಲದೆ, ಯೆಹೋವ ದೇವರು, ನೀವು ಇನ್ನು ಮೇಲೆ ನೋಡುವುದಿಲ್ಲ ಎಂದು ಹೇಳಿದ ದಾರಿಯಲ್ಲಿಯೇ ಹಡಗುಗಳಲ್ಲಿ ಜನರು ನಿಮ್ಮನ್ನು ಈಜಿಪ್ಟಿಗೆ ತಿರುಗಿ ಬರಮಾಡುವರು. ನಿಮ್ಮನ್ನು ಅಲ್ಲಿ ದಾಸರಾಗಿಯೂ ದಾಸಿಯರಾಗಿಯೂ ನಿಮ್ಮ ಶತ್ರುಗಳಿಗೆ ಮಾರಿಕೊಳ್ಳಬೇಕೆಂದಿದ್ದರೂ, ಕೊಂಡುಕೊಳ್ಳುವವರು ಇರುವುದಿಲ್ಲ.


ಆದುದರಿಂದ ಹಸಿವೆಯಲ್ಲಿ, ದಾಹದಲ್ಲಿ, ಬಡತನದಲ್ಲಿ ಬಟ್ಟೆಬರೆ ಏನೂ ಇಲ್ಲದೆ, ಯೆಹೋವ ದೇವರು ನಿಮ್ಮ ಮೇಲೆ ಕಳುಹಿಸುವ ಆ ಶತ್ರುಗಳಿಗೇ ನೀವು ಸೇವಕರಾಗಬೇಕಾಗುವುದು. ಯೆಹೋವ ದೇವರು ನಿಮ್ಮನ್ನು ನಾಶಮಾಡುವವರೆಗೆ ಕಬ್ಬಿಣದ ನೊಗವನ್ನು ನಿಮ್ಮ ಮೇಲೆ ಹೊರಿಸುವರು.


ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು.


ಅವರು ಅವನನ್ನು ಸೆರೆಯಾಗಿ ಒಯ್ದ ಸ್ಥಳದಲ್ಲಿಯೇ ಸಾಯುವನು. ಅವನು ಈ ದೇಶವನ್ನು ಇನ್ನು ನೋಡುವುದಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು