ಯಾಜಕಕಾಂಡ 26:39 - ಕನ್ನಡ ಸಮಕಾಲಿಕ ಅನುವಾದ39 ನಿಮ್ಮಲ್ಲಿ ಉಳಿದವರು ತಮ್ಮ ಅಕ್ರಮದಿಂದ ನಿಮ್ಮ ಶತ್ರುಗಳ ದೇಶದಲ್ಲಿ ಕ್ಷೀಣವಾಗುವರು, ತಮ್ಮ ಪಿತೃಗಳ ಅಕ್ರಮಗಳಿಂದ ಅವರ ಸಂಗಡ ಕ್ಷೀಣವಾಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ಮತ್ತು ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ನಿಮ್ಮಲ್ಲಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪಿತೃಗಳ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷೀಣವಾಗಿ ಹೋಗುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಆದ್ದರಿಂದ ನಿಮ್ಮಲ್ಲಿ ಜೀವಂತವಾಗಿ ಉಳಿದವರು ತಮ್ಮ ಪಾಪದ ದೆಸೆಯಿಂದಲೂ ತಮ್ಮ ಪೂರ್ವಿಕರ ಪಾಪದ ದೆಸೆಯಿಂದಲೂ ಅವರಂತೆಯೇ ಶತ್ರುಗಳ ದೇಶಗಳಲ್ಲಿ ಕ್ಷಯಿಸಿಹೋಗುವರು. ಅಧ್ಯಾಯವನ್ನು ನೋಡಿ |
ನಿಮ್ಮಲ್ಲಿ ತಪ್ಪಿಸಿಕೊಂಡವರು, ತಾವು ಸೆರೆಯಾಗಿ ಹೋಗುವಾಗ ಜನಾಂಗಗಳಲ್ಲಿ ನನ್ನನ್ನು ಜ್ಞಾಪಕಮಾಡಿಕೊಳ್ಳುವರು. ಅನ್ಯದೇವತೆಗಳಲ್ಲಿ ವಿಶ್ವಾಸವಿಟ್ಟು, ನನ್ನನ್ನೂ ತೊರೆದ ತಮ್ಮ ಹೃದಯವನ್ನು ಮತ್ತು ಅನ್ಯ ದೇವರ ವಿಗ್ರಹಗಳಲ್ಲಿ ಮೋಹಗೊಂಡ ತಮ್ಮ ಕಣ್ಣುಗಳನ್ನು ಮುರಿದವನು ನಾನೇ ಎಂಬುದಾಗಿ ಜ್ಞಾಪಕಮಾಡಿಕೊಳ್ಳುವರು. ಅವರು ತಮ್ಮ ಅಸಹ್ಯ ಕಾರ್ಯಗಳನ್ನು ಮಾಡುವ ಕೇಡುಗಳ ನಿಮಿತ್ತ ತಮ್ಮ ಬಗ್ಗೆ ತಾವೇ ಅಸಹ್ಯಪಡುವರು.